Connect with us

ಸ್ಥಳೀಯ

Excel-ಆರೋಗ್ಯಯುತ ಸಮಾಜದ ನಿರ್ಮಾಣ ಶಿಕ್ಷಣದಿಂದ ಸಾಧ್ಯ – ಅದಕ್ಕೆ ಎಕ್ಸೆಲ್ ಮಾದರಿಯಾಗಿದೆ : ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆ,ಇಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳ ನೇತೃತ್ವದಿಂದ ಹಮ್ಮಿಕೊಂಡಿದ್ದ ಶೃಂಗ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿಯವರು ಮಾತನಾಡಿ ಶಿಕ್ಷಣದ ಉದ್ದೇಶ ಕೇವಲ ಜ್ಞಾನವನ್ನು ಪಡೆಯುವುದಲ್ಲ, ಭವಿಷ್ಯದ ಸಮಾಜವನ್ನು ನಿರ್ಮಾಣ ಮಾಡುವುದಾಗಿದೆ ಎಂದು ತಿಳಿಸಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಜು. 5: “ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದು,ಈ ಕಾಲೇಜಿನಿಂದ ವಿದ್ಯಾರ್ಜನೆ ಪಡೆದು ಹೊರಹೊಮ್ಮುತ್ತಿರುವ  ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಲ್ಲರು ಯಾಕಂದರೆ ಆರೋಗ್ಯವಂತ ಸಮಾಜ ನಿರ್ಮಾಣ ಎಕ್ಸೆಲ್ ನಂತಹ ಶಿಕ್ಷಣ ಸಂಸ್ಥೆಯಿಂದ ಸಾಧ್ಯವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ ಯವರು ಶೈಕ್ಷಣಿಕ ಸಾಧಕರನ್ನು ಅಭಿನಂದಿಸಿದರು.

Ad Widget

Ad Widget alt="Ad Widget"/>

Ad Widget

ಎಕ್ಸೆಲ್ ಪಿ ಯು ಕಾಲೇಜು
ಗುರುವಾಯನಕೆರೆ,ಇಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳ ನೇತೃತ್ವದಿಂದ ಹಮ್ಮಿಕೊಂಡಿದ್ದ ಶೃಂಗ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಶಿಕ್ಷಣದ ಉದ್ದೇಶ ಕೇವಲ ಜ್ಞಾನವನ್ನು ಪಡೆಯುವುದಲ್ಲ, ಭವಿಷ್ಯದ ಸಮಾಜವನ್ನು ನಿರ್ಮಾಣ ಮಾಡುವುದಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಈ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾದ ಅಮೇರಿಕಾದ ,ನ್ಯೂಯಾರ್ಕ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ರವೀಶ್ ಮಯ್ಯ ರವರು  ವಿದ್ಯಾರ್ಥಿಗಳು ನಾಳಿನ ಭವಿಷ್ಯದ ಸೃಷ್ಟಿಕರ್ತರು ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರನ್ನು ಆದರ್ಶವಾಗಿಸಿಕೊಂಡು ಮುಂದಿನ ಭವಿಷ್ಯವನ್ನು ಸುಭದ್ರವಾಗಿ ನಿರ್ಮಾಣ ಮಾಡಿಕೊಳ್ಳಬೇಕೆಂದು ಹಿತನುಡಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳೂರು ಇಲ್ಲಿನ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ವಿದ್ಯಾರ್ಥಿಗಳನ್ನು ಕುರಿತು ಆಕಾಶದಲ್ಲಿ ಹಾರುವ ಹಕ್ಕಿಗಳ ಹಾಗೆ ನಮ್ಮ ಕನಸುಗಳು ಸದಾ ಮೇಲ್ಮುಖವಾಗಿ ಇರಬೇಕು ಎಂದು ಸ್ಪೂರ್ತಿದಾಯಕ ಮಾತು ಗಳೊಂದಿಗೆ ಶೈಕ್ಷಣಿಕ ಸಾಧಕರನ್ನು ಸನ್ಮಾನಿಸಿದರು.

Ad Widget

Ad Widget

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿವರ್ಯರಾಗಿ ಆಗಮಿಸಿದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ರವರು ಶೈಕ್ಷಣಿಕ ಸಾಧಕರಿಗೆ ಸನ್ಮಾನವನ್ನು ಮಾಡಿ ಅಭಿನಂದಿಸಿದರು.ಹಾಗೆಯೇ   ಕಾರ್ಯಕ್ರಮಕ್ಕೆ ಆಗಮಿಸಿದ ಮತ್ತೋರ್ವ ಅತಿಥಿವರ್ಯರಾದ ಶಿವಪ್ರಸಾದ್ ಅಜಿಲ ವಿಶ್ರಾಂತ ಅಭಿಯಂತರರು ಹಾಗೂ ಆಡಳಿತ ಮೊಕೆಸ್ತರರು ಶ್ರೀ ಸತ್ಯ ದೇವತಾ ದೇವಸ್ಥಾನ ಅಳದಂಗಡಿ ,ಇವರು ಶೈಕ್ಷಣಿಕ ವಿದ್ಯಾರ್ಥಿಗಳನ್ನು ಮನತುಂಬಿ ಅಭಿನಂದಿಸಿದರು.

” ಸಾಧನೆ ವ್ಯಕ್ತಿಯ ಹೊಣೆಗಾರಿಕೆಯನ್ನು ವಿಶಾಲಗೊಳಿಸುತ್ತದೆ’ ಸಾಧನೆ ಎಂಬುದು ನಿರಂತರ ಪ್ರಕ್ರಿಯೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಸಾಧಿಸಬೇಕೆನ್ನುವ ಛಲ ಇನ್ನಷ್ಟು ವೃದ್ಧಿಯಾಗಲಿ ಎಂದು ಸುಮಂತ್ ಕುಮಾರ್ ಜೈನ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.

ಈ ಕಾರ್ಯಕ್ರಮದ ಭಾಗವಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ಪ್ರತಿ ಬಗ್ಗೆ ವೇದಿಕೆಯಾಗಿದ್ದ ಈ ಕಾರ್ಯಕ್ರಮದಲ್ಲಿ ನೃತ್ಯ, ಗಾಯನ ಸಮೂಹ ಗಾಯನ, ವಿವಿಧ ರೂಪಕಗಳು, ಭರತನಾಟ್ಯ, ಹುಲಿ ಕುಣಿತ, ಕೊಡವ ನೃತ್ಯ ಹೀಗೆ ವೈವಿಧ್ಯತೆಯ ಕ್ರಮಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಚಾಲನೆ ನೀಡಿದರು. ಪ್ರಾಚಾರ್ಯರಾದ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರೆ ಉಪ ಪ್ರಾಚಾರ್ಯರಾದ ರೋಹಿತ್ ರವರು ವಂದಿಸಿದರು.

ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರಸನ್ನ ಭೋಜ, ಅರುಣ್ ಕ್ರಾಸ್ಟೋಲಿನ್ , ಅನನ್ಯ ಜೈನ್ ಮತ್ತು ಕನ್ನಡ ಉಪನ್ಯಾಸಕರಾದ ಮೊಹಮ್ಮದ್ ಮುನೀರ್ ಇಂಗ್ಲೀಷ್ ಉಪನ್ಯಾಸಕಿ ಅಂಜನಿ ರಾವ್ ಅವರು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ಡಾ ಪ್ರಜ್ವಲ್ ಕಜೆ , ಎಕ್ಸೆಲ್ ಟೆಕ್ನೊ ಸ್ಕೂಲ್ ಮುಖ್ಯೋಪಾಧ್ಯಾಯರಾದ ಸುಮಿತ್ರಾ, ಆಡಳಿತಾಧಿಕಾರಿ ಕೀರ್ತಿನಿಧಿ ಜೈನ್, ಸಂಯೋಜಕರಾದ ನಿಶಾ ಪೂಜಾರಿ, ಶ್ರೀನಿಧಿ, ವೇಣೂರು ಎಕ್ಸೆಲ್ ಸ್ಕೂಲ್ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್,ನಿಲಯ ಮೇಲ್ವಿಚಾರಕರಾದ ಮಲ್ಲೇಶ್ ಜೈನ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು, ಪೋಷಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!