Connect with us

ಕಾರ್ಯಕ್ರಮಗಳು

Puttur-ಗ್ರಾಮಜನ್ಯ ಆಧುನಿಕ ಶೈತ್ಯಾಗಾರ ಲೋಕಾರ್ಪಣೆ; ಪುತ್ತೂರಿನ ಕೃಷಿ ಹಾಗೂ ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲು

Published

on



Ad Widget

Ad Widget

Ad Widget

Ad Widget

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ನಿಯಮಿತ, ಹಿಂಡಾರು–ಮುಂಡೂರು ವತಿಯಿಂದ ನಿರ್ಮಿಸಲಾದ ಆಧುನಿಕ ಶೈತ್ಯಾಗಾರವನ್ನು ಇಂದು ನಡೆದ ಸಮಾರಂಭದಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಶೈತ್ಯಾಗಾರದ ಪ್ರವೇಶ ದ್ವಾರವನ್ನು ತೆರೆಯುವ ಮೂಲಕ ಸಾರ್ವಜನಿಕ ಬಳಕೆಗೆ ಅಧಿಕೃತವಾಗಿ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ಜೂನ್ 25: ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ನಿಯಮಿತ, ಹಿಂಡಾರು–ಮುಂಡೂರು ವತಿಯಿಂದ ನಿರ್ಮಿಸಲಾದ ಆಧುನಿಕ ಶೈತ್ಯಾಗಾರವನ್ನು ಇಂದು ನಡೆದ ಸಮಾರಂಭದಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಶೈತ್ಯಾಗಾರದ ಪ್ರವೇಶ ದ್ವಾರವನ್ನು ತೆರೆಯುವ ಮೂಲಕ ಸಾರ್ವಜನಿಕ ಬಳಕೆಗೆ ಅಧಿಕೃತವಾಗಿ ಚಾಲನೆ ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಶೈತ್ಯಾಗಾರದ ಪ್ರಥಮ ಗ್ರಾಹಕರಾದ ಅಭಿಜ್ಞಾನ ಫುಡ್ಸ್ (ನಿತ್ಯ ಚಪಾತಿ) ಸಂಸ್ಥೆಯ ರಾಧಾಕೃಷ್ಣ ಹಾಗೂ ಪಿಂಗಾರ ರೈತ ಉತ್ಪಾದಕ ಕಂಪನಿಯ ರಾಮಕಿಶೋರ್ ಮಂಚಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಲಸು ಮೇಳದಲ್ಲಿ ಪುತ್ತೂರಿಗೆ ಶೈತ್ಯಾಗಾರದ ಅಗತ್ಯತೆಯನ್ನು ಪ್ರಸ್ತಾಪಿಸಿ, ಈ ಯೋಜನೆಗೆ ಪ್ರೇರಣೆ ನೀಡಿದ ಮುಳಿಯ ಸಮೂಹ ಸಂಸ್ಥೆಯ ಮುಖ್ಯಸ್ಥ ಕೇಶವ ಪ್ರಸಾದ್ ಮುಳಿಯ ಅವರನ್ನೂ ಗೌರವಿಸಲಾಯಿತು.

Ad Widget

Ad Widget <> Ad Widget

ಸಂಸ್ಥೆಯ ನಿರ್ದೇಶಕರಾದ ನಿರಂಜನ್ ಪೋಳ್ಯ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ರಾಮಪ್ರತೀಕ್ ಕರಿಯಾಲ್ ಪ್ರಾಸ್ತಾವಿಕ ಭಾಷಣ ಮಾಡಿ, ಗ್ರಾಮಜನ್ಯ ಸಂಸ್ಥೆ ಬೆಳೆದು ಬಂದ ಹಾದಿ, ರೈತರ ಅಭಿವೃದ್ಧಿಗಾಗಿ ಕೈಗೊಂಡಿರುವ ವಿವಿಧ ಯೋಜನೆಗಳು, ಆಧುನಿಕ ಶೈತ್ಯಾಗಾರದ ಅಗತ್ಯತೆ ಹಾಗೂ ಇದರ ಮೂಲಕ ರೈತರು, ಆಹಾರ ಸಂಸ್ಕರಣಾ ಘಟಕಗಳು, ವ್ಯಾಪಾರಿಗಳು, ಜ್ಯೂಸ್ ಕೇಂದ್ರಗಳು, ಬೇಕರಿಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕರಿಗೆ ದೊರೆಯುವ ಪ್ರಯೋಜನಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.



