Connect with us

ನಿಧನ ವಾರ್ತೆ

Indian sailor-ವೆನಿಜುವೆಲಾದಲ್ಲಿ ಭಾರತೀಯ ನಾವಿಕನ ನಿಗೂಢ ಸಾವು: ಭಾರತಕ್ಕೆ ಬಂದ ಮೃತದೇಹದಲ್ಲಿ ಹೃದಯ, ಮೆದುಳು ಸಹಿತ ಬಹುತೇಕ ಅಂಗಗಳು ನಾಪತ್ತೆ

Published

on

Ad Widget

Ad Widget

Ad Widget

Ad Widget

ವೆನಿಜುವೆಲಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಂಬೈ ಮೂಲದ ಭಾರತೀಯ ನಾವಿಕ ರಾಕೇಶ್ ಚೌಹಾಣ್ (33) ಅವರ ನಿಗೂಢ ಸಾವು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿದೇಶದಿಂದ ಭಾರತಕ್ಕೆ ತರಲಾದ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ, ದೇಹದಲ್ಲಿದ್ದ ಮೆದುಳು, ಹೃದಯ, ಯಕೃತ್ತು ಸೇರಿದಂತೆ ಬಹುತೇಕ ಪ್ರಮುಖ ಅಂಗಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವೆನಿಜುವೆಲಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಂಬೈ ಮೂಲದ ಭಾರತೀಯ ನಾವಿಕ ರಾಕೇಶ್ ಚೌಹಾಣ್ (33) ಅವರ ನಿಗೂಢ ಸಾವು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿದೇಶದಿಂದ ಭಾರತಕ್ಕೆ ತರಲಾದ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ, ದೇಹದಲ್ಲಿದ್ದ ಮೆದುಳು, ಹೃದಯ, ಯಕೃತ್ತು ಸೇರಿದಂತೆ ಬಹುತೇಕ ಪ್ರಮುಖ ಅಂಗಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಏನಿದು ಘಟನೆ?
ಮೂಲತಃ ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯವರಾದ ರಾಕೇಶ್ ಚೌಹಾಣ್, ವೆನಿಜುವೆಲಾದಲ್ಲಿ ಮೆರೈನ್ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಮೇ 7ರಂದು ರಾಕೇಶ್ ಹಡಗಿನಲ್ಲಿ ಬಿದ್ದು ಗಾಯಗೊಂಡಿದ್ದಾರೆ ಎಂದು ಅವರ ತಂದೆಗೆ ಕಂಪನಿಯಿಂದ ಕರೆ ಬಂದಿತ್ತು. ಮರುದಿನವೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕಂಪನಿ ತಿಳಿಸಿತ್ತು.

Ad Widget

Ad Widget <> Ad Widget

ಭಾರತಕ್ಕೆ ಬಂದ ಶವದಲ್ಲಿ ಅಂಗಾಂಗಗಳೇ ಇಲ್ಲ!
ರಾಕೇಶ್ ಅವರ ಮೃತದೇಹ ಭಾರತಕ್ಕೆ ತಲುಪಿದಾಗ ಕುಟುಂಬಸ್ಥರಿಗೆ ಅನುಮಾನ ಮೂಡಿದೆ. ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ದಿಯೋರಿಯಾದಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ವೇಳೆ ವೈದ್ಯರ ತಂಡ ಬೆಚ್ಚಿಬೀಳುವ ವಿಷಯವೊಂದನ್ನು ಬಹಿರಂಗಪಡಿಸಿದೆ. ರಾಕೇಶ್ ಅವರ ದೇಹದಲ್ಲಿ ಮೆದುಳು, ಹೃದಯ, ಶ್ವಾಸಕೋಶ, ಯಕೃತ್ತು, ಮೂತ್ರಪಿಂಡ ಮತ್ತು ಕರುಳುಗಳು ಇರಲೇ ಇಲ್ಲ! ಕುತ್ತಿಗೆಯಿಂದ ತೊಡೆಯವರೆಗೆ ಹಾಗೂ ಎರಡು ಕಿವಿಗಳ ಮಧ್ಯೆ ಒಟ್ಟು 22 ಹೊಲಿಗೆ ಹಾಕಲಾಗಿತ್ತು. ದೇಹದಲ್ಲಿ ಅಂಗಾಂಶಗಳೇ ಇಲ್ಲದ ಕಾರಣ ಸಾವಿನ ನಿಖರ ಕಾರಣ ತಿಳಿಯುವುದು ಅಸಾಧ್ಯ ಎಂದು ವೈದ್ಯರು ಕೈಚೆಲ್ಲಿದ್ದಾರೆ.

