ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸುದ್ದಿಗೋಷ್ಠಿ
ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ, ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಉಜಿರೆ: ರಾಜ್ಯದಲ್ಲಿ ಭೀಕರ ಬರಗಾಲದ ಸನ್ನಿವೇಶವಿದ್ದು ಇದೆಲ್ಲ ನಿವಾರಣೆಯಾಗಿ ಒಳ್ಳೆಯ ಮಳೆ-ಬೆಳೆ ಆಗಲಿ. ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲಿ. ಜನರ ಬದುಕು ಹಸನಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.

ಅವರು ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ, ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ ನಾಲ್ಕು ದಿನಗಳಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮಂಗಳೂರು ಮೂಲಕ ನೇರವಾಗಿ ಧರ್ಮಸ್ಥಳಕ್ಕೆ ಬಂದಿದ್ದೇನೆ. ಹಿಂದೂಗಳ ರಕ್ಷಣೆ ಮಾಡುವ ಬಿ.ಜೆ.ಪಿ. ನೇತೃತ್ವದ ಒಳ್ಳೆಯ ಸರ್ಕಾರ ಆಡಳಿತಕ್ಕೆ ಬರಲಿ ಎಂದು ಹಾಗೂ ರಾಜ್ಯದ ಸರ್ವತೋಮುಖ ಪ್ರಗತಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ.
ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ಅಡ್ಡಮತದಾನದ ಬಗ್ಯೆ ಲಕ್ಷಾಂತರ ಮಂದಿ ಪಕ್ಷದ ಕಾರ್ಯಕರ್ತರು ನೋವನ್ನು ಅನುಭವಿಸಿದ್ದಾರೆ. ಇದು ಬೇರೆ ಬೇರೆ ಚರ್ಚೆಗಳಿಗೆ ಗ್ರಾಸವಾಗಿತ್ತು. ತಾನು ಧರ್ಮಸ್ಥಳದ ಅಭಿಮಾನಿ ಭಕ್ತನಾಗಿದ್ದು, ಯಾವುದೇ ನೋವಾದಾಗ ಇಲ್ಲಿಗೆ ಬಂದು ಪರಿಹರಿಸಿಕೊಳ್ಳುತ್ತೇನೆ.
ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ನಡೆಯಬೇಕು. ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದ್ದೆ, ಹಿರಿಯರ ಸಲಹೆಯಂತೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಿದ್ದೇನೆ. ಅವರ ಸಲಹೆಯಂತೆ ನಿರ್ಧಾರ ಕೈಬಿಟ್ಟು ದೇವರ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ.

ಅಡ್ಡ ಮತದಾನ ಆದಾಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ತನ್ನ ನಡುವಿನ ಆತ್ಮೀಯತೆ ಹಾಗೂ ವ್ಯವಹಾರದ ಬಗ್ಯೆ ಸಾಕಷ್ಟು ಅಪಪ್ರಚಾರವಾಗಿತ್ತು. ತಮ್ಮ ಮಧ್ಯೆ ಯಾವುದೇ ಅವ್ಯವಹಾರ, ಅಕ್ರಮ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ವಿಜಯೇಂದ್ರ, ಮುಖ್ಯಮಂತ್ರಿ ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಅವರಿಗೆ ಕೊಡಬೇಕಾದ ಗೌರವವನ್ನು ನಾನು ಕೊಟ್ಟಿದ್ದೇನೆ. ಯಾರು ಅಪಪ್ರಚಾರ ಮಾಡಿದ್ದಾರೊ ಅವರಿಗೆ ದೇವರು ಒಳ್ಳೆದು ಮಾಡಲಿ ಎಂದು ಪ್ರಾರ್ಥಿಸಿದರು.