Ad Widget

ಸಂಸ್ಥೆಯ ಅಧ್ಯಕ್ಷರಾದ ಮೂಲಚಂದ್ರ ಕೆ. ಅಧ್ಯಕ್ಷೀಯ ಭಾಷಣ ಮಾಡಿದರು. ನಿರ್ದೇಶಕಿ ಶ್ರೀಮತಿ ಯಶಸ್ವಿನಿ ವಂದನಾರ್ಪಣೆ ಸಲ್ಲಿಸಿದರು. ಸಂಸ್ಥೆಯ ಅಕೌಂಟೆಂಟ್ ಕೃಷ್ಣ ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget

Ad Widget

ಉದ್ಘಾಟನಾ ಭಾಷಣದಲ್ಲಿ ಕಿಶೋರ್ ಕುಮಾರ್ ಮಾತನಾಡಿ, ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯು ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಶೈತ್ಯಾಗಾರ ನಿರ್ಮಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ರೈತರು, ಆಹಾರ ಸಂಸ್ಕರಣಾ ಘಟಕಗಳು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಈ ಸೌಲಭ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವ ಮೂಲಕ ಕೃಷಿ ಉತ್ಪನ್ನಗಳ ಗುಣಮಟ್ಟ ಕಾಪಾಡಿಕೊಳ್ಳಲು ಹಾಗೂ ಉತ್ತಮ ಮಾರುಕಟ್ಟೆ ಬೆಲೆ ಪಡೆಯಲು ಸಾಧ್ಯವಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಮೂಲಚಂದ್ರ ಕೆ., ನಿರ್ದೇಶಕರಾದ ನಿರಂಜನ್ ಪೋಳ್ಯ, ಶಂಕರನಾರಾಯಣ ಭಟ್ ಖಂಡಿಗೆ, ಹರ್ಷಕುಮಾರ್ ಎಂ.ಎಸ್., ಬಲರಾಮ ಕೆ. ಹಾಗೂ ಸುಬ್ರಾಯ ಬಿ.ಎಸ್. ಉಪಸ್ಥಿತರಿದ್ದರು. ಸಂಸ್ಥೆಯ ಮಾರ್ಗದರ್ಶಕ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಎಂ.ಜಿ. ಹಾಗೂ ನಿವೃತ್ತ ವಿಜ್ಞಾನಿ ಯದುಕುಮಾರ್ ಎನ್. ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸ್ಥೆಯ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯ ಸದಸ್ಯರು, ಸಿಬ್ಬಂದಿಗಳು, ರೈತರು, ಹಿತೈಷಿಗಳು, ವಿವಿಧ ರೈತ ಉತ್ಪಾದಕ ಕಂಪನಿಗಳ ಪ್ರತಿನಿಧಿಗಳು, ಆಹಾರ ಸಂಸ್ಕರಣಾ ಉದ್ಯಮಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಶೈತ್ಯಾಗಾರದ ಆರಂಭದಿಂದ ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ರೈತರು ಮತ್ತು ಉದ್ಯಮಿಗಳಿಗೆ ಕೃಷಿ ಹಾಗೂ ಆಹಾರ ಉತ್ಪನ್ನಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡುವ ಅತ್ಯಾಧುನಿಕ ಸೌಲಭ್ಯ ಲಭ್ಯವಾಗಿದ್ದು, ಕೃಷಿ ಮೌಲ್ಯವರ್ಧನೆ ಮತ್ತು ಗ್ರಾಮೀಣ ಆರ್ಥಿಕಾಭಿವೃದ್ಧಿಗೆ ಗ್ರಾಮಜನ್ಯದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

Ad Widget
Click to comment

Leave a Reply

ಕಾರ್ಯಕ್ರಮಗಳು

Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Ad Widget

ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು.

ಸಾರ್ವಜನಿಕರು ಹಾಗೂ ಆಸ್ಪತ್ರೆಯಲ್ಲಿರುವವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದೆ.

Ad Widget
Continue Reading

ಮಂಗಳೂರು

Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ

Published

on



Ad Widget

Ad Widget

Ad Widget

Ad Widget

ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.

Ad Widget

Ad Widget <> Ad Widget

ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.



Ad Widget

ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Ad Widget

Ad Widget

ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.

ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.

Ad Widget
Continue Reading

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading