Connect with us

ಬಿಗ್ ನ್ಯೂಸ್

Priyanka Kharge-ಯಾವುದೇ ವ್ಯಕ್ತಿಯ ಅನುಮತಿ ಇಲ್ಲದೆ ಖಾಸಗಿ ಚಿತ್ರ, ವಿಡಿಯೋ ಪ್ರಸಾರ, ಬೆದರಿಕೆ ಅಪರಾಧ: ತಕ್ಷಣ ಎಫ್ಐಆರ್ ಕಡ್ಡಾಯ – ಗೃಹ ಸಚಿವ ಪ್ರಿಯಾಂಕ ಖರ್ಗೆ ಆದೇಶ

Published

on

Ad Widget

Ad Widget

Ad Widget

Ad Widget

ಯಾವುದೇ ವ್ಯಕ್ತಿಯ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವಿಡಿಯೋಗಳನ್ನು ಅವರ ಅನುಮತಿಯಿಲ್ಲದೆ ಪ್ರಸಾರ ಮಾಡುವುದು, ಪ್ರತೀಕಾರಕ್ಕಾಗಿ ಅಶ್ಲೀಲತೆ ಹಂಚುವುದು ಅಥವಾ ಬೆದರಿಕೆ ಹಾಕುವ ಪ್ರಕರಣಗಳಲ್ಲಿ ದೂರು ಬಂದ ತಕ್ಷಣ ಕಡ್ಡಾಯವಾಗಿ ಎಫ್‌ಐಆರ್ (FIR) ದಾಖಲಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಯಾವುದೇ ವ್ಯಕ್ತಿಯ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವಿಡಿಯೋಗಳನ್ನು ಅವರ ಅನುಮತಿಯಿಲ್ಲದೆ ಪ್ರಸಾರ ಮಾಡುವುದು, ಪ್ರತೀಕಾರಕ್ಕಾಗಿ ಅಶ್ಲೀಲತೆ ಹಂಚುವುದು ಅಥವಾ ಬೆದರಿಕೆ ಹಾಕುವ ಪ್ರಕರಣಗಳಲ್ಲಿ ದೂರು ಬಂದ ತಕ್ಷಣ ಕಡ್ಡಾಯವಾಗಿ ಎಫ್‌ಐಆರ್ (FIR) ದಾಖಲಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೂಚನೆಯ ಮೇರೆಗೆ ಆದೇಶ ಹೊರಡಿಸಿರುವ ಅವರು, ಯಾವುದೇ ವ್ಯಕ್ತಿಯ ಖಾಸಗಿ/ಆಪ್ತ ಚಿತ್ರಗಳು ಹಾಗೂ ವೀಡಿಯೊಗಳನ್ನು ಅವರ ಅನುಮತಿಯಿಲ್ಲದೆ ಪ್ರಕಟಿಸುವುದು ಅಥವಾ ಪ್ರಸಾರ ಮಾಡುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗುವ ದೂರುಗಳನ್ನು ದಾಖಲಿಸುವಲ್ಲಿ ಕೆಲವೆಡೆ ನಿರಾಕರಣೆ ಮಾಡುತ್ತಿರುವುದು ಅಥವಾ ವಿಳಂಬವಾಗಿ ದಾಖಲಿಸುತ್ತಿರುವುದು ಗಮನಕ್ಕೆ ಬಂದಿದೆ. ಕೆಲವೊಮ್ಮೆ ಸಂತ್ರಸ್ತರು ಮೊದಲು ಆ ಚಿತ್ರ/ವೀಡಿಯೊಗಳನ್ನು ಚಿತ್ರೀಕರಿಸಲು ಒಪ್ಪಿಗೆ ನೀಡಿದ್ದರು ಎಂಬ ಕಾರಣದ ಆಧಾರದ ಮೇಲೆ ದೂರು ಸ್ವೀಕರಿಸದಿರುವುದು ಕಂಡುಬಂದಿದೆ ಎಂದಿದ್ದಾರೆ.

Ad Widget

Ad Widget <> Ad Widget

ಆದರೆ, ನಿಯಮಾನುಸಾರ, ಚಿತ್ರೀಕರಣಕ್ಕೆ ನೀಡಿದ ಒಪ್ಪಿಗೆಗೂ ಮತ್ತು ಇತರರಿಗೆ ಹಂಚಿಕೆ/ಪ್ರಸಾರಕ್ಕೆ ನೀಡುವ ಒಪ್ಪಿಗೆಗೂ ವ್ಯತ್ಯಾಸವಿದೆ. ಚಿತ್ರೀಕರಣಕ್ಕೆ ಒಪ್ಪಿಗೆ ಇದ್ದರೂ, ಹಂಚಿಕೆಗೆ ಒಪ್ಪಿಗೆ ಇಲ್ಲದಿದ್ದರೂ ಪ್ರಚಾರಪಡಿಸಿರೆ, ಅದು ಅಪರಾಧವಾಗುತ್ತದೆ. ಏಕೆಂದರೆ ದೇಹದ ಗೋಪ್ಯತೆ, ಮಾಹಿತಿಯ ಗೋಪ್ಯತೆ ಮತ್ತು ವೈಯಕ್ತಿಕ ಮಾಹಿತಿಯ ಪ್ರಸಾರವನ್ನು ನಿಯಂತ್ರಿಸುವ ಹಕ್ಕು ಸಂವಿಧಾನದ ವಿಧಿ 21 ಅಡಿಯಲ್ಲಿ ಮೂಲಭೂತ ಹಕ್ಕು ಎಂದು ಮಾನ್ಯತೆ ನೀಡಿದೆ ಎಂದು ಅವರು ಆದೇಶದಲ್ಲಿ ಹೇಳಿದ್ದಾರೆ.

