ನಗರದ ಶಂಕರಪುರ ಪೊಲೀಸ್ ಠಾಣೆಯಲ್ಲಿ ಜುಲೈ 7ರಂದು ಈ ಎಫ್‌ಐಆರ್ […]" /> ನಗರದ ಶಂಕರಪುರ ಪೊಲೀಸ್ ಠಾಣೆಯಲ್ಲಿ ಜುಲೈ 7ರಂದು ಈ ಎಫ್‌ಐಆರ್ […]"> Aryavardhan Guruji-ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ; ಆರ್ಯವರ್ಧನ್ ಗುರೂಜಿ ವಿರುದ್ಧ FIR ದಾಖಲು - Nikhara News | Kannada News Website
Connect with us

ಅಪರಾಧ

Aryavardhan Guruji-ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ; ಆರ್ಯವರ್ಧನ್ ಗುರೂಜಿ ವಿರುದ್ಧ FIR ದಾಖಲು

Published

on

Ad Widget

Ad Widget

Ad Widget

Ad Widget

ಮಹಿಳೆಯರ ಕುರಿತು ಅವಹೇಳನಕಾರಿ ಮಾತು ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಗ್‌ಬಾಸ್ ಖ್ಯಾತಿಯ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಹಿಳೆಯರ ಕುರಿತು ಅವಹೇಳನಕಾರಿ ಮಾತು ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಗ್‌ಬಾಸ್ ಖ್ಯಾತಿಯ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ನಗರದ ಶಂಕರಪುರ ಪೊಲೀಸ್ ಠಾಣೆಯಲ್ಲಿ ಜುಲೈ 7ರಂದು ಈ ಎಫ್‌ಐಆರ್ ದಾಖಲಾಗಿದ್ದು, ಗೋವು ರಕ್ಷಕರ ಸೇನೆಯ ಸಂಸ್ಥಾಪಕ ಎಸ್.ಜಿ. ಸುಮನ್ ಕುಮಾರ್ ಅವರು ದೂರು ನೀಡಿದ್ದಾರೆ.

Ad Widget

Ad Widget <> Ad Widget

ದೂರಿನ ವಿವರ:
ಆರ್ಯವರ್ಧನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡುವಾಗ ಅಶ್ಲೀಲ ಪದಗಳನ್ನು ಬಳಸಿದ್ದಾರೆ. ಮುಖ್ಯವಾಗಿ ಹೆಣ್ಣು ಮಕ್ಕಳ ಶಾರೀರಿಕ ವಿಚಾರಗಳನ್ನು ಪ್ರಸ್ತಾಪಿಸಿ ಅವರನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದು ಸ್ತ್ರೀ ಕುಲಕ್ಕೆ ಎಸಗಿದ ಅಪಮಾನ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಕೃತ್ಯವಾಗಿದೆ ಎಂದು ಸುಮನ್ ಕುಮಾರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಆರ್ಯವರ್ಧನ್ ಗುರೂಜಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಆಗ್ರಹಿಸಿದ್ದಾರೆ. ಶಂಕರಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.

Click to comment

Leave a Reply

ಅಂತರ ರಾಜ್ಯ

Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ

Published

on

Ad Widget

Ad Widget

Ad Widget

Ad Widget

ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

Ad Widget

Ad Widget <> Ad Widget

ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್‌ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.

Ad Widget

Ad Widget

ರೈಲಿನಲ್ಲಿ ಬೆಂಕಿ ಹಚ್ಚುವುದು ಅಥವಾ ಸುಡುವ ವಸ್ತುಗಳ ಬಳಕೆಯಂತಹ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಪ್ರಯಾಣಿಕರು ತಕ್ಷಣ ದೂರು ನೀಡುವಂತೆ ರೈಲ್ವೆ ಸೂಚಿಸಿದೆ. ಇಂತಹ ಘಟನೆಗಳನ್ನು ‘ರೈಲ್ ಮದದ್’ ಪೋರ್ಟಲ್ ಮೂಲಕ ಅಥವಾ 139 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ವರದಿ ಮಾಡಬಹುದಾಗಿದೆ

Ad Widget
Continue Reading

ಸ್ಥಳೀಯ

Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ

Published

on

Ad Widget

Ad Widget

Ad Widget

Ad Widget

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget <> Ad Widget

ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.

Ad Widget

Ad Widget

ವಿಚಾರಣೆ ವೇಳೆ ಆರೋಪಿಗಳು ಕಳವು ಮಾಡಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 15.340 ಗ್ರಾಂ ತೂಕದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Ad Widget
Continue Reading

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!