ಸ್ಥಳೀಯ
Kadoor-ಟೆಕ್ಕಿ ಯುವತಿಯ ಪ್ರೈವೇಟ್ ಫೋಟೋ ಕದ್ದು ಭಾವಿ ಪತಿಗೆ ರವಾನೆ: ಅತಿಥಿಯಾಗಿ ಬಂದು ನಂಬಿಕೆ ದ್ರೋಹ ಎಸಗಿದ ಯುವಕ
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕ್ವಾಲಿಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಯುವತಿಯೊಬ್ಬಳ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಕದ್ದು, ಮದುವೆ ನಿಶ್ಚಯವಾಗಿದ್ದ ವರನಿಗೆ ಕಳುಹಿಸಿ ವಿಕೃತಿ ಮೆರೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಪಿ ಕಿರಣ್ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡೂರು: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕ್ವಾಲಿಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಯುವತಿಯೊಬ್ಬಳ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಕದ್ದು, ಮದುವೆ ನಿಶ್ಚಯವಾಗಿದ್ದ ವರನಿಗೆ ಕಳುಹಿಸಿ ವಿಕೃತಿ ಮೆರೆದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಪಿ ಕಿರಣ್ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂಬಿಸಿ ಮನೆಗೆ ಬಂದು ಫೋಟೋ ಕಳ್ಳತನ:
ಆರೋಪಿ ಕಿರಣ್ ತನ್ನ ಅಕ್ಕ ಅರ್ಪಿತಾಳೊಂದಿಗೆ ಯುವತಿ ವಾಸವಿದ್ದ ಬೆಂಗಳೂರಿನ ಸುಂಕದಕಟ್ಟೆಯ ಮನೆಗೆ ಅತಿಥಿಯಾಗಿ ಬಂದು ಎರಡು ತಿಂಗಳು ತಂಗಿದ್ದನು. ಈ ಸಂದರ್ಭದಲ್ಲಿ ಯುವತಿಗೆ ತಿಳಿಯದಂತೆ ಆಕೆಯ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ನಿಂದ ಖಾಸಗಿ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ಕದ್ದು ತನ್ನ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದನು. ನಂತರ ಅವುಗಳನ್ನು ತೋರಿಸಿ ತನ್ನನ್ನೇ ಮದುವೆಯಾಗುವಂತೆ ಯುವತಿಯನ್ನು ಪೀಡಿಸುತ್ತಿದ್ದನು. ಆಕೆ ನಿರಾಕರಿಸಿದಾಗ ಖಾಸಗಿ ದೃಶ್ಯಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲು ಆರಂಭಿಸಿದ್ದನು.
ಮದುವೆ ಮುರಿಯಲು ಸಂಚು:
ಜೂನ್ 19ರಂದು ಕುಣಿಗಲ್ ನಿವಾಸಿ ವೆಂಕಟೇಶ್ ಎಂಬುವವರ ಜೊತೆ ಯುವತಿಯ ಮದುವೆ ನಿಶ್ಚಯವಾಗಿತ್ತು. ಈ ವಿಷಯ ತಿಳಿದ ಕಿರಣ್, ಜೂನ್ 2ರಂದು ಕಡೂರು ಬಸ್ ನಿಲ್ದಾಣದಲ್ಲಿ ಯುವತಿಯನ್ನು ತಡೆದು ಮದುವೆ ನಿಲ್ಲಿಸುವಂತೆ ಧಮಕಿ ಹಾಕಿದ್ದನು. ಆದರೂ ಮದುವೆ ಸಿದ್ಧತೆಗಳು ಮುಂದುವರಿದಾಗ, ಆರೋಪಿ ಕಿರಣ್ ತನ್ನ ಬಳಿಯಿದ್ದ ಖಾಸಗಿ ವಿಡಿಯೋಗಳನ್ನು ವಧುವಿನ ಭಾವಿ ಪತಿ ಹಾಗೂ ಆತನ ಕುಟುಂಬದವರಿಗೆ ಕಳುಹಿಸಿ ವಿಕೃತಿ ಮೆರೆದಿದ್ದಾನೆ.
ಮಾನಹಾನಿ ಮತ್ತು ದೂರು:
ಅಷ್ಟಕ್ಕೆ ನಿಲ್ಲದ ಆರೋಪಿ, ಯುವತಿಯ ಲ್ಯಾಪ್‌ಟಾಪ್ ಬಳಸಿ ಆಕೆಯ ಸ್ನೇಹಿತರಿಗೆ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿ ಸಮಾಜದಲ್ಲಿ ಆಕೆಯ ಮಾನಹಾನಿ ಮಾಡಲು ಯತ್ನಿಸಿದ್ದಾನೆ. ತನ್ನ ಜೀವನದ ಜೊತೆ ಆಟವಾಡಿದ ಕಿರಣ್ ವಿರುದ್ಧ ಯುವತಿ ತನ್ನ ಪೋಷಕರೊಂದಿಗೆ ಕಡೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.
ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಕಾಲೇಜಿನ ಆವರಣದಲ್ಲಿ ನಡೆಯುವ ಈ ಪ್ರದರ್ಶನದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಯಾರಿಸಿದ ನವೀನ ವಿನ್ಯಾಸದ
ವಿವಿಧ ಪ್ರಾಜೆಕ್ಟ್ಗಳು ಪ್ರದರ್ಶಿಸಲ್ಪಡುತ್ತವೆ.
ಕಂಪ್ಯೂಟರ್ ಸೈನ್ಸ್, ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್, ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗಗಳ ಹೊಸ ಹೊಸ ಯೋಜನೆಗಳ ಮಾದರಿಗಳನ್ನು ಪ್ರದರ್ಶನಕ್ಕೆ ಸಿದ್ದಗೊಳಿಸಲಾಗಿದೆ.
ಆಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಪ್ರಾಂಶುಪಾಲ ಡಾ. ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಅಪರಾಧ
FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.
ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ24 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ23 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಶಿಕ್ಷಣ2 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ1 hour agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















