ಬಿಗ್ ನ್ಯೂಸ್
Puttur-ಪುತ್ತೂರು: ನಾಪತ್ತೆಯಾದ ನಾಯಿ ಪತ್ತೆ ಹಚ್ಚಿಕೊಟ್ಟ ವ್ಯಕ್ತಿಗೆ ರೂ. 50 ಸಾವಿರ ಬಹುಮಾನ ಹಸ್ತಾಂತರ
ಸಾಕುಪ್ರಾಣಿಗಳ ಮೇಲಿನ ಪ್ರೀತಿ ಎಂತಹದ್ದು ಎಂಬುದಕ್ಕೆ ಪುತ್ತೂರಿನಲ್ಲಿ ಒಂದು ಅಪರೂಪದ ಘಟನೆ ಸಾಕ್ಷಿಯಾಗಿದೆ. ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ, ಶ್ವಾನಪ್ರಿಯ ಗಣೇಶ್ ಕೇರ ಅವರು ತಮ್ಮ ನಾಪತ್ತೆಯಾಗಿದ್ದ ಸಾಕುನಾಯಿಯನ್ನು ಪತ್ತೆ ಹಚ್ಚಿಕೊಟ್ಟ ಸ್ಥಳೀಯ ನಿವಾಸಿ ಪುರಂದರ ಅವರಿಗೆ ಘೋಷಿತ 50 ಸಾವಿರ ರೂಪಾಯಿಗಳ ಬಹುಮಾನದ ಚೆಕ್ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಪುತ್ತೂರು: ಸಾಕುಪ್ರಾಣಿಗಳ ಮೇಲಿನ ಪ್ರೀತಿ ಎಂತಹದ್ದು ಎಂಬುದಕ್ಕೆ ಪುತ್ತೂರಿನಲ್ಲಿ ಒಂದು ಅಪರೂಪದ ಘಟನೆ ಸಾಕ್ಷಿಯಾಗಿದೆ. ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ, ಶ್ವಾನಪ್ರಿಯ ಗಣೇಶ್ ಕೇರ ಅವರು ತಮ್ಮ ನಾಪತ್ತೆಯಾಗಿದ್ದ ಸಾಕುನಾಯಿಯನ್ನು ಪತ್ತೆ ಹಚ್ಚಿಕೊಟ್ಟ ಸ್ಥಳೀಯ ನಿವಾಸಿ ಪುರಂದರ ಅವರಿಗೆ ಘೋಷಿತ 50 ಸಾವಿರ ರೂಪಾಯಿಗಳ ಬಹುಮಾನದ ಚೆಕ್ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಘಟನೆಯ ಹಿನ್ನೆಲೆ:
ಗಣೇಶ್ ಕೇರ ಅವರು ‘ಚಿನ್ನು’ ಎಂಬ ಹೆಸರಿನ ದೇಶಿ ತಳಿಯ ನಾಯಿಯನ್ನು ರಸ್ತೆ ಬದಿಯಿಂದ ತಂದು ಅತ್ಯಂತ ಪ್ರೀತಿಯಿಂದ ಸಾಕಿದ್ದರು. ಒಮ್ಮೆ ಈ ನಾಯಿಗೆ ಪಿಟ್ಸ್ ಕಾಯಿಲೆ ಬಂದು ಕಾಲುಗಳು ಸ್ವಾಧೀನ ಕಳೆದುಕೊಂಡಿದ್ದಾಗಲೂ, ಗಣೇಶ್ ಅವರು ಸೂಕ್ತ ಚಿಕಿತ್ಸೆ ಕೊಡಿಸಿ ಅದನ್ನು ಗುಣಪಡಿಸಿದ್ದರು. ಆದರೆ, ಇತ್ತೀಚೆಗೆ ಈ ನಾಯಿ ಹಠಾತ್ತನೆ ನಾಪತ್ತೆಯಾಗಿತ್ತು. ಇದರಿಂದ ಕಂಗಾಲಾದ ಗಣೇಶ್, ತಮ್ಮ ನಾಯಿಯನ್ನು ಹುಡುಕಿಕೊಟ್ಟವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ಸಾಮಾಜಿಕ ಜಾಲತಾಣ ಮತ್ತು ಬ್ಯಾನರ್ಗಳ ಮೂಲಕ ಪ್ರಕಟಿಸಿದ್ದರು.