ರಾಜ್ಯದಲ್ಲಿ ಜನರ ಅನೇಕ ಸಮಸ್ಯೆಗಳು ತಾಂಡವವಾಡುತ್ತಿವೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಅನ್ಯಾಯ, ಅವ್ಯವಹಾರಗಳು ಅತಿಯಾಗುತ್ತಿವೆ. ಬಿ.ಜೆ.ಪಿ. ಪಕ್ಷದ ಬಗ್ಯೆ ತನಗೆ ಭರವಸೆ ಇದ್ದು ಜನರು ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಿ, ಬಿ.ಜೆ.ಪಿ. ಸರ್ಕಾರ ಮತ್ತೆ ಆಡಳಿತಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೆ ೧೭ ಮಂದಿ ಶಾಸಕರು ಯಡಿಯೂರಪ್ಪ ಅವರ ನಾಯಕತ್ವದಲ್ಲಿ ವಿಶ್ವಾಸವಿಟ್ಟು ಪಕ್ಷ ತೊರೆದು ಬಂದಿದ್ದರು. ಆಗ ಒಳ್ಳೆಯ ಸರ್ಕಾರ ಇತ್ತು. ಈಶ್ವರಪ್ಪ ಮರೆತಿರಬಹುದು. ಅನೇಕ ಕಾರ್ಯಕರ್ತರ ಹತ್ಯೆಯಾಗಿತ್ತು. ಅನೇಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಬೆದರಿಕೆ ಹಾಕಲಾಗಿತ್ತು. ಅವರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ಒಳ್ಳೆ ಕೆಲಸ ಮಾಡಿದ್ದರು. ಆಗ ಗುತ್ತಿಗೆದಾರನ ಹತ್ಯೆಯಾಗಿತ್ತು ಎಂದು ನೆನಪಿಸಿದರು. ಈಶ್ವರಪ್ಪ ಶಾಸಕರೂ ಅಲ್ಲ. ಪಕ್ಷದಲ್ಲಿಯೂ ಇಲ್ಲ. ಹಾಗಾಗಿ ಅವರ ಹೇಳಿಕೆ ಮಹತ್ವ ನೀಡುತ್ತಿಲ್ಲ ಎಂದರು.
ಕಾಂಗ್ರೆಸ್‌ಪಕ್ಷ ಹೆಸರುಗಳನ್ನು ತೇಲಿ ಬಿಡುತ್ತಾರೆ. ಇದರಿಂದ ಶಾಸಕರುಗಳಿಗೆ ಬೇಸರವಾಗಿದೆ. ಪಕ್ಷಕ್ಕೆ ದ್ರೋಹ ಬಗೆದವರು ಯಾರು ಎಂಬ ಸತ್ಯ ಇಂದಲ್ಲ ನಾಳೆ ಹೊರ ಬರಲಿದೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿ ತಾನು ಎಂದೂ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಭರವಸೆ ನೀಡಿದರು. ಕೇಂದ್ರದಲ್ಲಿ ತಮ್ಮ ಪಕ್ಷದ ಸರ್ಕಾರ ಇರುವುದರಿಂದ ಸತ್ಯ ಸದ್ಯದಲ್ಲಿಯೇ ಹೊರಬರಲಿದೆ ಎಂದರು.
ಅನಗತ್ಯ ಚರ್ಚೆ ನಿಲ್ಲಿಸಿ ಮುಂದೆ ರಾಜ್ಯಾದ್ಯಂತ ಪ್ರವಾಸ ಮಾಡಿ ತಾನು ಬಿ.ಜೆ.ಪಿ. ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಮಾಡುವುದಾಗಿ ತಿಳಿಸಿದರು.
