ರಾಷ್ಟ್ರೀಯ
WhatsApp user name-ವಾಟ್ಸ್‌ಆ್ಯಪ್ ಯೂಸರ್ ನೇಮ್ ಫೀಚರ್: ಕೇಂದ್ರದ ನೋಟಿಸ್‌ಗೆ ಮೆಟಾ ನೀಡಿದ ಸ್ಪಷ್ಟನೆಗಳೇನು?
ಮೆಟಾ ಮಾಲಕತ್ವದ ವಾಟ್ಸ್ಆ್ಯಪ್ ವಿವಾದಾತ್ಮಕ ‘ಬಳಕೆದಾರ ಹೆಸರು’ (ಯೂಸರ್ ನೇಮ್) ಫೀಚರ್ ಬಗ್ಗೆ ಪದೇಪದೆ ಕೇಳಲಾಗುವ ಪ್ರಶ್ನೆಗಳ ವಿವರವನ್ನು ಮುಂದಿಟ್ಟಿದೆ. ಬಳಕೆದಾರ ಹೆಸರನ್ನು ಕಾಯ್ದಿರಿಸಲು ಪ್ರಾರಂಭಿಸಿದಾಗ ಅನುಕರಣೆ, ವಂಚನೆಗಳು ಮತ್ತು ಅನಗತ್ಯ ಸಂಪರ್ಕದ ಸುತ್ತಲಿನ ಕಳವಳಗಳನ್ನು ಹೇಗೆ ಪರಿಹರಿಸಲು ಯೋಜಿಸಿದೆ ಎಂಬುದರ ಕುರಿತು ವಿವರಗಳನ್ನು ನೀಡಿದೆ.
ಮೆಟಾ ಮಾಲಕತ್ವದ ವಾಟ್ಸ್ಆ್ಯಪ್ ವಿವಾದಾತ್ಮಕ ‘ಬಳಕೆದಾರ ಹೆಸರು’ (ಯೂಸರ್ ನೇಮ್) ಫೀಚರ್ ಬಗ್ಗೆ ಪದೇಪದೆ ಕೇಳಲಾಗುವ ಪ್ರಶ್ನೆಗಳ ವಿವರವನ್ನು ಮುಂದಿಟ್ಟಿದೆ. ಬಳಕೆದಾರ ಹೆಸರನ್ನು ಕಾಯ್ದಿರಿಸಲು ಪ್ರಾರಂಭಿಸಿದಾಗ ಅನುಕರಣೆ, ವಂಚನೆಗಳು ಮತ್ತು ಅನಗತ್ಯ ಸಂಪರ್ಕದ ಸುತ್ತಲಿನ ಕಳವಳಗಳನ್ನು ಹೇಗೆ ಪರಿಹರಿಸಲು ಯೋಜಿಸಿದೆ ಎಂಬುದರ ಕುರಿತು ವಿವರಗಳನ್ನು ನೀಡಿದೆ.
ಕೇಂದ್ರ ಸರ್ಕಾರದ ಕಳವಳದ ಹಿನ್ನೆಲೆಯಲ್ಲಿ ವಾಟ್ಸ್‌ಆ್ಯಪ್ ತನ್ನ ಹೊಸ ‘ಯೂಸರ್ ನೇಮ್’ ಫೀಚರ್ ಬಗ್ಗೆ ಎಫ್‌ಎಕ್ಯೂ (FAQ) ಮೂಲಕ ಸಮಗ್ರ ಮಾಹಿತಿ ನೀಡಿದೆ. ಅದರ ಮುಖ್ಯಾಂಶಗಳು ಇಲ್ಲಿವೆ:
- ಯೂಸರ್ ನೇಮ್ ಕಡ್ಡಾಯವೇ?
ಇಲ್ಲ. ಇದು ಸಂಪೂರ್ಣವಾಗಿ ಐಚ್ಛಿಕ (Optional). ಬಳಕೆದಾರರು ಬಯಸಿದರೆ ಮಾತ್ರ ಯೂಸರ್ ನೇಮ್ ಬಳಸಬಹುದು, ಇಲ್ಲದಿದ್ದರೆ ಎಂದಿನಂತೆ ಫೋನ್ ನಂಬರ್ ಮೂಲಕವೇ ಮುಂದುವರಿಯಬಹುದು. - ನಮಗೆ ಬೇಕಾದ ಹೆಸರು ಸಿಗದಿದ್ದರೆ ಏನು ಮಾಡಬೇಕು?
ಕೆಲವೊಮ್ಮೆ ನಿಮಗೆ ಬೇಕಾದ ಯೂಸರ್ ನೇಮ್ ಸಿಗದಿರಬಹುದು. ಇದಕ್ಕೆ ಪ್ರಮುಖ ಕಾರಣಗಳೆಂದರೆ:
ಆ ಹೆಸರನ್ನು ಈಗಾಗಲೇ ಅವರ ಇನ್‌ಸ್ಟಾಗ್ರಾಮ್ ಅಥವಾ ಫೇಸ್‌ಬುಕ್ ಖಾತೆದಾರರಿಗೆ ಮೀಸಲಿಡಲಾಗಿರಬಹುದು.
