ಬಿಗ್ ನ್ಯೂಸ್
Vitla-ವಿಟ್ಲ: ಮೆಸ್ಕಾಂ ಜನಸಂಪರ್ಕ ಸಭೆ: “ಮಳೆ ಹನಿ ಬಿದ್ರೂ ಕರೆಂಟ್ ಕಟ್”; ಮೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಹಕರ ಆಕ್ರೋಶ
ಬಿಲ್ಲಿಂಗ್ ವ್ಯವಸ್ಥೆಯಲ್ಲಿ ಆದುನಿಕ ತಂತ್ರಜ್ಞಾನಗಳನ್ನು ಅಳವಡಿಸಿದ ರೀತಿಯಲ್ಲೇ ಜನರಿಗೆ ನೀಡುವ ಸೇವೆಯನ್ನು ಉತ್ತಮ ಗೊಳಿಸಬೇಕು. ಬುಧವಾರ ಟ್ರೀ ಕಟ್ಟಿಂಗ್ ಮಾಡಿದರೂ, ಕೆಲವು ಭಾಗದಲ್ಲಿ ದಿನಕ್ಕೆ 30, 40 ಬಾರಿ ಕರೆಂಟ್ ಹೋಗುತ್ತಿದೆ. ಮಳೆ ಹನಿ ಹಾಕಿದರೆ, ವಿದ್ಯುತ್ ಕಡಿತ ಆಗುತ್ತಿದ್ದು, ಪಾಲ್ಟ್ ಅನ್ನು ಯಾವಾಗ ಸರಿಮಾಡುವಿರಿ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಹೇಳಿದರು.
ವಿಟ್ಲ: ಬಿಲ್ಲಿಂಗ್ ವ್ಯವಸ್ಥೆಯಲ್ಲಿ ಆದುನಿಕ ತಂತ್ರಜ್ಞಾನಗಳನ್ನು ಅಳವಡಿಸಿದ ರೀತಿಯಲ್ಲೇ ಜನರಿಗೆ ನೀಡುವ ಸೇವೆಯನ್ನು ಉತ್ತಮ ಗೊಳಿಸಬೇಕು. ಬುಧವಾರ ಟ್ರೀ ಕಟ್ಟಿಂಗ್ ಮಾಡಿದರೂ, ಕೆಲವು ಭಾಗದಲ್ಲಿ ದಿನಕ್ಕೆ 30, 40 ಬಾರಿ ಕರೆಂಟ್ ಹೋಗುತ್ತಿದೆ. ಮಳೆ ಹನಿ ಹಾಕಿದರೆ, ವಿದ್ಯುತ್ ಕಡಿತ ಆಗುತ್ತಿದ್ದು, ಪಾಲ್ಟ್ ಅನ್ನು ಯಾವಾಗ ಸರಿಮಾಡುವಿರಿ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಹೇಳಿದರು.
ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ನಡೆದ ವಿಟ್ಲ ಉಪ ವಿಭಾಗ ಮಟ್ಟದ ಜನ ಸಂಪರ್ಕ ಸಭೆಯಲ್ಲಿ ಸಮಸ್ಯೆಯನ್ನು ತಿಳಿಸಿದರು.
ಅಳಿಕೆ ಕೆಳಗಿನ ಮುಳಿಯದಲ್ಲಿ ಟಿಸಿ ದುರಸ್ಥಿಗೆ 15ದಿನ ತೆಗೆದುಕೊಳ್ಳಲಾಗಿದೆ. ಪೆರುವಾಯಿ ಭಾಗದಲ್ಲಿ ಸಂಜೆ ಸಮಯ ಹೋದ ವಿದ್ಯುತ್ ಮಾರನೇ ದಿನ ಬೆಳಗ್ಗೆ ಬರುತ್ತಿದೆ. ಸರಿಯಾದ ಸ್ಪಂದನೆಯೂ ಆಗುತ್ತಿಲ್ಲ ಎಂದು ಹೇಳಿದರು.
