Connect with us

ಅಪರಾಧ

Udupi-ಉಡುಪಿ: ಮದುವೆ ಆಮಿಷವೊಡ್ಡಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಗರ್ಭಿಣಿಯಾದ ಬಳಿಕ ಕಾಮುಕರ ಕೃತ್ಯ ಬಯಲು

Published

on

Ad Widget

Ad Widget

Ad Widget

Ad Widget

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಈ ಬಾಲಕಿಯು ಉಡುಪಿಗೆ ಕೆಲಸಕ್ಕೆಂದು ಬಂದಿದ್ದಳು. ಈ ಸಂದರ್ಭದಲ್ಲಿ ಬಾಲಕಿಯ ಪರಿಚಯ ಮಾಡಿಕೊಂಡ ಅಸ್ಸಾಂ ಮೂಲದ ಕುಶಾಲ್, ರಾಜೇಶ್ ಮತ್ತು ಕೌಶಲ್ ಎಂಬುವವರು ಆಕೆಗೆ ಮದುವೆಯಾಗುವ ಸುಳ್ಳು ಭರವಸೆ ನೀಡಿದ್ದರು. ಕಳೆದ ಡಿಸೆಂಬರ್ ತಿಂಗಳಿನಿಂದ ಈ ಮೂವರು ಆರೋಪಿಗಳು ಬಾಲಕಿಯನ್ನು ಒಬ್ಬರಾದ ಮೇಲೊಬ್ಬರಂತೆ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget

Ad Widget <> Ad Widget

ಬೆಳಕಿಗೆ ಬಂದ ಕೃತ್ಯ:
ಆರೋಪಿಗಳ ಸತತ ದೌರ್ಜನ್ಯದಿಂದಾಗಿ ಬಾಲಕಿ ಈಗ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾದ ಬಾಲಕಿ, ತನ್ನ ಆಪ್ತರ ನೆರವಿನೊಂದಿಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.

ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಮೂವರು ಆರೋಪಿಗಳ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Click to comment

Leave a Reply

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading

ಅಪರಾಧ

Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ

Published

on

Ad Widget

Ad Widget

Ad Widget

Ad Widget

ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್‌ನಲ್ಲಿ ‘INDIA STORES FOR YOU’ ಎಂಬ ಆನ್‌ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್‌ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.

Ad Widget

Ad Widget <> Ad Widget

ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್‌ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.

ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.

Ad Widget

Ad Widget

ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.

ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.

Ad Widget
Continue Reading

ಅಪರಾಧ

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ

Published

on

Ad Widget

Ad Widget

Ad Widget

Ad Widget

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಪಟ್ಟಣಗೆರೆಯ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್‌ನಲ್ಲಿ ಹಾಜರಿದ್ದರು ಎನ್ನಲಾಗಿದೆ.

Ad Widget

Ad Widget <> Ad Widget

ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.

‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್‌ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್‌ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

Ad Widget

Ad Widget

ಈಗಾಗಲೇ ಪಟ್ಟಣಗೆರೆ ಶೆಡ್‌ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.

ಧನ್ವಿರ್‌ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.

ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.

Ad Widget
Continue Reading
ರಾಜಕೀಯ10 minutes ago

Priyanka Kharge-ಕರ್ನಾಟಕದ ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ; ಬೆಂಗಳೂರಿನ ಬೆಳವಣಿಗೆಯ ಅಂತರವನ್ನು ಕಡಿಮೆ ಮಾಡುವ ಸಾಮರ್ಥ್ಯ ಮಂಗಳೂರಿಗಿದೆ; ಹೂಡಿಕೆ, ಕೌಶಲ್ಯಾಭಿವೃದ್ಧಿ ಮತ್ತು ನವೋದ್ಯಮಗಳ ಮೂಲಕ ಬಿಯಾಂಡ್ ಬೆಂಗಳೂರು ಅಭಿಯಾನವನ್ನು ವೇಗಗೊಳಿಸಲು ಉದ್ಯಮ ವಲಯಕ್ಕೆ ಸಚಿವರ ಕರೆ

ನಿಧನ ವಾರ್ತೆ22 minutes ago

Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು

ಬಿಗ್ ನ್ಯೂಸ್33 minutes ago

Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!