ಅಪರಾಧ
Mangalore-ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕನಿಗೆ 20 ವರ್ಷ ಕಠಿಣ ಶಿಕ್ಷೆ..!
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಅಪರಾಧಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. ಗುರುಪುರ ಅಡ್ಡೂರು ಕೆಳಗಿನಕೆರೆಮನೆ ನಿವಾಸಿ ಅಫ್ರಿದಿ (20) ಶಿಕ್ಷೆಗೆ ಗುರಿಯಾದ ಆರೋಪಿ.
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಅಪರಾಧಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.
ಗುರುಪುರ ಅಡ್ಡೂರು ಕೆಳಗಿನಕೆರೆಮನೆ ನಿವಾಸಿ ಅಫ್ರಿದಿ (20) ಶಿಕ್ಷೆಗೆ ಗುರಿಯಾದ ಆರೋಪಿ. ಶಿಕ್ಷೆಯ ಜೊತೆಗೆ ನ್ಯಾಯಾಲಯವು ಆರೋಪಿಗೆ ₹55,000 ದಂಡ ವಿಧಿಸಿದೆ.
ಪ್ರಕರಣದ ಹಿನ್ನೆಲೆ:
ಬಂಟ್ವಾಳ ತಾಲ್ಲೂಕಿನ ವೃತ್ತಿಪರ ಕೋರ್ಸ್ ಕಲಿಯುತ್ತಿದ್ದ 17 ವರ್ಷದ ಬಾಲಕಿಗೆ ಇನ್ಸ್ಟಾಗ್ರಾಂ ಮೂಲಕ ಅಫ್ರಿದಿ ಪರಿಚಯವಾಗಿದ್ದನು. ಪ್ರೀತಿಯ ನಾಟಕವಾಡಿದ್ದ ಈತ, ಮದುವೆಯಾಗುವುದಾಗಿ ನಂಬಿಸಿ ಬಾಲಕಿಯೊಂದಿಗೆ ಸಲುಗೆ ಬೆಳೆಸಿದ್ದನು. ಎರಡು ವರ್ಷಗಳ ಹಿಂದೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು.
ವೀಡಿಯೋ ಮಾಡಿ ಬ್ಲ್ಯಾಕ್ಮೇಲ್:
ದೌರ್ಜನ್ಯದ ವೇಳೆ ವೀಡಿಯೋ ಚಿತ್ರೀಕರಿಸಿಕೊಂಡಿದ್ದ ಆರೋಪಿ, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಬಾಲಕಿಯ ಮೇಲೆ ಪದೇ ಪದೇ ದೌರ್ಜನ್ಯ ಎಸಗುತ್ತಿದ್ದನು. ಕಳೆದ ವರ್ಷ ಬಾಲಕಿಯ ಪೋಷಕರು ಮನೆ ಬದಲಾಯಿಸಿ ಬೇರೆ ತಾಲ್ಲೂಕಿಗೆ ಹೋದರೂ, ಅಲ್ಲಿಗೂ ವಿಳಾಸ ಹುಡುಕಿಕೊಂಡು ಹೋಗಿ ತನ್ನ ಕೃತ್ಯ ಮುಂದುವರಿಸಿದ್ದನು. ಕೊನೆಗೆ ಮದುವೆಯಾಗಲು ನಿರಾಕರಿಸಿದಾಗ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಘಟನೆಯ ನಂತರ ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯದ ತೀರ್ಪು:
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎಸ್. ಮಾನು ಅವರು ಆರೋಪಿ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ 20 ವರ್ಷಗಳ ಕಠಿಣ ಶಿಕ್ಷೆ ಪ್ರಕಟಿಸಿದ್ದಾರೆ. ಅಲ್ಲದೆ, ದಂಡದ ಮೊತ್ತ ಸೇರಿದಂತೆ ಒಟ್ಟು ₹6 ಲಕ್ಷ ರೂಪಾಯಿಯನ್ನು ಪರಿಹಾರ ರೂಪದಲ್ಲಿ ಸಂತ್ರಸ್ತ ಬಾಲಕಿಗೆ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ.
ಸಂತ್ರಸ್ತೆಯ ಪರವಾಗಿ ಸರ್ಕಾರಿ ವಕೀಲರಾದ ಸಹನಾದೇವಿ ಬೋಳೂರು ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು. ಶೋಷಣೆಗೆ ಒಳಗಾದ ಬಾಲಕಿಗೆ ನ್ಯಾಯ ಸಿಕ್ಕಂತಾಗಿದೆ.
ಅಪರಾಧ
FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್ಐಆರ್
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.
ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಸ್ಥಳೀಯ
Baindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.
ಬೈಂದೂರು, ನ.19: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.
ಕಳೆದ ಆಗಸ್ಟ್ 2ರಂದು ರೊಬಿನ್ ಫೆರ್ನಾಂಡಿಸ್ ಅವರು ಮಂಗಳೂರಿನಿಂದ ಮಡಗಾಂವ್ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಿನ ಜಾವ ಸುಮಾರು 2 ಗಂಟೆಗೆ ರೈಲು ಬೈಂದೂರು ನಿಲ್ದಾಣದ ಬಳಿ ತಲುಪಿದ ಸಂದರ್ಭದಲ್ಲಿ ಅವರ 17 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಕಳವಾಗಿತ್ತು. ಬಳಿಕ ಕಳವು ಮಾಡಿದ ಮೊಬೈಲ್ನಲ್ಲಿದ್ದ UPI ಆ್ಯಪ್ ಮೂಲಕ ಆರೋಪಿಯು 19,847 ರೂ. ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ವಿಚಾರಣೆ ವೇಳೆ ಪ್ರಹ್ಲಾದ್, ತನ್ನ ಸಹಚರ ಜೋಶಿ ನಾರಾಯಣ ನಾಯಕ್ ಜೊತೆ ಸೇರಿ ಬೈಂದೂರು ಸಮೀಪ ಆಗಸ್ಟ್ 2, ಅಕ್ಟೋಬರ್ 13 ಹಾಗೂ ಮಾರ್ಚ್ 6ರಂದು ರೈಲು ಪ್ರಯಾಣಿಕರ ಮೊಬೈಲ್ ಫೋನ್ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
-
ಬಿಗ್ ನ್ಯೂಸ್19 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ21 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ3 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಬಿಗ್ ನ್ಯೂಸ್24 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಅಪರಾಧ2 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸ್ಥಳೀಯ2 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ2 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಚಿನ್ನ-ಬೆಳ್ಳಿ ದರ2 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!















