Uncategorized
ಪುತ್ತೂರು ತಾಲೂಕಿನಲ್ಲಿ ಪ್ರಾರಂಭವಾಗಲಿದೆ ‘ನೇಪಿಯರ್ ಗ್ರಾಸ್’ ಎಂಬ ಹುಲ್ಲಿನಿಂದ ಉತ್ಪಾದನೆಯಾಗುವ ಜೈವಿಕ ಇಂಧನ ಘಟಕ – ಜು.12 ಕ್ಕೆ ಕಚೇರಿ ಉದ್ಘಾಟನೆ : ರೈತರು ಹುಲ್ಲು ಬೆಳೆಸಿ ಲಕ್ಷಾಂತರ ಸಂಪಾದಿಸಲು ಸುವರ್ಣವಕಾಶ
ಪುತ್ತೂರು: “ಪುತ್ತೂರು ರೈತರ ಜೈವಿಕ ಉತ್ಪಾದನಾ ಕಂಪನಿ ನಿಯಮಿತ “ಇದರ ನೂತನ ಕಚೇರಿಯ ಉದ್ಘಾಟನೆ ಮತ್ತು ಜೈವಿಕ ಇಂಧನ ಉತ್ಪಾದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜು.12 ರಂದು ಮಂಗಳವಾರ ಸಂಜೆ 3.30 ಕ್ಕೆ ಪುತ್ತೂರಿನ ಎ. ಪಿ. ಎಂ. ಸಿ ರಸ್ತೆಯ ಹಿಂದುಸ್ಥಾನ್ ಕಾಂಪ್ಲೆಕ್ಸ್ ನ 1 ನೇ ಮಹಡಿಯಲ್ಲಿ ನೂತನ ಕಚೇರಿಯ ಉದ್ಘಾಟನೆ ಮತ್ತು ಜೈವಿಕ ಇಂಧನ ಉತ್ಪಾದನೆಯ ಬಗ್ಗೆ ಮಾಹಿತಿ ಕಾರ್ಯಾಗಾರವು ನಡೆಯಲಿದೆ.
ಭಾರತದ ಹೆಮ್ಮೆಯ ವಿಜ್ಞಾನಿ , ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಸಂಶೋಧನೆಯ ತಳಹದಿಯ ಮೇಲೆ ಪರಿಸರಕ್ಕೆ ಪೂರಕವಾದ ಬಯೋ ಇಂಧನಗಳನ್ನು ಉತ್ಪಾದಿಸಲು ಭಾರತದಾದ್ಯಂತ ಆಂದೋಲನಗಳು ಕೈಗೊಂಡು ರೈತರ ಮುಖಾಂತರ ಬೆಳೆಸಿದ ನೇಪಿಯರ್ ಗ್ರಾಸ್ (ಹುಲ್ಲು) ನಲ್ಲಿ ಬಯೋ ಡೀಸೆಲ್/ ಬಯೋ ಸಿ. ಎನ್. ಜಿ/ ಬಯೋ ಅಡುಗೆ ಅನಿಲ ತಯಾರಿ ಮಾಡುವ ಯೋಜನೆಯನ್ನು ಹಾಕಿಕೊಂಡು ಭಾರತ ಸರಕಾರದ ಅಧಿಕೃತವಾಗಿ ಅನುಮತಿ ಹೊಂದಿದ ರೈತ ಉತ್ಪಾದನಾ ಸಂಸ್ಥೆ “ಮೀರಾ ಕ್ಲೀನ್ ಫ್ಯುಯೆಲ್ಸ್ ಲಿಮಿಟೆಡ್” (MCL) ನ ಆಶ್ರಯದಲ್ಲಿ “ಪುತ್ತೂರು ರೈತರ ಜೈವಿಕ ಉತ್ಪಾದನಾ ಕಂಪನಿ ನಿಯಮಿತ ” ಅಸ್ತಿತ್ವಕ್ಕೆ ಬರುತ್ತಿದೆ.