ಚಿತ್ರೀಕರಣಕ್ಕೆ ನೀಡಿದ ಒಪ್ಪಿಗೆ ಎಂದರೆ ಪ್ರಸಾರಕ್ಕೆ ನೀಡಿದ ಒಪ್ಪಿಗೆ ಅಲ್ಲ. ಭಾರತೀಯ ನ್ಯಾಯ ಸಂಹಿತೆ, 2023ರ ಸೆಕ್ಷನ್ 77ರ ವಿವರಣೆ 2 ಪ್ರಕಾರ, ಪೀಡಿತರು ಚಿತ್ರ/ವೀಡಿಯೊ ಸೆರೆಹಿಡಿಯಲು ಒಪ್ಪಿಗೆ ನೀಡಿದ್ದರೂ, ಮೂರನೇ ವ್ಯಕ್ತಿಗಳಿಗೆ ಹಂಚಲು ಒಪ್ಪಿಗೆ ನೀಡದಿದ್ದಲ್ಲಿ ಮತ್ತು ಚಿತ್ರ/ವೀಡಿಯೊ ಹಂಚಿಕೆಯಾಗಿದ್ದರೆ, ಅದು ಅಪರಾಧವಾಗುತ್ತದೆ ಎಂದು ಅವರು ಹೇಳಿದ್ದಾರೆ.

Ad Widget

Ad Widget

ಒಬ್ಬ ಮಹಿಳೆ ಖಾಸಗಿ ಕ್ರಿಯೆಯಲ್ಲಿ ತೊಡಗಿರುವಾಗ, ಸಾಮಾನ್ಯವಾಗಿ ನೋಡಬಾರದೆಂಬ ನಿರೀಕ್ಷೆಯ ಪರಿಸ್ಥಿತಿಯಲ್ಲಿ ಆಕೆಯನ್ನು ನೋಡುವುದು, ಚಿತ್ರ ಸೆರೆಹಿಡಿಯುವುದು ಅಥವಾ ಅಂತಹ ಚಿತ್ರಗಳನ್ನು ಪ್ರಸಾರ ಮಾಡುವುದು ಅಪರಾಧವಾಗುತ್ತದೆ. ಈ ಅಪರಾಧಗಳಿಗೆ 1 ರಿಂದ 7 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ.

ಯಾವುದೇ ವ್ಯಕ್ತಿಯ ಖಾಸಗಿ ಅಂಗಗಳ ಚಿತ್ರವನ್ನು ಅವರ ಅನುಮತಿಯಿಲ್ಲದೆ ಸೆರೆಹಿಡಿಯುವುದು, ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು, ಗೋಪ್ಯತೆಯನ್ನು ಉಲ್ಲಂಘಿಸುವ ಸಂದರ್ಭಗಳಲ್ಲಿ ನಡೆದರೆ, ಅದು ಅಪರಾಧವಾಗುತ್ತದೆ. ಇದಕ್ಕೆ ಗರಿಷ್ಠ 3 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಅಥವಾ 2 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಇಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ಅಥವಾ ಕಾಮಪ್ರಚೋದಕ ವಿಷಯವನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು ಅಪರಾಧವಾಗಿದ್ದು, ಗರಿಷ್ಠ 3 ವರ್ಷಗಳ ಶಿಕ್ಷೆ ಹಾಗೂ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಪುನರಾವರ್ತಿತ ಅಪರಾಧಕ್ಕೆ ಗರಿಷ್ಠ 5 ವರ್ಷಗಳ ಶಿಕ್ಷೆ ಹಾಗೂ 10 ಲಕ್ಷ ರೂ.ವರೆಗೆ ದಂಡ ಹಾಕಲಾಗುತ್ತದೆ.