ಕನ್ಯಾನ ಕರೋಪಾಡಿಯ ಭಾಗಕ್ಕೆ ಸಾಲೆತ್ತೂರು ಕೇಂದ್ರದಿಂದ ವಿತರಣೆ ನಡೆಯುವುದರಿಂದ ಸಮಸ್ಯೆ ನಿವಾರಣೆಯಾಗಿದೆ. ಕೇಪು ಸಬ್ ಸ್ಟೇಷನ್ ಬೇಗ ಆದರೆ, ಕೆಲವು ಸಮಸ್ಯೆ ಕಡಿಮೆಯಾಗುತ್ತದೆ. ಇದನ್ನು ತ್ವರಿತವಾಗಿ ನಡೆಯುವಂತೆ ಕ್ರಮ ವಹಿಸಬೇಕು ಎಂದು ಹೋರಾಟಗಾರ ರಾಮಣ್ಣ ಪಾಳಿಗೆ ಆಗ್ರಹಿಸಿದರು. ಕನ್ಯಾನ ಶಾಖೆ ಕಟ್ಟಡದ ಕಾಮಗಾರಿಯ ಬಗ್ಗೆ ಇಲಾಖೆ ಸೂಕ್ತ ರೀತಿಯಲ್ಲಿ ತಿಳಿಸುವುದು ಉತ್ತಮ. ಸೋರು ಹಂತಕ್ಕೆ ತೆರಳಿದರೆ, ಒಳ್ಳೆಯದಾಗಿ ಸರಿ ಪಡಿಸುವುದು ಉತ್ತಮ. ಒಂದು ವರ್ಷದಲ್ಲಿ ಮಳೆ ನೀರು ಸೋರುವಂತೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು.ಇಲ್ಲದೇ ಹೋದರೆ ಅಗತ್ಯ ಕ್ರಮ ಗ್ರಾಹಕರು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೋರಾಟಗಾರ ಮುರುವ ಮಹಾಬಲ ಭಟ್ ಎಚ್ಚರಿಸಿದರು.
ವಿಟ್ಲ ಮುಡ್ನೂರು ಪೈಸಾರಿ ಭಾಗದಲ್ಲಿ ರಾತ್ರಿ ಸಮಯ ಸ್ವಿಚ್ ಆಫ್ ಮಾಡಿದರೂ, ವಿದ್ಯುತ್ ಬಲ್ಬ್ ಉರಿಯುತ್ತಿದೆ. ಒಕ್ಕೆತ್ತೂರು, ಕಳುವಾಜೆ ಭಾಗದಲ್ಲಿ ತಂತಿ ಹಳೆದಾಗಿ ತುಂಡಾಗಿ ರಸ್ತೆಗೆ ಬೀಳುತ್ತಿದ್ದು, ಮಕ್ಕಳಿಗೆ ಅಪಾಯ ಆಗುವ ಸಾಧ್ಯತೆಯಿದೆ. ಟೌನ್ ಫೀಡರ್ ನಿಂದ ಬೇರೆ ಕಡೆಗೆ ಸಂಪರ್ಕ ನೀಡಿ, ಗ್ರಾಮೀಣ ಭಾಗದಲ್ಲಿ ಸಣ್ಣ ಸಮಸ್ಯೆಯಾದರೂ ಎಲ್ಲರಿಗೆ ವಿದ್ಯುತ್ ಕಡಿತ ಆಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಂಪರ್ಕಗಳಿಗೆ ತೀವ್ರ ತೊಂದರೆಯಾಗುತ್ತಿದೆ. ವಿಟ್ಲ ಭಾಗದಲ್ಲಿ ನೌಕರರ ಸಮಸ್ಯೆಯಿದೆಯಾ? ರಾತ್ರಿ ಹೊತ್ತು ಎಷ್ಟು ಲೈನ್ ಮ್ಯಾನ್ ಹಾಕಲಾಗಿದೆ ಎಂದು ಪ್ರಶ್ನಿಸಿದರು.
