Connect with us

ಅಪರಾಧ

Bangalore-ಬೆಂಗಳೂರು: ಬೈಕ್‌ಗೆ ಗುದ್ದಿದ ದರ್ಶನ್ ಪುತ್ರನ ಕಾರು; ಅಜಾಗರೂಕ ಚಾಲನೆಗಾಗಿ ಸಾರ್ವಜನಿಕರಿಂದ ಭಾರಿ ತರಾಟೆ

Published

on



Ad Widget

Ad Widget

Ad Widget

Ad Widget

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ವಿನೀಶ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ವಿನೀಶ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ರಾಜರಾಜೇಶ್ವರಿ ನಗರದ ರಸ್ತೆಯಲ್ಲಿ ವಿನೀಶ್ ಇದ್ದ ‘ಫೋರ್ಡ್ ಎಂಡೋವರ್’ ಐಷಾರಾಮಿ ಕಾರು ಅತೀ ವೇಗದಿಂದ ಚಲಿಸುತ್ತಿತ್ತು ಎನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಮುಂಭಾಗದಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಕೆಳಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget <> Ad Widget

ರಸ್ತೆಯಲ್ಲೇ ವಾಗ್ವಾದ:
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಬೈಕ್ ಸವಾರ ಕಾರನ್ನು ತಡೆದಿದ್ದಾರೆ. ಈ ವೇಳೆ ಕಾರಿನಿಂದ ಇಳಿದ ವಿನೀಶ್ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ದರ್ಶನ್ ಪುತ್ರ ಎಂಬ ಮುಲಾಜಿಲ್ಲದೆ ಸಾರ್ವಜನಿಕರು ಅಜಾಗರೂಕ ಚಾಲನೆಗಾಗಿ ವಿನೀಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸದ್ಯಕ್ಕೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.



Ad Widget

ಪತ್ನಿ ವಿಜಯಲಕ್ಷ್ಮೀ ಸ್ಪಷ್ಟನೆ:
ಈ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ, “ಘಟನೆ ನಡೆದಾಗ ವಿನೀಶ್ ವಾಹನ ಚಲಾಯಿಸುತ್ತಿರಲಿಲ್ಲ. ಇಂತಹ ಸಣ್ಣ ಅಪಘಾತಗಳು ಬೆಂಗಳೂರಿನಲ್ಲಿ ಸಾಮಾನ್ಯ. ಅಪಘಾತವಾದಾಗ ವಿನೀಶ್ ಬೈಕ್ ಸವಾರನ ಸಹಾಯಕ್ಕೆ ಮುಂದಾಗಿದ್ದಾರೆ. ನಮ್ಮ ಕುಟುಂಬ ಈಗಾಗಲೇ ಸಂಕಷ್ಟದ ಪರಿಸ್ಥಿತಿಯಲ್ಲಿದೆ, ದಯವಿಟ್ಟು ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ನಮ್ಮ ನೋವನ್ನು ಹೆಚ್ಚಿಸಬೇಡಿ” ಎಂದು ಮನವಿ ಮಾಡಿದ್ದಾರೆ.

Ad Widget

Ad Widget

ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವಿನೀಶ್ ಮತ್ತು ಸಾರ್ವಜನಿಕರ ನಡುವಿನ ವಾಗ್ವಾದದ ವಿಡಿಯೋ ಭಾರಿ ಸದ್ದು ಮಾಡುತ್ತಿದೆ.

Ad Widget
Click to comment

Leave a Reply

ಅಪರಾಧ

High Court-ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಸೇರಿ 8 ಆರೋಪಿಗಳ ಜಾಮೀನಿಗೆ ಹೈಕೋರ್ಟ್ ತಡೆ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

Ad Widget

Ad Widget <> Ad Widget

ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ಭರತ್ ಕುಮ್ಡೇಲ್, ಪ್ರದೀಪ್, ರಂಜಿತ್, ಶಿವಪ್ರಸಾದ್, ಅಭಿನ್ ರೈ, ಸಾಹಿತ್, ಸಚಿನ್ ಮತ್ತು ತೇಜಾಕ್ಷ ಎಂಬ ಎಂಟು ಆರೋಪಿಗಳು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಕಲಂ 483ರ ಅಡಿಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ್ದ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಇತ್ತೀಚೆಗೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.