ಲೈಂಗಿಕ ಕ್ರಿಯೆ ಅಥವಾ ಲೈಂಗಿಕವಾಗಿ ಸ್ಪಷ್ಟ ವಿಷಯ ಹೊಂದಿರುವ ವಸ್ತುಗಳನ್ನು ಇಲೆಕ್ಟ್ರಾನಿಕ್ ರೂಪದಲ್ಲಿ ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು ಅಪರಾಧವಾಗಿದ್ದು, ಗರಿಷ್ಠ 5 ರಿಂದ 7ವರ್ಷಗಳ ಶಿಕ್ಷೆ ಹಾಗೂ 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಡಾ. ಎಂ.ಎ. ಸಲೀಂ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಪರಾಧ ಸ್ಥಳೀಯ ವ್ಯಾಪ್ತಿಯ ಹೊರಗೆ ನಡೆದಿದ್ದರೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ಪ್ರಕಾರ ‘ಝೀರೋ ಎಫ್‌ಐಆ‌ರ್ ದಾಖಲಿಸಿ, ತಕ್ಷಣ ಸಂಬಂಧಿತ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು. ಐಟಿ ಕಾಯ್ದೆ ಮತ್ತು ಐಟಿ ನಿಯಮಗಳು, 2021ರ ಅನ್ವಯ ಸಂಬಂಧಿತ ಸಂಸ್ಥೆಗಳಿಗೆ ನೋಟಿಸ್‌ ನೀಡಿ, ಅಪರಾಧಕರ ವಿಷಯವನ್ನು ತೆಗೆದುಹಾಕಲು/ತಡೆಹಿಡಿಯುವ ತ್ವರಿತ ಕ್ರಮ ಕೈಗೊಳ್ಳಬೇಕು. ಎಲ್ಲ ಡಿಜಿಟಲ್ ಸಾಕ್ಷ್ಯಗಳನ್ನು ಕಾನೂನುಬದ್ಧವಾಗಿ ಸಂರಕ್ಷಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಪೀಡಿತರು ಮೊದಲು ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣಕ್ಕೆ ಎಫ್‌ಐಆರ್ ನೋಂದಣಿಯನ್ನು ನಿರಾಕರಿಸಕೂಡದು ಅಥವಾ ಮುಂದೂಡಬಾರದು. ಆ ಒಪ್ಪಿಗೆಯು, ನಂತರದ ಅನುಮತಿಯಿಲ್ಲದ ಪ್ರಸಾರಕ್ಕೆ ರಕ್ಷಣೆಯಾಗುವುದಿಲ್ಲ. ಆಪ್ತ ವಿಷಯಗಳನ್ನು ಬಳಸಿ ಹಣ, ಲೈಂಗಿಕ ಅನುಕೂಲ ಅಥವಾ ಬೇರೆ ಲಾಭಕ್ಕಾಗಿ ಬೆದರಿಕೆ/ಸುಲಿಗೆ ನಡೆಸಿದರೆ, ಬಿಎನ್‌ಸ್, 2023ರ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಸಂಬಂಧಿತ ವಿಧಿಗಳನ್ನು ಐಟಿ ಕಾಯ್ದೆಯ ಜೊತೆಗೆ ಅಳವಡಿಸಬೇಕು. ಒಂದು ವೇಳೆ ಇಂತಹ ಪ್ರಕರಣಗಳಲ್ಲಿ ಎಫ್‌ಐಆರ್ ನೋಂದಣಿ ಮಾಡದಿರುವುದು, ಅಥವಾ ಪೂರ್ವಾನುಮತಿ ಎಂಬ ತಪ್ಪುಕಾರಣದಿಂದ ವಿಳಂಬ ಮಾಡುವುದು ಕಂಡುಬಂದ ಪಕ್ಷದಲ್ಲಿ ಅಂತಹ ಲೋಪಗಳನ್ನು ಗಂಭೀರವಾಗಿ ಪರಿಗಣಿಸಿ ಮತ್ತು ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು.
-ಡಾ. ಎಂ.ಎ.ಸಲೀಂ, ರಾಜ್ಯ ಪೊಲೀಸ್ ಮಹಾನಿರ್ದೇಶಕ

ಪೀಡಿತರ ಗುರುತು ಗೋಪ್ಯವಾಗಿರುವಂತೆ ನೋಡಿಕೊಳ್ಳಬೇಕು. ದೂರುದಾರರನ್ನು ಸೂಕ್ಷ್ಮವಾಗಿ ನಡೆಸಿಕೊಳ್ಳುವುದು. ಸಾಧ್ಯವಾದಲ್ಲಿ, ಮಹಿಳಾ ಸಂತ್ರಸ್ತೆಯ ದೂರನ್ನು ಮಹಿಳಾ ಅಧಿಕಾರಿಯಿಂದಲೇ ದಾಖಲಿಸಬೇಕು. ತನಿಖಾಧಿಕಾರಿಗಳು ತಾಂತ್ರಿಕ ತನಿಖೆ, ಖಾತೆ ಪತ್ತೆ ಹಾಗೂ ಸಾಧನಗಳ ಫಾರೆನ್ಸಿಕ್ ವಿಶ್ಲೇಷಣೆಗೆ ಸಂಬಂಧಿತ ಸೈಬರ್ ಕ್ರೈಂ ಪೊಲೀಸ್ ಠಾಣೆ ಹಾಗೂ ಸಿಐಡಿ ಸೈಬರ್ ವಿಭಾಗದೊಂದಿಗೆ ಸಮನ್ವಯತೆ ಸಾಧಿಸಬೇಕು.

  • ಪ್ರಿಯಾಂಕ್ ಖರ್ಗೆ, ಗೃಹ ಸಚಿವ
Ad Widget
Click to comment

Leave a Reply

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!