ಸ್ಥಳೀಯ
Patte-ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ, ಯಕ್ಷದ್ರುವ ಪಟ್ಲ ಪೌಂಡೇಶನ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.)ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಶಿಕ್ಷಣ ತರಬೇತಿಯನ್ನು ಉದ್ಘಾಟನೆ ಮಾಡಿ ವಾಸುದೇವ ಐತಾಳ ಪಣಂಬೂರು ಪ್ರಧಾನ ಸಂಚಾಲಕರು,ಯಕ್ಷದ್ರುವ ಯಕ್ಷ ಶಿಕ್ಷಣ ಸಮಿತಿ ಇವರು ಮಾತನಾಡಿದರು.
ಪಟ್ಟೆ ಬಡಗನ್ನೂರು: ತಾನು ಪಡೆದ ಖ್ಯಾತಿಯನ್ನು ಇತರೆ ಕಲಾವಿದರಿಗೆ ಧಾರೆಯುವುದು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.) ಟ್ರಸ್ಟ್ ನ ಮುಖ್ಯ ಉದ್ದೇಶ ನಮ್ಮ ಮಣ್ಣಿನ ಕಲೆಯ ಮೂಲಕ ಸಂಸ್ಕೃತಿಯನ್ನು, ಕಲಿಕೆಯಲ್ಲಿ ಏಕಾಗ್ರತೆಯನ್ನು ಆತ್ಮಸ್ಥೈರ್ಯವನ್ನು ಮೂಡುವುದು.ಮನಸ್ಸಿಗೆ ನೆಮ್ಮದಿ ಕೊಡುವ ಕಲೆ ಅದೇ ಯಕ್ಷಗಾನದ ಕಲೆ ಎಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.)ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಶಿಕ್ಷಣ ತರಬೇತಿಯನ್ನು ಉದ್ಘಾಟನೆ ಮಾಡಿ ವಾಸುದೇವ ಐತಾಳ ಪಣಂಬೂರು ಪ್ರಧಾನ ಸಂಚಾಲಕರು,ಯಕ್ಷದ್ರುವ ಯಕ್ಷ ಶಿಕ್ಷಣ ಸಮಿತಿ ಇವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಗಣರಾಜ ಕುಂಬ್ಳೆ ಅವರು ಯಕ್ಷಗಾನಕಲೆ ಅತ್ಯಂತ ಪ್ರಿಯವಾದ ಕಲೆ. ಪುರಾಣದ ಪರಿಚಯ ಮಾಡಿಕೊಡುತ್ತದೆ,ಗ್ರಾಮೀಣ ಪ್ರದೇಶದಲ್ಲಿ ಯಕ್ಷಗಾನದ ಕಲೆಯನ್ನು ಪರಿಚಯಿಸುವ ಮುಖಾಂತರ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮಸ್ಥೈರ್ಯವನ್ನು ಉಂಟು ಮಾಡುವುದು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಪಟ್ಟೆ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ಟರು ಯಕ್ಷಗಾನ ಕಲೆಯು ಸರ್ವಾಂಗಿಣ ಬೆಳವಣಿಗೆಗೆ ಕಾರಣವಾಗಿದೆ. ಶಿಕ್ಷಣ ಕೇವಲ ಪಠ್ಯದಲ್ಲಿರುವ ವಿಷಯ ಮಾತ್ರವಲ್ಲದೆ ಯಕ್ಷಗಾನದ ಕಲೆಯನ್ನು ಮಕ್ಕಳಿಗೆ ನೀಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಶ್ರದ್ಧೆಯಿಂದ ಕಲಿತಾಗ ಸಂಸ್ಕಾರ, ಶಿಸ್ತು ತಾನಾಗಿಯೆ ಬರುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಚಾಲಕರಾದ ವಿಘ್ನೇಶ್ ಹಿರಣ್ಯ, ಯಕ್ಷದ್ರುವ ಯಕ್ಷ ಶಿಕ್ಷಣ ಸಮಿತಿ ಪುತ್ತೂರು ಸುಳ್ಯ ಇದರ ಸಂಚಾಲರಾದ ಪ್ರಶಾಂತ್ ರೈ ಮುಂಡಾಲ ಗುತ್ತು ನಾಟ್ಯಗುರುಗಳಾದ ಚಂದ್ರಶೇಖರ್ ಸುಳ್ಯಪದವು ಉಪಸ್ಥಿತರಿದ್ದರು.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್ ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
-
ರಾಜಕೀಯ23 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್6 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026

















