ಜುಲೈ 18ರಂದು ಪುತ್ತೂರು ಪತ್ರಿಕಾ […]" /> ಜುಲೈ 18ರಂದು ಪುತ್ತೂರು ಪತ್ರಿಕಾ […]"> Puttur-ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ: ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ - Nikhara News | Kannada News Website
Connect with us

ಬಿಗ್ ನ್ಯೂಸ್

Puttur-ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ: ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

Published

on

Ad Widget

Ad Widget

Ad Widget

Ad Widget

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರ ಸ್ಮರಣೆಯಲ್ಲಿ ಅತ್ಯುತ್ತಮ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ಪ್ರಶಸ್ತಿ ನೀಡಲು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರ ಸ್ಮರಣೆಯಲ್ಲಿ ಅತ್ಯುತ್ತಮ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ಪ್ರಶಸ್ತಿ ನೀಡಲು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದೆ.

Ad Widget

Ad Widget alt="Ad Widget"/>

Ad Widget

ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

Ad Widget

Ad Widget <> Ad Widget

ಉಪವಿಭಾಗ ಮಟ್ಟದ ಆಯ್ಕೆ:

ಪುತ್ತೂರು, ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಸೇರಿದ ಪುತ್ತೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಯನಿರತ ಪತ್ರಕರ್ತರು 2025ರ ಜನವರಿ 1ರಿಂದ ಅದೇ ವರ್ಷದ ಡಿಸೆಂಬರ್ 31ರ ಅವಧಿಯಲ್ಲಿ ಪತ್ರಿಕೆಗಳಲ್ಲಿ ಬರೆದಿರುವ ಅತ್ಯುತ್ತಮ ಮಾನವಾಸಕ್ತಿಯ ವರದಿಗಳಲ್ಲಿ ಆಯ್ಕೆ ಮಾಡಿ ಒಬ್ಬ ವರದಿಗಾರನಿಗೆ ಬಿ.ಟಿ. ರಂಜನ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ನಾಲ್ಕು ತಾಲೂಕುಗಳ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಆಯಾ ತಾಲೂಕುಗಳ ಕಾರ್ಯನಿರತ ಪತ್ರಕರ್ತರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 2025ರಲ್ಲಿ ಪ್ರಕಟವಾದ, ತಮ್ಮ ಬೈಲೈನ್ ಹೊಂದಿರುವ ಮಾನವಾಸಕ್ತಿಯ ವರದಿಗಳ 2 ಪ್ರತಿಗಳನ್ನು ವರದಿಗಾರರು ತಮ್ಮ ತಾಲೂಕು ಸಂಘದ ದೃಢೀಕರಣ ಪತ್ರದೊಂದಿಗೆ ಜುಲೈ 11ರ ಒಳಗೆ –ಅಧ್ಯಕ್ಷರು, ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲುಜೆ ಘಟಕ), ಪತ್ರಿಕಾ ಭವನ, ಪುತ್ತೂರು ಈ ವಿಳಾಸಕ್ಕೆ ಕಳುಹಿಸಿ ಕೊಡಲು ಕೋರಲಾಗಿದೆ. ಒಬ್ಬ ವರದಿಗಾರ ಒಂದಕ್ಕಿಂತ ಹೆಚ್ಚು ವರದಿಗಳ ಪ್ರತಿಗಳನ್ನು ಕಳಿಸಬಹುದು.

Ad Widget

Ad Widget

ಪ್ರಶಸ್ತಿಗೆ ಬಂದ ಮಾನವಾಸಕ್ತಿಯ ವರದಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸಿ ಒಂದು ಅತ್ಯುತ್ತಮ ವರದಿಯನ್ನು 2026ನೇ ಸಾಲಿನ ಬಿ.ಟಿ. ರಂಜನ್ ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಜು.18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪುತ್ತೂರು ತಾಲೂಕು ಕಾರ್ಯನಿರತ ಪತ್ರಿಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ, ಪ್ರಧಾನ ಕಾರ್ಯದರ್ಶಿ ಸಿ.ಶೇ. ಕಜೆಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ ಬಿ.ಟಿ.ರಂಜನ್:

ಸುಮಾರು 4 ದಶಕಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಬಿ.ಟಿ. ರಂಜನ್ ಅವರು ಮೂಲತಃ ಉಪ್ಪಿನಂಗಡಿ ನಿವಾಸಿಯಾಗಿದ್ದು, ಮಂಗಳೂರು ಮಿತ್ರ, ಮುಂಗಾರು, ಉದಯವಾಣಿ, ಹೊಸದಿಗಂತ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ, ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನ ಮಾಧ್ಯಮ ಗೌರವ ಸೇರಿದಂತೆ ಅನೇಕ ಪುರಸ್ಕಾರಗಳು ಇವರಿಗೆ ಸಂದಿದ್ದವು. 2022ರ ಫೆ.5ರಂದು ಇವರು ನಿಧನರಾಗಿದ್ದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿ ಬಿ.ಟಿ. ರಂಜನ್ ವಹಿಸಿದ ನೇತೃತ್ವ ಮತ್ತು ಪತ್ರಿಕಾ ಕ್ಷೇತ್ರಕ್ಕೆ ಸಲ್ಲಿಸಿದ ಸುದೀರ್ಘ ಸೇವೆಯ ನೆನಪನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಬಿ.ಟಿ. ರಂಜನ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಬಿಗ್ ನ್ಯೂಸ್

Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.

ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.

Ad Widget

Ad Widget

ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.

ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.

ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.

ಸಮಗ್ರ ತೋಟಗಾರಿಕಾ ಸೇವೆ:

ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!