Connect with us

ನಿಧನ ವಾರ್ತೆ

Bangalore-ಬೆಂಗಳೂರು: ಮಕ್ಕಳಿಗೆ ಹೊರೆಯಾಗಬಾರದೆಂದು ಕಠಿಣ ನಿರ್ಧಾರ; ಪತ್ನಿಯನ್ನು ಕೊಂದು 85ರ ವೃದ್ಧ ಆತ್ಮಹತ್ಯೆ

Published

on

Ad Widget

Ad Widget

Ad Widget

Ad Widget

ಬದುಕಿನ ಸಂಧ್ಯಾಕಾಲದಲ್ಲಿ ಕಾಡುತ್ತಿದ್ದ ಅನಾರೋಗ್ಯ ಹಾಗೂ ಅಸಹಾಯಕತೆಯಿಂದ ಬೇಸತ್ತು 85 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಬಿಹಾರ ಮೂಲದ ಸುಮಿತ್ರಾ ದೇವಿ (77) ಹಾಗೂ ನಂದನ್ ಪ್ರಸಾದ್ (85) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಬದುಕಿನ ಸಂಧ್ಯಾಕಾಲದಲ್ಲಿ ಕಾಡುತ್ತಿದ್ದ ಅನಾರೋಗ್ಯ ಹಾಗೂ ಅಸಹಾಯಕತೆಯಿಂದ ಬೇಸತ್ತು 85 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಬಿಹಾರ ಮೂಲದ ಸುಮಿತ್ರಾ ದೇವಿ (77) ಹಾಗೂ ನಂದನ್ ಪ್ರಸಾದ್ (85) ಎಂದು ಗುರುತಿಸಲಾಗಿದೆ. ಇವರು ರಾಚೇನಹಳ್ಳಿ ಕೆರೆ ಸಮೀಪದ ಚೊಕ್ಕನಾಯಕನಹಳ್ಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ತಮ್ಮ ಮಗ ಕಿರಣ್ ಕುಮಾರ್ ಅವರ ಕುಟುಂಬದೊಂದಿಗೆ ವಾಸವಾಗಿದ್ದರು.

Ad Widget

Ad Widget <> Ad Widget

ಘಟನೆಯ ಹಿನ್ನೆಲೆ:
ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಕಿರಣ್ ಕುಮಾರ್, ತಮ್ಮ ವೃದ್ಧ ಪೋಷಕರನ್ನು ಇತ್ತೀಚೆಗಷ್ಟೇ ಬಿಹಾರದಿಂದ ಬೆಂಗಳೂರಿಗೆ ಕರೆತಂದು ಆರೈಕೆ ಮಾಡುತ್ತಿದ್ದರು. ನಂದನ್ ಪ್ರಸಾದ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೆ, ಸುಮಿತ್ರಾ ದೇವಿ ಅವರು ವಯೋಸಹಜ ಅಂಧತ್ವ ಹಾಗೂ ಕಿವುಡುತನಕ್ಕೆ ಒಳಗಾಗಿದ್ದರು. ತಮ್ಮ ಅನಾರೋಗ್ಯದ ಕಾರಣದಿಂದ ಮಕ್ಕಳಿಗೆ ಹೊರೆಯಾಗಬಾರದು ಎಂಬ ಕೊರಗಿನಿಂದ ಈ ದಂಪತಿ ಇಂತಹ ಕಠಿಣ ನಿರ್ಧಾರ ಕೈಗೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಡೆದದ್ದೇನು?:
ಬಿಹಾರದಲ್ಲಿ ಸಂಬಂಧಿಕರ ಮದುವೆ ಇದ್ದ ಕಾರಣ ಕಿರಣ್ ಕುಮಾರ್ ಅವರ ಪತ್ನಿ ಮತ್ತು ಮಗ ಊರಿಗೆ ತೆರಳಿದ್ದರು. ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ನಂದನ್ ಪ್ರಸಾದ್, ತಡರಾತ್ರಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಬಳಿಕ ತಾವೂ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

Ad Widget

ಬೆಳ್ಳಂಬೆಳಗ್ಗೆ ಬಯಲಾದ ದುರಂತ:
ಮಂಗಳವಾರ ಬೆಳಗ್ಗೆ ತಿಂಡಿ ತಯಾರಿಸಿದ ಕಿರಣ್ ಕುಮಾರ್, ಪೋಷಕರನ್ನು ಕರೆಯಲು ಕೊಠಡಿಯ ಬಾಗಿಲು ತಟ್ಟಿದ್ದಾರೆ. ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಆತಂಕಗೊಂಡು ಸುತ್ತಿಗೆಯಿಂದ ಬಾಗಿಲು ಒಡೆದು ನೋಡಿದಾಗ, ತಂದೆ ನೇಣು ಬಿಗಿದ ಸ್ಥಿತಿಯಲ್ಲಿ ಹಾಗೂ ತಾಯಿ ಹಾಸಿಗೆಯ ಮೇಲೆಯೇ ಮೃತಪಟ್ಟಿರುವುದು ಕಂಡುಬಂದಿದೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!