ಎಸ್.ಟಿ. ಸೋಮಶೇಖರ್ ಗೊಂದಲದ ಹೇಳಿಕೆಗಳನ್ನು ನೀಡುವ ಮೂಲಕ ಸ್ವ-ರಕ್ಷಣೆಯ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ತನ್ನ ಬಗ್ಯೆ ಏನೇ ಅಪಪ್ರಚಾರ ಮಾಡಿದರೂ ನನಗೆ ಅನುಮಾನವಿಲ್ಲ. ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
ಡಿ.ಕೆಶಿ. ಬಹುಮುಖ ಪ್ರತಿಭೆಯ ಮುಖ್ಯಮಂತ್ರಿ. ರಾಷ್ಟç ನಾಯಕರಲ್ಲಿ ಎಲ್ಲಾ ವಿಚಾರಗಳನ್ನು ತಿಳಿಸಿದ್ದೇನೆ. ಪಕ್ಷ ಕಟ್ಟಲು ಅಧಿಕಾರ ನೀಡಿದ್ದಾರೆ. ಮುಖ್ಯಮಂತ್ರಿ ಆಗಲು ಅಲ್ಲ. ಏನಿದ್ದರೂ ಸತ್ಯ ಸದ್ಯದಲ್ಲಿಯೆ ಪ್ರಕಟವಾಗಲಿದೆ.
ಬಿಡದಿ ವಿಚಾರದಲ್ಲಿಯೂ ದೆಹಲಿಯಲ್ಲಿ ಚರ್ಚೆ ನಡೆಸಲಾಗಿದೆ. ರೈತನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಅವರ ಪರ ಹೋರಾಟಕ್ಕಾಗಿ ಪಕ್ಷ ಸಿದ್ಧವಿದೆ ಎಂದರು.
ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ ಸಾಕಷ್ಟು ಅವ್ಯವಹಾರವಗಿದೆ. ಸಿ.ಐ.ಜಿ. ವರದಿಯಲ್ಲಿ ಬಂದಿರುವ ಗ್ಯಾರಂಟಿ ಅಧ್ಯಕ್ಷರುಗಳನ್ನು ಬರಕಾಸ್ತುಗೊಳಿಸಿ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಮುಂದುವರಿಸಲಿ. ನೂರಾರು ಕೋಟಿ ರೂ. ಅವ್ಯವಹಾರಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ವಿಜಯೇಂದ್ರ ಆರೋಪಿಸಿದರು.
ಎಸ್.ಐ.ಆರ್. ಬಗ್ಯೆ ಅಪಪ್ರಚಾರವಾಗುತ್ತಿದೆ. ಪಕ್ಷ ಯಾವ ರೀತಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು ಅವರು ಅದನ್ನು ಗಮನಿಸುತ್ತಾರೆ ಎಂದು ತಿಳಿಸಿದರು.
ಡಿ. ವಿ. ಸದಾನಂದ ಗೌಡ ತಮ್ಮನ್ನು ಸಂಪರ್ಕಿಸಿದ್ದಾರೆ. ಯಾವುದೇ ವಿಶಿಷ್ಟ ಮಾಹಿತಿ ನೀಡಿಲ್ಲ. ಬೆಂಗಳೂರಿಗೆ ಹೋದ ಮೇಲೆ ಅವರನ್ನು ಹಾಗೂ ಸಿ.ಟಿ. ರವಿ ಅವರನ್ನೂ ಸಂಪರ್ಕಿಸುವುದಾಗಿ ತಿಳಿಸಿದರು.
ಸಂಸರದ ಬ್ರಿಜೇಶ್ ಚೌಟ, ಬಿ.ಜೆ.ಪಿ. ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಗುರುರಾಜ ಗಂಟಿಹೊಳೆ, ಯಶಪಾಲ್ ಸುವರ್ಣ, ರಾಜೇಶ್ ನಾಯಕ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಕೆ. ಪ್ರತಾಪಸಿಂಹನಾಯಕ್, ಕಿಶೋರ್ ಕುಮಾರ್ ಮತ್ತು ಪಕ್ಷದ ಕಾರ್ಯಕರ್ತರಾದ ಜಯಂತ್ ಕೋಟ್ಯಾನ್ ಹಾಗೂ ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು. ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ14 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು17 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್17 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ15 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