ಪತ್ತೆಯಾದದ್ದು ಹೇಗೆ?:
ಮನೆಯ ಆಸುಪಾಸಿನಲ್ಲೇ ಇದ್ದರೂ ನಾಯಿ ಮಾಲೀಕರ ಕಣ್ಣಿಗೆ ಬಿದ್ದಿರಲಿಲ್ಲ. ನಾಪತ್ತೆಯಾದ ಮೂರು ದಿನಗಳ ನಂತರ ಪುರಂದರ ಅವರು ನಾಯಿಯನ್ನು ಗುರುತಿಸಿ ಮಾಹಿತಿ ನೀಡಿದ್ದರು. ಆದರೆ ಮಾಲೀಕರು ಬರುವಷ್ಟರಲ್ಲಿ ನಾಯಿ ಅಲ್ಲಿಂದ ಬೇರೆಡೆ ಹೋಗಿತ್ತು. ಎರಡು ದಿನಗಳ ಹಿಂದೆ ನಾಯಿ ಮತ್ತೆ ಕಾಣಿಸಿಕೊಂಡಾಗ, ಪುರಂದರ ಅವರು ತಕ್ಷಣ ಅದನ್ನು ಹಿಡಿದು ಗಣೇಶ್ ಅವರಿಗೆ ಒಪ್ಪಿಸಿದ್ದಾರೆ.
ಕೊಟ್ಟ ಮಾತು ಉಳಿಸಿಕೊಂಡ ಮಾಲೀಕ:
ತಮ್ಮ ನೆಚ್ಚಿನ ‘ಚಿನ್ನು’ ಮರಳಿ ಸಿಕ್ಕ ಖುಷಿಯಲ್ಲಿ ಗಣೇಶ್ ಅವರು ಪುರಂದರ ಅವರನ್ನು ಮನೆಗೆ ಕರೆಸಿ, ತಾವು ಘೋಷಿಸಿದಂತೆ 50 ಸಾವಿರ ರೂ.ಗಳ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ. ಪ್ರಾಣಿಪ್ರಿಯರಾಗಿರುವ ಗಣೇಶ್ ಅವರು ಪ್ರಸ್ತುತ ತಮ್ಮ ಮನೆಯಲ್ಲಿ ವಿವಿಧ ತಳಿಗಳ ಸುಮಾರು 30 ನಾಯಿಗಳನ್ನು ಸಾಕಿ ಸಲಹುತ್ತಿದ್ದಾರೆ. ಅವರ ಈ ಶ್ವಾನಪ್ರೇಮ ಮತ್ತು ಕೊಟ್ಟ ಮಾತು ಉಳಿಸಿಕೊಂಡ ರೀತಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಗ್ ನ್ಯೂಸ್
Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.
ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ
Bank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.
ಯಾದಗಿರಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.
ಕಳೆದ ಆರೇಳು ತಿಂಗಳ ಹಿಂದೆ 10 ಗ್ರಾಂ ಚಿನ್ನದ ಬೆಲೆ ₹1.75 ಲಕ್ಷದಿಂದ ₹1.85 ಲಕ್ಷದವರೆಗೆ ತಲುಪಿದ್ದ ಸಂದರ್ಭದಲ್ಲಿ ಅನೇಕರು ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಹೆಚ್ಚಿನ ಮೊತ್ತದ ಸಾಲ ಪಡೆದಿದ್ದರು. ಇದೀಗ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಅಂತಹ ಗ್ರಾಹಕರನ್ನು ಬ್ಯಾಂಕ್ಗಳು ಸಂಪರ್ಕಿಸಿ, ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಹಣ ಪಾವತಿಸುವಂತೆ ಸೂಚಿಸುತ್ತಿವೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹30,000 ಇಳಿಕೆಯಾಗಿರುವುದು ಬ್ಯಾಂಕ್ಗಳ ಆತಂಕಕ್ಕೆ ಪ್ರಮುಖ ಕಾರಣವಾಗಿದೆ. ಚಿನ್ನದ ಮೌಲ್ಯ ಕುಸಿದಂತೆ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತವಾದ ಲೋನ್ ಟು ವ್ಯಾಲ್ಯೂ (LTV) ನಿಗದಿತ ಮಿತಿಯನ್ನು ಮೀರಿರುವ ಸಾಧ್ಯತೆಯಿದೆ. ಹೀಗಾಗಿ ವಿಶೇಷವಾಗಿ ಖಾಸಗಿ ಬ್ಯಾಂಕ್ಗಳು ಗ್ರಾಹಕರಿಗೆ ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಅಥವಾ ಹೆಚ್ಚುವರಿ ಚಿನ್ನವನ್ನು ಅಡವಿಡುವಂತೆ ಸೂಚಿಸುತ್ತಿವೆ.