ರೈತರು ನೇಪಿಯರ್ ಹುಲ್ಲು ಬೆಳೆದು ಲಕ್ಷಾಂತರ ರೂಪಾಯಿ ಸಂಪಾದಿಸುವ ಯೋಜನೆ ಇದಾಗಿದೆ.
ಅಲ್ಲದೇ ಪ್ರತೀ ಗ್ರಾಮದಲ್ಲಿ ಒಬ್ಬ ರೈತರನ್ನು ಪ್ರವರ್ತಕರಾಗಿ ಆಯ್ಕೆಮಾಡಿ ಪ್ರತೀ ಗ್ರಾಮದಲ್ಲಿ ಜೈವಿಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಯೋಜನೆ ಹಮ್ಮಿಕೊಳ್ಳಲಾಗಿದೆ. ಪುತ್ತೂರು ತಾಲೂಕು ಅಲ್ಲದೇ ಕಡಬ , ಬೆಳ್ತಂಗಡಿ, ಮೂಡಬಿದ್ರೆ , ಬಂಟ್ವಾಳ, ಸುಳ್ಯ,ತಾಲೂಕುಗಳಲ್ಲೂ ಸಂಸ್ಥೆಯ ಶಾಖೆಗಳು ಅಸ್ತಿತ್ವಕ್ಕೆ ಬರುತ್ತಿವೆ.
ನೂತನ ಕಚೇರಿಯ ಉದ್ಘಾಟನೆ ಮತ್ತು ಜೈವಿಕ ಇಂಧನ ಉತ್ಪಾದನೆಯ ಬಗ್ಗೆ ಮಾಹಿತಿ ಕಾರ್ಯಾಗಾರವು ಜು.12 ನೇ ಮಂಗಳವಾರ ಸಂಜೆ 3.30 ರಂದು ನಡೆಯಲಿದ್ದು, ನೂತನ ಕಚೇರಿಯ ಉದ್ಘಾಟನೆ ಮತ್ತು ಕಾರ್ಯಾಗಾರದ ಸಭಾಧ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ನಡೆಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ , ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ , ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಗೌರವ ಉಪಸ್ಥಿತಿಯಲ್ಲಿ ಪುತ್ತೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ , ಪುತ್ತೂರು ತಹಶೀಲ್ದಾರರು ನಿಸರ್ಗ ಪ್ರಿಯ , ಪುತ್ತೂರು ನಗರಸಭಾ ಪೌರಾಯುಕ್ತರಾದ ಮಧು ಯಸ್. ಮನೋಹರ್ , ಪುತ್ತೂರು ಸಹಾಯಕ ಅರಣ್ಯ
ಸಂರಕ್ಷಣಾಧಿಕಾರಿ ಕಾರ್ಯಪ್ಪ , ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೊಟ್ಟು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಶ್ರವಣ್ ಮಾನೆ ಸೀನಿಯರ್ ಪ್ರೈಮ್ ಬಿಡಿಎ ಯಂ.ಸಿ.ಎಲ್., ಮುಂಬೈ, ಉದಯ ಶೆಟ್ಟಿ ಬಿಸಿನೆಸ್ ಮಾನೆ ಗ್ರೂಪ್ ಯಂ.ಸಿ.ಎಲ್ ಮುಂಬೈ, ಶ್ರೀ ವಸಂತ ಎನ್.ಪೂಜಾರಿ ಸೀನಿಯರ್ ಬಿಡಿಎ ಯಂ.ಸಿ.ಎಲ್
ಬೆಳ್ತಂಗಡಿ ,ಮಾಹಿತಿ ಕಾರ್ಯಗಾರದಲ್ಲಿ ಸಮಗ್ರ ಮಾಹಿತಿಯನ್ನು ಕೊಡಲಿದ್ದಾರೆ.
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
ಕ್ರೈಂ18 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ18 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು17 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಸ್ಥಳೀಯ12 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ16 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಬಿಗ್ ನ್ಯೂಸ್18 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ13 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ17 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