Ad Widget

ಆದರೆ, ಆರೋಪಿಗಳು ಗೂಂಡಾ ಕಾಯ್ದೆಯಡಿ ಬಂಧನದಲ್ಲಿಯೇ ಮುಂದುವರಿಯಬೇಕಿದ್ದ ಕಾರಣ, ಜಾಮೀನು ಮಂಜೂರಾದರೂ ತಕ್ಷಣ ಜೈಲಿನಿಂದ ಬಿಡುಗಡೆಯಾಗುವಂತಿರಲಿಲ್ಲ. ಈ ನಡುವೆ, ಮೈಸೂರು ನ್ಯಾಯಾಲಯದ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರದ ಪರವಾಗಿ ಅಡ್ವಕೇಟ್ ಜನರಲ್ ಮೂಲಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

Ad Widget

Ad Widget

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕ್ರಿಮಿನಲ್ ಪಿಟಿಷನ್ ಸಂಖ್ಯೆ 15386/2026ರಲ್ಲಿ ಅಕ್ಟೋಬರ್ 15ರಂದು ಎಂಟು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಆದೇಶಕ್ಕೆ ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆ ನೀಡಿದೆ. ಅಲ್ಲದೆ, ಮೊದಲರಿಂದ ಎಂಟನೇ ಆರೋಪಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಸರಕಾರಿ ಅಭಿಯೋಜಕರು ಮಂಡಿಸಿದ ವಾದಗಳು ಹಾಗೂ ಪ್ರಮಾಣಪತ್ರದೊಂದಿಗೆ ಸಲ್ಲಿಸಲಾದ ಅರ್ಜಿಯಲ್ಲಿನ ಅಂಶಗಳನ್ನು ಪರಿಗಣಿಸಿ ನ್ಯಾಯಾಲಯ ಈ ಮಧ್ಯಂತರ ಆದೇಶ ನೀಡಿದೆ.

Ad Widget
Continue Reading

ಸ್ಥಳೀಯ

Kadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!

Published

on



Ad Widget

Ad Widget

Ad Widget

Ad Widget

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಕ್ಷೆಗೊಳಗಾದ ಆರೋಪಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2021ರ ಮೇ 8ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈ ಘಟನೆಯ ಕುರಿತು ಯಾರಿಗಾದರೂ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದನೆಂದು ದೂರಲಾಗಿತ್ತು. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 40/2021ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 376(2)(f)(n), 376(3), 506 ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿತ್ತು.



Ad Widget

ವೈಜ್ಞಾನಿಕ ಸಾಕ್ಷ್ಯ ಸಂಗ್ರಹಿಸಿ ದೋಷಾರೋಪ ಪಟ್ಟಿ ಸಲ್ಲಿಕೆ
ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ವೈಜ್ಞಾನಿಕ ಮತ್ತು ಇತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದರು. ಬಳಿಕ ಆರೋಪಿ ಶೇಖರ್ ಅಲಿಯಾಸ್ ಸೇಸಪ್ಪ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget

ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

20 ವರ್ಷ ಕಠಿಣ ಜೈಲು, ₹50 ಸಾವಿರ ದಂಡ
ಪೋಕ್ಸೊ ಕಾಯ್ದೆ 2012ರ ಕಲಂ 5(ಎಲ್) ಜೊತೆಗೆ ಕಲಂ 6ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಅಲ್ಲದೇ, ಭಾರತೀಯ ದಂಡ ಸಂಹಿತೆಯ ಕಲಂ 506ರ ಅಡಿಯಲ್ಲಿ ಜೀವ ಬೆದರಿಕೆ ಹಾಕಿದ ಅಪರಾಧಕ್ಕೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಒಟ್ಟಾರೆಯಾಗಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Udupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ

Published

on



Ad Widget

Ad Widget

Ad Widget

Ad Widget

ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ, ಅ.15: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಈಗಾಗಲೇ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಬಾಂಬೆ ಫೈಸಲ್‌ನ ಸೂಚನೆಯಂತೆ ಅಬ್ದುಲ್ ರಾಹೀಸ್ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಭೂಗತ ಪಾತಕಿ ಹೇಮಂತ್ ಪೂಜಾರಿಯ ಹಣಕಾಸಿನ ವ್ಯವಹಾರಗಳನ್ನು ಈತ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಪ್ರಕರಣಗಳಲ್ಲಿ ಸಂಗ್ರಹವಾಗುವ ಹಣವನ್ನು ಈತ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ.



Ad Widget

ಬಂಧಿತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

ಹೇಮಂತ್ ಪೂಜಾರಿ ಹೆಸರಿನಲ್ಲಿ ಮತ್ತೊಬ್ಬ ಉದ್ಯಮಿಗೆ ಬೆದರಿಕೆ
ಇನ್ನೊಂದೆಡೆ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಹೆಸರಿನಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೊಬ್ಬ ಉದ್ಯಮಿಗೆ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ಕರೆ ಮಾಡಿದವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading