ಮೈಸೂರು
Mysore-ಮೈಸೂರು ದಸರಾ ಕಂಬಳ ; ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ; ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ
ಈ ಬಾರಿಯ ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು , ಶುಕ್ರವಾರ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶಾಸಕರು ಪೂಜೆ ಸಲ್ಲಿಸಿದ್ದಾರೆ.
ಪುತ್ತೂರು: ಈ ಬಾರಿಯ ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು , ಶುಕ್ರವಾರ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶಾಸಕರು ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ತುಳುನಾಡಿನ ಜನಪದ ಕ್ರೀಡೆಯನ್ನು ಕನ್ನಡಿಗರಿಗೆ ವೀಕ್ಷಣೆಗೆ ಅವಕಾಶ ಮಾಡುವುದರ ಜೊತೆ ವಿಶ್ವದೆಲ್ಲಡೆ ಕಂಬಳವನ್ನು ಪರಿಚಯಿಸುವ ಕೆಲಸವನ್ನು ಶಾಸಕ ಅಶೋಕ್ ರೈ ಅವರು ಮಾಡಿದ್ದರು. ಬೆಂಗಳೂರು ಕಂಬಳ ನಡೆದ ಮಾರನೇ ವರ್ಷ ಮೈಸೂರಿನಲ್ಲಿ ಕಂಬಳ ನಡೆಸುವ ಬಗ್ಗೆ ಉಪಮುಖ್ಯಮಂತ್ರಿಯಾಗಿದ್ದ ಡಿ ಕೆ ಶಿವಕುಮಾರ್ ಚರ್ಚೆ ನಡೆಸಿದ್ದರು. ಇದೀಗ ಕಂಬಳ ಪ್ರೇಮಿ ಡಿ ಕೆ ಶಿವಕುಮಾರ್‌ರವರೇ ಮುಖ್ಯಮಂತ್ರಿಯಾಗಿದ್ದು ಮತ್ತೆ ಮೈಸೂರಿನಲ್ಲಿ ಕಂಬಳ ನಡೆಸುವಂತೆ ಅಶೋಕ್ ರೈ ಅವರಿಗೆ ಸೂಚನೆ ನೀಡಿದ್ದು ಮಾತ್ರವಲ್ಲದೆ ಕಂಬಳ ನಡೆಸುವುದಾದರೆ ಸರಕಾರವೇ ನಿಮ್ಮ ಜೊತೆಗಿರಲಿದೆ ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ನಡೆಸುವಂತೆ ಸೂಚನೆ ನೀಡಿದ್ದರು.
ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ
ಕಂಬಳದ ಜಾಗ ವೀಕ್ಷಣೆ ಮಾಡುವ ಮುನ್ನ ಶಾಸಕ ಅಶೋಕ್ ರೈ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮೊದಲ ಬಾರಿಗೆ ದಸರಾದಲ್ಲಿ ಕಂಬಳ ಕ್ರೀಡೆ ನಡೆಯಲಿರುವ ಕಾರಣ ತಾಯಿ ಚಾಮುಂಡೇಶ್ವರಿಯ ಆಶೀರ್ವಾದವನ್ನು ಬೇಡಿಕೊಂಡರು.
ಜಾಗ ವೀಕ್ಷಣೆ
ಕಂಬಳ ನಡೆಸಲು ಎಕ್ರೆಗಟ್ಟಲೆ ಜಾಗ ಬೇಕಾಗಿದೆ. ಶಾಸಕ ಅಶೋಕ್ ರೈ ಅವರು ಮೈಸೂರಿನ ಸರ್ ಎಂ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಬಳಿ ಇರುವ 20 ಎಕ್ರೆ ಜಾಗ ಮತ್ತು ಮೈಸೂರು ಜಯಲಕ್ಷ್ಮೀ ಪುರಂನಲ್ಲಿ ಪ್ರೀಮಿಯಂ ಸ್ಟುಡಿಯೋ ಬಳಿ ಇರುವ 17 ಎಕ್ರೆ ಜಾಗವನ್ನು ವೀಕ್ಷಣೆ ಮಾಡಲಾಗಿದೆ. ಈ ಎರಡು ಜಾಗದಲ್ಲಿ ಯಾವುದು ಸೂಕ್ತ ಎಂಬುದನ್ನು ಪರಿಗಣಿಸಿ ಅಂತಿಮಗೊಳಿಸಲಾಗುತ್ತದೆ. ಈ ಸಂದರ್ಭದಲ್ಲಿ ಕಂಬಳ ಪ್ರಮುಖರಾದ ಮುರಳೀಧರ್ ರೈ ಮಟಂತಬೆಟ್ಟು,ಹಾಗೂ ರಾಜೀವ ಶೆಟ್ಟಿ ಎಡ್ತೂರು ಉಪಸ್ಥಿತರಿದ್ದರು.
ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ನಮ್ಮ ಕಂಬಳ ಪ್ರದರ್ಶನ ನಡೆಯಲಿದೆ., ಜಗತ್ತಿನ ವಿವಿಧ ದೇಶಗಳಿಂದ ಮೈಸೂರು ದಸರಾಗೆ ಜನ ಆಗಮಿಸುತ್ತಾರೆ. ಇಂಥಹದೊಂದು ಕಾರ್ಯಕ್ರಮದಲ್ಲಿ ಈ ಬಾರಿ ಕಂಬಳ ನಡೆಯಲಿರುವುದು ಸಂತೋಷದ ವಿಚಾರವಾಗಿದೆ. ಕಂಬಳದ ಜಾಗ ವೀಕ್ಷಣೆಗೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ ಮುಹೂರ್ಥ ಇಟ್ಟಿದ್ದೇವೆ. ದೇವಿಯ ಅನುಗ್ರಹದಿಂದ ಕಂಬಳ ಸುಸೂತ್ರವಾಗಿ ನಡೆಯಲಿದೆ. ಎರಡು ಕಡೆ ಜಾಗ ವೀಕ್ಷಣೆ ನಡೆದಿದೆ. ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಕಂಬಳ ನಡೆಯುವುದು ಪಕ್ಕಾ.
ಅಶೋಕ್ ರೈ ಶಾಸಕರು ಪುತ್ತೂರು
ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್‌ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ15 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು17 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್17 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ15 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