ಜನಪ್ರಿಯ ವ್ಯಕ್ತಿಗಳು, ಸೆಲೆಬ್ರಿಟಿಗಳು ಮತ್ತು ಸರ್ಕಾರಿ ಸಂಸ್ಥೆಗಳ ಹೆಸರನ್ನು ವಾಟ್ಸ್‌ಆ್ಯಪ್ ಮುಂಚಿತವಾಗಿಯೇ ತಡೆಹಿಡಿದಿದೆ (Reserved), ಇದನ್ನು ಅಧಿಕೃತ ಮಾಲೀಕರು ಮಾತ್ರ ಬಳಸಬಹುದು. - ವಂಚನೆ ಅಥವಾ ಸೋಗು ಹಾಕುವಿಕೆಯನ್ನು (Impersonation) ತಡೆಯುವುದು ಹೇಗೆ?
ಯಾರಾದರೂ ಪ್ರಸಿದ್ಧ ವ್ಯಕ್ತಿಗಳಂತೆ ನಟಿಸುವುದನ್ನು ತಡೆಯಲು ವಾಟ್ಸ್‌ಆ್ಯಪ್ ಕಠಿಣ ಕ್ರಮ ಕೈಗೊಂಡಿದೆ. ಹೊಸಬರಿಂದ ಮೆಸೇಜ್ ಬಂದಾಗ ಅವರ ದೇಶದ ಕೋಡ್ ಮತ್ತು ಮೂಲವನ್ನು ವಾಟ್ಸ್‌ಆ್ಯಪ್ ತೋರಿಸಲಿದೆ. ಸ್ಕ್ಯಾಮರ್‌ಗಳನ್ನು ಪತ್ತೆಹಚ್ಚಲು ‘ಬ್ಲಾಕ್ ಮತ್ತು ರಿಪೋರ್ಟ್’ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. - ನನ್ನ ಯೂಸರ್ ನೇಮ್ ಗೊತ್ತಿರುವವರು ನನಗೆ ಮೆಸೇಜ್ ಮಾಡಬಹುದೇ?
ಫೋನ್ ನಂಬರ್ ಹುಡುಕುವಂತೆ ಯೂಸರ್ ನೇಮ್ ಸರ್ಚ್ ಮಾಡಿ ಯಾರನ್ನೂ ಹುಡುಕಲು ಸಾಧ್ಯವಿಲ್ಲ. ಹೆಚ್ಚುವರಿ ಸುರಕ್ಷತೆಗಾಗಿ ನೀವು ‘ಯೂಸರ್ ನೇಮ್ ಕೀ’ (Username Key) ಬಳಸಬಹುದು. - ಏನಿದು ‘ಯೂಸರ್ ನೇಮ್ ಕೀ’?
ಇದು ನಿಮ್ಮ ಖಾತೆಗೆ ಎರಡನೇ ಹಂತದ ಭದ್ರತೆ ನೀಡುತ್ತದೆ. ಯಾರಾದರೂ ನಿಮ್ಮನ್ನು ಸಂಪರ್ಕಿಸಬೇಕೆಂದರೆ ಅವರಿಗೆ ನಿಮ್ಮ ಯೂಸರ್ ನೇಮ್ ಮತ್ತು ಯೂಸರ್ ನೇಮ್ ಕೀ ಎರಡೂ ತಿಳಿದಿರಬೇಕು. ಇದನ್ನು ನೀವು ಯಾವಾಗ ಬೇಕಾದರೂ ಬದಲಿಸಬಹುದು. - ಇತರ ಮೆಟಾ ಖಾತೆಗಳನ್ನು ಲಿಂಕ್ ಮಾಡಬೇಕೆ?
ನಿಮ್ಮ ಇನ್‌ಸ್ಟಾಗ್ರಾಮ್ ಅಥವಾ ಫೇಸ್‌ಬುಕ್‌ನಲ್ಲಿರುವ ಹೆಸರೇ ವಾಟ್ಸ್‌ಆ್ಯಪ್‌ನಲ್ಲೂ ಬೇಕೆಂದಿದ್ದರೆ ಮಾತ್ರ ಖಾತೆಗಳನ್ನು ಲಿಂಕ್ ಮಾಡಬೇಕಾಗುತ್ತದೆ. ಇದು ನೀವು ಆ ಹೆಸರಿನ ನಿಜವಾದ ಮಾಲೀಕರು ಎಂದು ಸಾಬೀತುಪಡಿಸಲು ಸಹಾಯ ಮಾಡುತ್ತದೆ. - ಯೂಸರ್ ನೇಮ್ ಬದಲಿಸಬಹುದೇ?
ಖಂಡಿತ. ನಿಮಗೆ ಬೇಕಾದ ಹೊಸ ಹೆಸರು ಲಭ್ಯವಿರುವವರೆಗೆ ಎಷ್ಟು ಬಾರಿಯಾದರೂ ನಿಮ್ಮ ಯೂಸರ್ ನೇಮ್ ಅನ್ನು ಬದಲಾಯಿಸುವ ಅವಕಾಶವಿರುತ್ತದೆ.
ವಾಟ್ಸ್‌ಆ್ಯಪ್ ಪ್ರಕಾರ, ಈ ಫೀಚರ್‌ನಿಂದ ಬಳಕೆದಾರರ ವೈಯಕ್ತಿಕ ಫೋನ್ ನಂಬರ್‌ಗಳನ್ನು ಅಪರಿಚಿತರಿಗೆ ನೀಡುವ ಅಗತ್ಯವಿರುವುದಿಲ್ಲ, ಇದು ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ಪುತ್ತೂರು22 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಅಪರಾಧ24 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
Uncategorized3 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized2 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ


