ಬೈರಿಕಟ್ಟೆ ಕಾಡಮನೆ ಭಾಗದಲ್ಲಿ ವಿದ್ಯುತ್ ಪರಿವರ್ತಕವಿಲ್ಲದೆ, ಮಳೆಗಾಲದಲ್ಲೂ ತ್ರಿಫೇಸ್ ಪಂಪ್ ಚಾಲು ಆಗುತ್ತಿಲ್ಲ. ಐವತ್ತು ಮನೆ ಇದ್ದು, ನಾಲ್ಕು ವರ್ಷದಿಂದ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಸಿಂಗಲ್ ಫೇಸ್ ಪಂಪ್ ಕೂಡಾ ರನ್ ಆಗದ ಸ್ಥಿತಿಯಿದ್ದು, ತ್ವರಿತ ಪರಿಹಾರವಾಗದೇ ಹೋದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ನಾಗರೀಕರು ಎಚ್ಚರಿಸಿದರು. ಇಲಾಖೆಯಿಂದ ಸ್ಥಳೀಯ ಆಡಳಿತದ ಸಮಸ್ಯೆಗಳಿಗೆ ತ್ವರಿತ ಸಹಕಾರ ನೀಡಬೇಕು. ಗ್ಯಾರೆಂಟಿ ಯೋಜನೆಯ ಹೆಸರಿನಲ್ಲಿ ಜನರನ್ನು ಅಲೆದಾಡಿಸುವುದು ಸರಿಯಲ್ಲ. ಸತ್ತವರ ಹಾಗೂ ದುರುಪಯೋಗ ಪಡಿಸುವ ವಿಚಾರದಲ್ಲಿ ಸೂಕ್ತ ಕ್ರಮ ಇದಕ್ಕಿಂತ ಮೊದಲು ಪರಿಹಾರ ಕಂಡುಕೊಳ್ಳಬೇಕು. ಹಿರಿಯ ಅಧಿಕಾರಿಗಳು ಗ್ರಾಮ ಭಾಗದಲ್ಲಿ ಮನೆಮಾಡಿ ಕೂರಬೇಕು ಆಗ ಇಲ್ಲಿನ ನೈಜ ಸಮಸ್ಯೆಗಳು ಗಮನಕ್ಕೆ ಬರುತ್ತದೆ ಎಂದು ಸಾರ್ವಜನಿಕರು ಹೇಳಿದರು.
ಉಕ್ಕುಡದಲ್ಲಿ ಆಗಾಗ ವಿದ್ಯುತ್ ಕೈಕೊಡುತ್ತಿದೆ. ಮೋಡ ಹಾಕಿದರೆ ವಿದ್ಯುತ್ ಹೋಗುತ್ತದೆ. ರಸ್ತೆಯ ಬದಿಯಿಂದ ಕಂಬಗಳನ್ನು ದೂರದಲ್ಲಿ ಅಪಾಯ ಆಗದ ರೀತಿ ಅಳವಡಿಸುವುದು ಉತ್ತಮ. ಬುಧವಾರ ಮಾಡುವ ಕೆಲಸವನ್ನು ಮೊದಲೇ ತಿಳಿಸಿ, ಸ್ಥಳವನ್ನು ನಿಗದಿ ಪಡಿಸುವುದು ಬೇಕು. ಮಾಡುವ ಕೆಲಸದಲ್ಲಿ ಇನ್ನಷ್ಟು ಸುದಾರಣೆಯ ಅವಶ್ಯಕತೆಯಿದೆ. ವಿಟ್ಲದಲ್ಲಿ ನಡೆಸುವ ಜನ ಸಂಪರ್ಕ ಸಭೆಯನ್ನು ಮಾಣಿ, ಪೆರ್ನೆ ಭಾಗಕ್ಕೂ ಆದ್ಯತೆ ನೀಡಬೇಕು. ಹೆದ್ದಾರಿಯ ಬದಿಯಲ್ಲಿ 40ಅಡಿ ಎತ್ತರದಲ್ಲಿ ಇರುವ ಕಂಬಗಳಿಗೆ ಈಗಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಗರೀಕರು ಆಗ್ರಹಿಸಿದರು.
ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷರಾಜ ಕೆ., ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ ನಾಯ್ಕ್, ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ ಗೋವಿಂದ ರಾಜು ಎ., ಲೆಕ್ಕಾಧಿಕಾರಿ ಚಂದ್ರಶೇಖರ ಉಪಸ್ಥಿತರಿದ್ದರು.
