ಸ್ಥಳೀಯ
Kadaba-ಕಡಬ: ಮರಳಿನ ಕೃತಕ ಅಭಾವ ಸೃಷ್ಟಿಸಿ ಲೂಟಿ: 1,500 ಕಾರ್ಮಿಕ ಕುಟುಂಬಗಳು ಬೀದಿಗೆ – ಉಗ್ರ ಹೋರಾಟದ ಎಚ್ಚರಿಕೆ
ಕಡಬ ತಾಲೂಕಿನಲ್ಲಿ ಮರಳಿನ ಕೃತಕ ಅಭಾವ ಸೃಷ್ಟಿಸಿ, ಅವೈಜ್ಞಾನಿಕವಾಗಿ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ ಸಾರ್ವಜನಿಕರ ಹಗಲು ದರೋಡೆ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಪ್ರಮುಖ ಕ್ಷೇವಿಯರ್ ಬೇಬಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಕಡಬ: ಕಡಬ ತಾಲೂಕಿನಲ್ಲಿ ಮರಳಿನ ಕೃತಕ ಅಭಾವ ಸೃಷ್ಟಿಸಿ, ಅವೈಜ್ಞಾನಿಕವಾಗಿ ಹೆಚ್ಚಿನ ದರ ವಸೂಲಿ ಮಾಡುವ ಮೂಲಕ ಸಾರ್ವಜನಿಕರ ಹಗಲು ದರೋಡೆ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಪ್ರಮುಖ ಕ್ಷೇವಿಯರ್ ಬೇಬಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಸಂಕಷ್ಟದಲ್ಲಿ ಕಾರ್ಮಿಕ ಕುಟುಂಬಗಳು:
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಳು ದಂಧೆಯಿಂದಾಗಿ ತಾಲೂಕಿನ 60 ರಿಂದ 70 ಸಣ್ಣ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಗುತ್ತಿಗೆದಾರರನ್ನೇ ನಂಬಿಕೊಂಡಿರುವ ಸುಮಾರು 1,500ಕ್ಕೂ ಹೆಚ್ಚು ಕಾರ್ಮಿಕ ಕುಟುಂಬಗಳ ಜೀವನೋಪಾಯಕ್ಕೆ ಸಂಚಕಾರ ಬಂದಿದೆ. ಮರಳಿನ ಕೊರತೆಯಿಂದಾಗಿ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ ಎಂದು ಅಳಲು ತೋಡಿಕೊಂಡರು.
ಅವೈಜ್ಞಾನಿಕ ದರ – ಹಗಲು ದರೋಡೆ:
ದರ ಏರಿಕೆಯ ಬಗ್ಗೆ ವಿವರಿಸಿದ ಅವರು, “ದೂರದ ಊರುಗಳಿಂದ ಕಲ್ಲು ತಂದು ಕ್ರಷರ್‌ನಲ್ಲಿ ಸಿದ್ಧಪಡಿಸುವ ಒಂದು ಯೂನಿಟ್ ಜಲ್ಲಿ ಕೇವಲ ₹4,000 ರಿಂದ ₹5,000ಕ್ಕೆ ಸಿಗುತ್ತದೆ. ಆದರೆ ಕಡಬದ ಆಸುಪಾಸಿನಲ್ಲೇ ಸಿಗುವ ಮರಳಿಗೆ ₹8,000 ರಿಂದ ₹9,000 ವಸೂಲಿ ಮಾಡಲಾಗುತ್ತಿದೆ. ಇದು ಯಾವ ನ್ಯಾಯ?” ಎಂದು ಪ್ರಶ್ನಿಸಿದರು. ಸ್ಥಳೀಯರಿಗೆ ಮರಳು ಕೇಳಿದರೆ ‘ದಾಸ್ತಾನು ಇಲ್ಲ’ ಎನ್ನುವ ಮರಳುಗಾರರು, ಪ್ರತಿನಿತ್ಯ 30 ರಿಂದ 40 ಲೋಡ್ ಮರಳನ್ನು ಗುಟ್ಟಾಗಿ ಹೊರಜಿಲ್ಲೆಗಳಿಗೆ ಸಾಗಿಸುತ್ತಿದ್ದಾರೆ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.
ಅಧಿಕಾರಿಗಳ ವಿರುದ್ಧ ಆಕ್ರೋಶ:
ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ಕಣ್ಣೆದುರೇ ಈ ದಂಧೆ ನಡೆಯುತ್ತಿದ್ದರೂ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ. ಅಧಿಕಾರಿಗಳ ಈ ಮೌನವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಗುತ್ತಿಗೆದಾರರು ದೂರಿದ್ದಾರೆ.
ಗುತ್ತಿಗೆದಾರರ ಪ್ರಮುಖ ಬೇಡಿಕೆಗಳು:
ಸರ್ಕಾರವೇ ಮರಳಿಗೆ ನಿಗದಿತ ದರವನ್ನು ನಿಗದಿಪಡಿಸಬೇಕು.
ಜಲ್ಲಿ ಕಲ್ಲಿಗಿಂತ ಮರಳಿನ ದರ ಕಡಿಮೆ ಇರಬೇಕು.
ಮರಳು ಮಾರಾಟ ಕೇಂದ್ರಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು.
ಮರಳು ದಾಸ್ತಾನು ಕೇಂದ್ರಗಳಲ್ಲಿ ತೂಕದ ಮಾಪಕ ಅಳವಡಿಸಿ, ಗ್ರಾಹಕರಿಗೆ ತೂಕದ ಪ್ರಮಾಣಪತ್ರ ನೀಡಬೇಕು.
ಹೋರಾಟದ ಎಚ್ಚರಿಕೆ:
ಒಂದು ವೇಳೆ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ತಕ್ಷಣವೇ ಮರಳು ದಂಧೆಗೆ ಕಡಿವಾಣ ಹಾಕಿ ಸ್ಥಳೀಯರಿಗೆ ನ್ಯಾಯಯುತ ದರದಲ್ಲಿ ಮರಳು ಸಿಗುವಂತೆ ಮಾಡದಿದ್ದರೆ, ತಾಲೂಕಿನ ಎಲ್ಲಾ ಗುತ್ತಿಗೆದಾರರು ಮತ್ತು ಕಾರ್ಮಿಕರು ಒಗ್ಗೂಡಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಗುತ್ತಿಗೆದಾರರಾದ ವಿನೋದ್ ಪಿ.ಎ., ಸತೀಶ್ ರೈ ಕರ್ಮಣ, ಮಹಮ್ಮದ್ ರಪೀಕ್, ಅಬೂಬಕ್ಕರ್ ಪಿ. ಹಾಗೂ ಬಾಲಚಂದ್ರ ಮೈಕಾಜೆ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು7 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ10 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ12 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್12 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ12 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ11 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ7 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಬಿಗ್ ನ್ಯೂಸ್11 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