ದಾಖಲೆಗಳಲ್ಲಿ ಗೋಲ್‌ಮಾಲ್ ಶಂಕೆ:
ಈ ಪ್ರಕರಣದ ಕುರಿತು ‘ಭಾರತೀಯ ನಾವಿಕರ ಸಂಘಟನೆ’ (FSUI) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕುಟುಂಬದ ಅನುಮತಿ ಇಲ್ಲದೆ ಅಂಗಾಂಗಗಳನ್ನು ಏಕೆ ತೆಗೆಯಲಾಯಿತು? ಎಂದು ಪ್ರಶ್ನಿಸಿದೆ. ಅಲ್ಲದೆ, ಮೃತದೇಹದ ದಾಖಲೆಗಳಲ್ಲಿರುವ ಪತ್ನಿಯ ಸಹಿ ಮತ್ತು ಹಡಗಿನ ಹೆಸರುಗಳಲ್ಲಿ ವ್ಯತ್ಯಾಸವಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Ad Widget

Ad Widget

ಸಮಗ್ರ ತನಿಖೆಗೆ ಆಗ್ರಹ:
ರಾಕೇಶ್ ಅವರಿಗೆ ಆರು ತಿಂಗಳ ಪುಟ್ಟ ಮಗುವಿದ್ದು, ಇಡೀ ಕುಟುಂಬದ ಜವಾಬ್ದಾರಿ ಅವರ ಮೇಲಿತ್ತು. ಲಕ್ಷಾಂತರ ರೂಪಾಯಿ ಸಾಲ ಮಾಡಿ ಅವರನ್ನು ವಿದೇಶಕ್ಕೆ ಕಳುಹಿಸಲಾಗಿತ್ತು. ಈಗ ಅವರ ನಿಗೂಢ ಸಾವು ಮತ್ತು ಅಂಗಾಂಗ ಕಳವಿನ ಶಂಕೆ ಕುಟುಂಬವನ್ನು ಕಂಗಾಲು ಮಾಡಿದೆ. ಈ ಬಗ್ಗೆ ವೆನಿಜುವೆಲಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿ ಸಮಗ್ರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಪರೀಕ್ಷೆಯಲ್ಲಿ ರಾಕೇಶ್ ಅವರ ದೇಹದಲ್ಲಿ ಮೆದುಳು, ಹೃದಯ, ಪಿತ್ತಕೋಶ, ಯಕೃತ್ತು, ಶ್ವಾಸಕೋಶಗಳು, ಮೂತ್ರಪಿಂಡಗಳು, ಕರುಳುಗಳು ಹಾಗೂ ಇತರೆ ಹಲವು ಪ್ರಮುಖ ಅಂಗಗಳು ಇಲ್ಲದಿರುವುದು ಪತ್ತೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕುತ್ತಿಗೆಯಿಂದ ತೊಡೆ ಭಾಗದವರೆಗೆ ಹಾಗೂ ಎರಡೂ ಕಿವಿಗಳ ನಡುವೆ ಒಟ್ಟು 22 ಹೊಲಿಗೆ ಗುರುತುಗಳು ಪತ್ತೆಯಾಗಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.ಅಂಗಾಂಶಗಳ ಮಾದರಿಗಳು ಲಭ್ಯವಿಲ್ಲದ ಕಾರಣ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚುವುದು ಸಾಧ್ಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಸಮಗ್ರ ತನಿಖೆಗೆ ಕುಟುಂಬದ ಒತ್ತಾಯ
ಘಟನೆಯ ಕುರಿತು ಪ್ರಮುಖ ಮಾಹಿತಿಗಳನ್ನು ಕಂಪನಿ ಮುಚ್ಚಿಟ್ಟಿದೆ ಎಂದು ಆರೋಪಿಸಿರುವ ಕುಟುಂಬ, ರಾಕೇಶ್ ಸಾವಿನ ಸುತ್ತಲಿನ ಎಲ್ಲಾ ಸಂದರ್ಭಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದೆ. ಜೊತೆಗೆ ಸೂಕ್ತ ಪರಿಹಾರ ನೀಡುವಂತೆಯೂ ಒತ್ತಾಯಿಸಿದೆ.

ಕೋವಿಡ್ ಸೋಂಕಿನಿಂದ ರಾಕೇಶ್ ಅವರ ತಾಯಿ ಮೃತಪಟ್ಟಿದ್ದರು. ಉತ್ತಮ ಜೀವನೋಪಾಯದ ನಿರೀಕ್ಷೆಯಲ್ಲಿ ಕುಟುಂಬ ಲಕ್ಷಾಂತರ ರೂ. ವೆಚ್ಚ ಮಾಡಿ ಅವರನ್ನು ವೆನಿಜುವೆಲಾಗೆ ಕಳುಹಿಸಿತ್ತು. ಸದ್ಯ ಪತ್ನಿ ರಂಜನಾ ತಮ್ಮ ಮಗುವಿನೊಂದಿಗೆ ತವರು ಮನೆಯಲ್ಲಿ ವಾಸವಾಗಿದ್ದು, ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!