ಎಚ್ ಟಿ ಲೈನ್ ಗಳ ಕಂಬಗಳು ತುಂಡಾಗುವ ಹಂತಕ್ಕೆ ಹೋದರೂ ತ್ವರಿತವಾಗಿ ಇತ್ಯರ್ಥ ಆಗುತ್ತಿಲ್ಲ. ತಡವಾಗಿ ಬಿಲ್ ರೀಡರ್ ಮಾಡುತ್ತಿರುವುದು ಇಲಾಖೆಯ ಸಮಸ್ಯೆಯಾದರೂ ಗ್ರಾಹಕರಿಗೆ ಬಡ್ಡಿ ಹಾಕಲಾಗಿದೆ. ಸಿಬ್ಬಂದಿಗಳು ಸಮಸ್ಯೆಯ ಬಗ್ಗೆ ಸರಿಯಾಗಿ ಗಮನಿಸುತ್ತಿಲ್ಲ. ಮೆಸ್ಕಾಂ ಮೇಲಿನ ನಂಬಿಕೆ ಹೋಗುತ್ತಿದೆ. ಎಲ್ಲಾ ಕಡೆ ವಿದ್ಯುತ್ ತಂತಿಗಳಲ್ಲಿ ಗಿಡ ಗಂಟೆ ತುಂಬಿದೆ.
| ಅಶೋಕ್ ಕುಮಾರ್ ಶೆಟ್ಟಿ, ಅಧ್ಯಕ್ಷರು, ಸ್ಥಾಯಿ ಸಮಿತಿ
ಒಂದೇ ಫೀಡರ್ ನಲ್ಲಿ ೮ಫೀಡರ್ ವಯರ್ ಗಳು ಹಾದುಹೋಗಿರುವ ಕಾರಣ ಸಮಸ್ಯೆಯಾಗುತ್ತಿದೆ. ವಿಟ್ಲ ಭಾಗದಲ್ಲಿ ಯುಜಿ ಕೇಬಲ್ ಅಳವಡಿಸಲು ಯೋಜನೆ ಸಿದ್ದಪಡಿಸಲಾಗಿದೆ. ಅಪಾಯಕಾರಿ ಕಂಬಗಳ ಬದಲಾವಣೆಗೆ ತುರ್ತು ಕ್ರಮ ವಹಿಸಬೇಕು. ಹಳೆ ಮೀಟರ್ ಬದಲಾವಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಡಿದ ಗೆಲ್ಲುಗಳನ್ನು ರಸ್ತೆಯಲ್ಲಿ ಹಾಕುವುದು ಸರಿಯಲ್ಲ. ಕರ್ವೇಲು ಉಪಕೇಂದ್ರ ಸ್ಥಾಪನೆಗೆ ಲೆವೆಲಿಂಗ್ ಆಗಿದ್ದು, ಟೆಂಡರ್ ಆಗಿ ಕೆಲಸ ನಡೆಯುತ್ತಿದೆ. ತಿಂಗಳ ಮೂರನೇ ಶನಿವಾರ ಗ್ರಾಹಕರ ಸಮಾಲೋಚನಾ ಸಭೆಯನ್ನು ಸ್ಥಳೀಯ ಮಟ್ಟದಲ್ಲಿ ಮಾಡಲು ಸೂಚನೆ ನೀಡಲಾಗಿದೆ.
| ಕೃಷ್ಣರಾಜ ಕೆ., ಅಧೀಕ್ಷಕ ಇಂಜಿನಿಯರ್, ಮೆಸ್ಕಾಂ
ವಿಟ್ಲದಲ್ಲಿ ಪೀಡರ್ ಗಳು ಅಂಡರ್ ಗ್ರೌಂಡ್ ಆಗುವುದರಿಂದ ಬಹಳ ಸಮಸ್ಯೆಯ ಕಡಿಮೆಯಾಗುವ ನಿರೀಕ್ಷೆ ಇಡಲಾಗಿದೆ. ವಿಟ್ಲ ಉಪ ವಿಭಾಗಕ್ಕೆ ಮಳೆಗಾಲ ಉತ್ತಮ ಸೇವೆ ನೀಡುವುದಕ್ಕೆ ಎರಡು ವಾಹನ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವುದಕ್ಕೂ ಲೈನ್ ಮ್ಯಾನ್ ವ್ಯವಸ್ಥೆ ಮಾಡಲಾಗಿದೆ.
| ಸಂತೋಷ್ ನಾಯ್ಕ, ಕಾರ್ಯ ನಿರ್ವಾಹಕ ಇಂಜಿನಿಯರ್
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
-
ಮಂಗಳೂರು18 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ18 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ23 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ24 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಕಾರ್ಯಕ್ರಮಗಳು19 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ13 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ17 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ















