ನಿಧನ ವಾರ್ತೆ
Chikkaballapur-ಚಿಕ್ಕಬಳ್ಳಾಪುರ ಹೋಂ ಸ್ಟೇನಲ್ಲಿ ಬೆಂಗಳೂರಿನ ಯುವತಿ ನಿಗೂಢ ಸಾವು; ಅಸ್ವಸ್ಥ ಸ್ಥಿತಿಯಲ್ಲಿದ್ದ ಕೇರಳ ಮೂಲದ ಯುವಕ..!
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಬೆಂಗಳೂರಿನ ನಿವಾಸಿ ಸಾಯಿ ಸುರಭಿ ಎಂಬ ಯುವತಿಯ ಮೃತದೇಹ ಹೋಂ ಸ್ಟೇ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಹಗ್ಗ ಹಾಗೂ ಕೆಲವು ಮಾತ್ರೆಗಳು ಪತ್ತೆಯಾಗಿದ್ದು, ನೇಣು ಹಾಕಿಕೊಳ್ಳುವ ಮೊದಲು ವಿಷ ಸೇವಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಇದೇ ಕೊಠಡಿಯಲ್ಲಿದ್ದ ಕೇರಳ ಮೂಲದ ಸಂಜೀತ್ ಅಲಿ ಎಂಬ ಯುವಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಾಯಿಯ ಗಂಭೀರ ಆರೋಪ:
ಮೃತ ಯುವತಿಯ ತಾಯಿ ಮಾಧ್ಯಮಗಳ ಮುಂದೆ ಸಂಜೀತ್ ಅಲಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ಕಾಲೇಜು ದಿನಗಳಿಂದಲೇ ಪರಿಚಯವಾಗಿದ್ದ ಕ್ಯಾಬ್ ಚಾಲಕ ಸಂಜೀತ್, ಮಗಳಿಗೆ ಪ್ರೀತಿಯ ಬಲೆ ಬೀಸಿ ಡ್ರಗ್ಸ್ ವ್ಯಸನಕ್ಕೆ ದೂಡಿದ್ದ. ಆಕೆಗೆ ಚಿಕಿತ್ಸೆ ಕೊಡಿಸಿ ಗುಣಪಡಿಸಿದ್ದರೂ ಆತ ಕಿರುಕುಳ ನೀಡುವುದನ್ನು ಮುಂದುವರಿಸಿದ್ದ. ಇತ್ತೀಚೆಗೆ ಕೆಲಸಕ್ಕೆ ಸೇರಿದ್ದ ಮಗಳನ್ನು ಸತ್ಸಂಗದ ಹೆಸರಿನಲ್ಲಿ ನಂಬಿಸಿ ಆತನೇ ಹೋಂ ಸ್ಟೇಗೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ. ಇದೊಂದು ವ್ಯವಸ್ಥಿತ ಸಂಚು,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತನಿಖೆ ಮತ್ತು ಕಾನೂನು ಕ್ರಮ:
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರೂ ಬೇರೆ ಬೇರೆ ಕೋಮಿಗೆ ಸೇರಿದವರಾಗಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ‘ಲವ್ ಜಿಹಾದ್’ ಎಂಬ ಆರೋಪಗಳು ಕೇಳಿಬರುತ್ತಿವೆ. ಆದರೆ, ಪೊಲೀಸರು ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
“ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಎಫ್‌ಎಸ್‌ಎಲ್ ವರದಿ ಮತ್ತು ಅಸ್ವಸ್ಥ ಯುವಕನ ವಿಚಾರಣೆಯ ನಂತರವಷ್ಟೇ ಸತ್ಯಾಂಶ ತಿಳಿಯಲಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ,” ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮುದ್ದೇನಹಳ್ಳಿ ವ್ಯಾಪ್ತಿಯಲ್ಲಿ ಈ ಘಟನೆ ತೀವ್ರ ಸಂಚಲನ ಮೂಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮೃತಳ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ನಿಧನ ವಾರ್ತೆ
Accident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.
ಮೂಡುಬಿದಿರೆ, ಅ.8: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.
ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.
ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Nana Patekar-ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಗೋವಾದ ಡೊನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಬೆಳಗಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬಳಿಕ ಬೆಳಗ್ಗೆ ಸುಮಾರು 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ಅವರು ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯಕೀಯ ತಂಡ ಸತತ ಪ್ರಯತ್ನ ನಡೆಸಿತ್ತು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.
ನಾನಾ ಪಾಟೇಕರ್ ಅವರು ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ, ಗಂಭೀರ ಸಂಭಾಷಣೆ ಶೈಲಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
‘ಪರಿಂದಾ’, ‘ಕ್ರಾಂತಿವೀರ’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ವೆಲ್‌ಕಮ್’ ಚಿತ್ರದ ಉದಯ್ ಶೆಟ್ಟಿ ಪಾತ್ರದ ಮೂಲಕ ಹಾಸ್ಯಪ್ರಧಾನ ಅಭಿನಯದಲ್ಲೂ ಅವರು ಪ್ರೇಕ್ಷಕರ ಮನ ಗೆದ್ದಿದ್ದರು. ಕನ್ನಡದಲ್ಲಿಯೂ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು.
ಬಹುಮುಖ ಪ್ರತಿಭೆಯ ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
-
Uncategorized21 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized23 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized9 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
Uncategorized8 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಮಂಗಳೂರು7 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ಅಪರಾಧ8 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ7 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ7 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