ಚಿನ್ನದ ಮೌಲ್ಯ ಕುಸಿತ; ಸಾಲಗಾರರಿಗೆ ಹೆಚ್ಚುವರಿ ಹೊರೆ
ಉದಾಹರಣೆಗೆ, ಚಿನ್ನದ ಬೆಲೆ 10 ಗ್ರಾಂಗೆ ₹1.85 ಲಕ್ಷ ಇದ್ದಾಗ ₹5 ಲಕ್ಷ ಮೌಲ್ಯದ ಚಿನ್ನಾಭರಣ ಅಡವಿಟ್ಟು ₹3.75 ಲಕ್ಷದಿಂದ ₹4 ಲಕ್ಷದವರೆಗೆ ಸಾಲ ಪಡೆದಿದ್ದರೆ, ಇದೀಗ ಚಿನ್ನದ ಬೆಲೆ ಕುಸಿದಿರುವುದರಿಂದ ಅಡವಿಟ್ಟ ಆಭರಣಗಳ ಮೌಲ್ಯವೂ ಕಡಿಮೆಯಾಗಿರುತ್ತದೆ. ಇದರಿಂದ ಸಾಲದ ಮೊತ್ತಕ್ಕೆ ಹೋಲಿಸಿದರೆ ಚಿನ್ನದ ಮೌಲ್ಯ ಕಡಿಮೆಯಾಗುವ ಪರಿಸ್ಥಿತಿ ಎದುರಾಗಬಹುದು.
ಇನ್ನೂ ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂಬ ಆತಂಕವೂ ಸಾಲಗಾರರ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಬ್ಯಾಂಕ್ಗಳು ಗ್ರಾಹಕರಿಗೆ ತಕ್ಷಣ ಅಗತ್ಯ ಮಾರ್ಜಿನ್ ಮೊತ್ತವನ್ನು ಪಾವತಿಸಿ ಸಾಲದ ಖಾತೆಯನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸುತ್ತಿವೆ.
ಹಣ ಪಾವತಿಸದಿದ್ದರೆ ಒಡವೆ ಹರಾಜು?
ಈ ಕುರಿತು ಮಾತನಾಡಿರುವ ಖಾಸಗಿ ಬ್ಯಾಂಕ್ನ ಪ್ರಮುಖರೊಬ್ಬರು, ಚಿನ್ನದ ಬೆಲೆ ಕುಸಿತದಿಂದ ಬ್ಯಾಂಕ್ಗಳಿಗೆ ನಷ್ಟವಾಗಬಾರದು ಎಂಬ ಉದ್ದೇಶದಿಂದ ಗೋಲ್ಡ್ ಲೋನ್ ಪಡೆದ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಗ್ರಾಹಕರು ನಿಗದಿತ ಸಮಯದಲ್ಲಿ ಸ್ಪಂದಿಸದಿದ್ದರೆ ಬ್ಯಾಂಕ್ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಅಡವಿಟ್ಟ ಚಿನ್ನವನ್ನು ಹರಾಜು ಹಾಕುವ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಚಿನ್ನದ ಬೆಲೆ ಇಳಿಕೆ ಬಗ್ಗೆ ಮೋದಿ ಹೇಳಿಕೆ
ಇತ್ತೀಚೆಗೆ ಚಿನ್ನದ ಬೆಲೆ ಇಳಿಕೆಯ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚಿನ್ನ ಖರೀದಿಸದಂತೆ ತಾವು ನೀಡಿದ್ದ ಸಲಹೆಯಿಂದ ಜನರ ಹಣ ಉಳಿತಾಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಚೇಂಬರ್ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿ ಕೂಡ ಪ್ರಧಾನಿಯವರ ಸಲಹೆಯಿಂದ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದೆ ಎಂದು ಪತ್ರ ಬರೆದು ಅಭಿನಂದಿಸಿತ್ತು.
ನ.23ರ ಸೋಮವಾರ ಯಾದಗಿರಿಯಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹1.31 ಲಕ್ಷ ಇತ್ತು ಎಂದು ವರದಿಯಾಗಿದೆ.
ಒಟ್ಟಿನಲ್ಲಿ, ಚಿನ್ನದ ಬೆಲೆ ಏರಿಕೆಯ ಸಂದರ್ಭದಲ್ಲಿ ಹೆಚ್ಚಿನ ಸಾಲ ಪಡೆದಿದ್ದ ಗ್ರಾಹಕರು ಇದೀಗ ಬೆಲೆ ಇಳಿಕೆಯ ಪರಿಣಾಮವಾಗಿ ಹೆಚ್ಚುವರಿ ಹಣ ಹೊಂದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬ್ಯಾಂಕ್ಗಳ ಸೂಚನೆ ಪಾಲಿಸದಿದ್ದರೆ ತಮ್ಮ ಅಮೂಲ್ಯ ಆಭರಣಗಳನ್ನೇ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ.
ಮಂಗಳೂರು
Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.
ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.
ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.
ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.
ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.
ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಅಪರಾಧ24 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್21 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ21 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು22 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
Uncategorized12 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ17 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ22 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು23 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















