ಕರಾವಳಿ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನಪಡುವವರ ಸಂಖ್ಯೆ ಕಮ್ಮಿ […]" /> ಕರಾವಳಿ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನಪಡುವವರ ಸಂಖ್ಯೆ ಕಮ್ಮಿ […]"> Vidyamata-ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ.; "ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ" - Nikhara News | Kannada News Website
Connect with us

ಸ್ಥಳೀಯ

Vidyamata-ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ.; “ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ”

Published

on

Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್ ಬಿ. ಯವರು ಉದ್ಘಾಟಿಸಿದರು.

Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್ ಬಿ. ಯವರು ಉದ್ಘಾಟಿಸಿದರು.

Ad Widget

Ad Widget alt="Ad Widget"/>

Ad Widget

ಕರಾವಳಿ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನಪಡುವವರ ಸಂಖ್ಯೆ ಕಮ್ಮಿ ಇದ್ದು, ವಿದ್ಯಾಮಾತಾ ಅಕಾಡೆಮಿ ಇಂತಹ ಸಂದರ್ಭದಲ್ಲಿ ಜಾಗೃತಿಯನ್ನು ಮೂಡಿಸಿಕೊಂಡು ತರಬೇತಿ ನೀಡುವುದರ ಮೂಲಕ ಸರಕಾರಿ ಹುದ್ದೆಗಳಿಗೆ ಕರಾವಳಿ ಭಾಗದಿಂದ ಕೂಡ ಹೋಗಬಹುದು ಎಂದು ನಿರೂಪಿಸಿದ್ದಾರೆ.

Ad Widget

Ad Widget <> Ad Widget

ಪೋಲಿಸ್ ಸೇವೆಗಳಿಗೆ ಇನ್ನಷ್ಟು ಈ ಭಾಗದ ಯುವಕರು ಸೇರುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕೂಡ ಸ್ಥಳೀಯ ಅಭ್ಯರ್ಥಿಗಳೇ ಆಯ್ಕೆಯಾಗಬೇಕು ಎಂದು ಪ್ರಯತ್ನ ಪಡುತ್ತಿದೆ. ಸ್ಥಳೀಯ ಅಭ್ಯರ್ಥಿಗಳೇ ಆಯ್ಕೆಯಾದರೆ, ಸ್ಥಳೀಯ ಜನರ ನಾಡಿಮಿಡಿತ, ಆಚಾರ ವಿಚಾರಗಳ ಅನುಭವವಿರುತ್ತದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ನಡೆಯುವ ಯಾವುದೇ ಘಟನೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸಾಧ್ಯವಾಗುತ್ತದೆ. ಸರಕಾರ ಸುಮಾರು 70,000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು, ನೇಮಕಾತಿಗಳ ಹಬ್ಬವೇ ನಡೆಯಲಿದೆ. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕಿದೆ. ” ಎಂದು ತರಬೇತಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡ್ರಗ್ಸ್ ಇತ್ಯಾದಿ ಮಾದಕ ದ್ರವ್ಯಗಳಿಗೆ ಯುವಸಮುದಾಯ ಬಲಿಯಾಗುತ್ತಿರುವ ಬಗ್ಗೆಯೂ ಜಾಗೃತಿಯನ್ನು ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳು ಡ್ರಗ್ಸ್ ಇತ್ಯಾದಿ ಮಾದಕ ದ್ರವ್ಯಗಳಿಗೆ ಬಲಿಯಾಗದೆ ಸದೃಢ ಬದುಕನ್ನು ಕಟ್ಟಿಕೊಳ್ಳುವಂತೆ ಕರೆ ನೀಡಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ IAS / KAS ಪರೀಕ್ಷೆಗಳ ಪ್ರಖ್ಯಾತ ತರಬೇತುದಾರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಆಗಮಿಸಿದ ವಿದ್ಯಾಮಾತಾದ ಗೌರವ ತರಬೇತುದಾರರಾದ ರಘುನಾಥ್ ರವರು ” ನಾನು ರಾಜ್ಯದಾದ್ಯಂತ ಹತ್ತು ಹಲವಾರು ತರಬೇತಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ವಿದ್ಯಾಮಾತಾ ಅಕಾಡೆಮಿಯಲ್ಲಿ ಎಲ್ಲಿಯೂ ಇಲ್ಲದ ಶಿಸ್ತು, ಡಿಜಿಟಲ್ ತರಬೇತಿ ವ್ಯವಸ್ಥೆ, ಗ್ರಂಥಾಲಯ ಇದೆ. ಇದನ್ನು ಈ ಭಾಗದ ಯುವಸಮುದಾಯ ಉಪಯೋಗಿಸಕೊಳ್ಳಬೇಕು. ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ರವರು ಪ್ರಾಸ್ತಾವಿಕ ನೆಲೆಯಲ್ಲಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ, ವಿದ್ಯಾಮಾತಾ ಅಕಾಡೆಮಿಯ ಹಿತೈಷಿ ಮನೋಹರ್ ರೈ ರವರು, ಅಕಾಡೆಮಿಯ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಹಾಗೂ ತರಬೇತುದಾರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Ad Widget
Click to comment

Leave a Reply

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!