[…]" /> […]"> Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ವಿವೇಕ ಮುನ್ನುಡಿ-2026”; ಯುವ ನಾಯಕತ್ವ ಉಜ್ವಲ ಭವಿಷ್ಯದ ಅಡಿಪಾಯ: ಕೃಷ್ಣಕುಮಾರ್ ಶೆಟ್ಟಿ - Nikhara News | Kannada News Website
Connect with us

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ವಿವೇಕ ಮುನ್ನುಡಿ-2026”; ಯುವ ನಾಯಕತ್ವ ಉಜ್ವಲ ಭವಿಷ್ಯದ ಅಡಿಪಾಯ: ಕೃಷ್ಣಕುಮಾರ್ ಶೆಟ್ಟಿ

Published

on

Ad Widget

Ad Widget

Ad Widget

Ad Widget

ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆದ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಕೃಷ್ಣಕುಮಾರ್ ಶೆಟ್ಟಿ ಮಾತನಾಡಿದರು.

Ad Widget

Ad Widget

Ad Widget

Ad Widget

ವಿದ್ಯಾರ್ಥಿ ಶಕ್ತಿ ಅತ್ಯಂತ ವಿಶೇಷವಾದದ್ದು ಮತ್ತು ಪ್ರಭಾವಶಾಲಿಯಾದುದು. ಸಮರ್ಪಕವಾದ ಈ ಸಂಘಟನಾ ಶಕ್ತಿಯನ್ನು ಬಳಸಿಕೊಂಡರೆ ಸಮಾಜದಲ್ಲಿ ಧನಾತ್ಮಕವಾದ ಬೆಳವಣಿಗೆಯನ್ನು ರೂಪಿಸಬಹುದಾಗಿದೆ. ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚು-ಹೆಚ್ಚು ತೊಡಗಿಸಿಕೊಂಡಷ್ಟು ನಾಯಕತ್ವ ಗುಣ ಬೆಳೆಯಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಕೃಷ್ಣಕುಮಾರ್ ಶೆಟ್ಟಿ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆದ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಯುವಕರಿಗೆ ಸೂಕ್ತ ಮಾರ್ಗದರ್ಶನ ದೊರೆತಾಗ ಸಮಾಜದಲ್ಲಿ ಮೇಲ್ಪಂಕ್ತಿಯಲ್ಲಿ ಗುರುತಿಸಲು ಸಾಧ್ಯ. ನಿರಂತರವಾದ ಶ್ರಮ ಎಂದಿಗೂ ಸಾಧನೆಯ ತುತ್ತತುದಿಗೆ ತಲುಪಿಸುವಲ್ಲಿ ಸಹಕಾರಿಯಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಬೆಳೆಯುವಲ್ಲಿ ಯಾವುದೇ ಸಂದೇಹವಿಲ್ಲ. ಶಿಕ್ಷಣದ ಜೊತೆ ರಾಷ್ಟ್ರನಿರ್ಮಾಣದ ಜವಾಬ್ದಾರಿ ಹೊತ್ತಾಗ ಉತ್ತಮ ದೇಶ ನಿರ್ಮಿಸಲು ಸಾಧ್ಯ. ಅಂತಹ ವಿದ್ಯಾರ್ಥಿಗಳು ರಾಷ್ಟ್ರದ ಶಕ್ತಿ ಹಾಗೂ ಆಸ್ತಿಯಾಗಿ ಹೊರಹೊಮ್ಮುವಂತಾಗಲಿ ಎಂದು ಆಶಿಸಿದರು.

Ad Widget

Ad Widget <> Ad Widget

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ಮಾತನಾಡುತ್ತಾ, ನಾಯಕತ್ವ ಗುಣ ಇದ್ದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ. ನಾಯಕತ್ವ ಎಂದರೆ ಜವಾಬ್ದಾರಿ. ಅದರ ಹಾದಿ ಸುಲಭದ್ದಲ್ಲ. ಸ್ವಂತ ಸುಖಕ್ಕಿಂತ ಪರರ ಸುಖದ ಬಗೆಗೆ ಚಿಂತಿಸುವವನು ಉತ್ತಮ ನಾಯಕನಾಗುತ್ತಾನೆ. ನಾಯಕತ್ವ ಬೆಳೆಯಲು ಆತ್ಮವಿಶ್ವಾಸ ಅತೀ ಮುಖ್ಯವಾಗಿದ್ದು, ದೇಶವನ್ನು ನಡೆಸುವ, ನೇತೃತ್ವವನ್ನು ಸ್ವೀಕರಿಸುವ, ತಪ್ಪನ್ನು ಮನ್ನಿಸದೆ ಮುನ್ನಡೆಸುವ ಸಮರ್ಥ ನಾಯಕನ ಅವಶ್ಯಕತೆ ಇಂದಿನ ದಿನಗಳಿಗಿದೆ. ಸಂಸ್ಕಾರ-ಸಂಸ್ಕೃತಿ ಜೊತೆಗೂಡಿಗೊಂಡಾಗ ನಾಯಕತ್ವ ಕಳೆಗಟ್ಟುತ್ತದೆ ಎಂದು ಕಿವಿಮಾತು ಹೇಳಿದರು.

ಪ್ರಸಕ್ತ ಶೈಕ್ಷಣಿಕ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಲೇಜು ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಕೆ.ಆರ್ ದಿಶಾಂತ್ , ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ನೇಹಾ ಅನೀಶ್ ಎನ್ ಜೊತೆ ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ವರ್ಷಿಣಿ ಕ್ರೀಡಾ ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಕಾರ್ತಿಕ್ ಕೆಮ್ಮಿಂಜೆ ಹಾಗೂ ಕ್ರೀಡಾ ಜತೆ ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.

Ad Widget

Ad Widget

ನೂತನವಾಗಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿ ಹಾಗೂ ಕ್ರೀಡಾ ಪ್ರತಿನಿಧಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಪ್ರಮಾಣವಚನ ಬೋಧಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ಶೆಟ್ಟಿಗಾರ್ ಚುನಾವಣಾ ಪ್ರಕ್ರಿಯೆಯ ವರದಿಯನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ , ಕ್ರೀಡಾ ಕ್ಷೇತ್ರ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿಯರಾದ ಮಮತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ, ಸವಿತಾ ಎಸ್ ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!