[…]" /> […]"> Puttur-ಪುತ್ತೂರು: 7 ವರ್ಷಗಳ ಹಿಂದಿನ ಸುಲಿಗೆ ಪ್ರಕರಣ; 41 ಬಾರಿ ವಾರೆಂಟ್ ಹೊರಡಿಸಿದರೂ ಸಿಗದ ಆರೋಪಿ ಕೊನೆಗೂ ಅರೆಸ್ಟ್..! - Nikhara News | Kannada News Website
Connect with us

Uncategorized

Puttur-ಪುತ್ತೂರು: 7 ವರ್ಷಗಳ ಹಿಂದಿನ ಸುಲಿಗೆ ಪ್ರಕರಣ; 41 ಬಾರಿ ವಾರೆಂಟ್ ಹೊರಡಿಸಿದರೂ ಸಿಗದ ಆರೋಪಿ ಕೊನೆಗೂ ಅರೆಸ್ಟ್..!

Published

on

Ad Widget

Ad Widget

Ad Widget

Ad Widget

ಏಳು ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದಿದ್ದ ಭೀಕರ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತ್ರಿಶೂರ್ ನಿವಾಸಿ ನೆಲ್ಸನ್ ಸಿ.ವಿ. ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಏಳು ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದಿದ್ದ ಭೀಕರ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್‌ನಲ್ಲಿ ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಂಧಿತ ಆರೋಪಿಯನ್ನು ಕೇರಳದ ತ್ರಿಶೂರ್ ನಿವಾಸಿ ನೆಲ್ಸನ್ ಸಿ.ವಿ. (38) ಎಂದು ಗುರುತಿಸಲಾಗಿದೆ. ಈತನನ್ನು ಬಂಧಿಸಲು ನ್ಯಾಯಾಲಯ ಬರೋಬ್ಬರಿ 41 ಬಾರಿ ದಸ್ತಗಿರಿ ವಾರೆಂಟ್ ಹೊರಡಿಸಿತ್ತು ಎಂಬುದು ವಿಶೇಷ.

Ad Widget

Ad Widget <> Ad Widget

ಏನಿದು ಪ್ರಕರಣ?
ಡಿಸೆಂಬರ್ 22, 2017 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿದ್ದ ಮೂವರು ಅಪರಿಚಿತರು, ಮನೆಯಲ್ಲಿದ್ದವರಿಗೆ ಪಿಸ್ತೂಲ್ ಮತ್ತು ಚೂರಿ ತೋರಿಸಿ ಪ್ರಾಣ ಬೆದರಿಕೆ ಹಾಕಿದ್ದರು. ಈ ವೇಳೆ ಸುಮಾರು 2,88,000 ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 60,000 ರೂಪಾಯಿ ನಗದು ಹಣವನ್ನು ದೋಚಲಾಗಿತ್ತು. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೋರ್ಟ್ ಷರತ್ತು ಉಲ್ಲಂಘನೆ:
ಈ ಪ್ರಕರಣದಲ್ಲಿ ಬಂಧಿತನಾಗಿದ್ದ ನೆಲ್ಸನ್ ಸಿ.ವಿ, ನಂತರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿದ್ದ. ಆದರೆ ಆಗಸ್ಟ್ 27, 2021 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ನ್ಯಾಯಾಲಯ 41 ಬಾರಿ ವಾರೆಂಟ್ ಜಾರಿ ಮಾಡಿದ್ದರೂ ಪೊಲೀಸರ ಕೈಗೆ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ.

Ad Widget

Ad Widget

ಪೊಲೀಸರ ಕಾರ್ಯಾಚರಣೆ:
ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಎ, ಪೊಲೀಸ್ ಸಿಬ್ಬಂದಿಗಳಾದ ವಿನಾಯಕ ಮತ್ತು ಶಿವರಾಜ್ ಅವರ ತಂಡ ಕೇರಳಕ್ಕೆ ತೆರಳಿತ್ತು. ಕೇರಳದ ತ್ರಿಶೂರು ಜಿಲ್ಲೆಯ ಮಿಯೂರು ಎಂಬಲ್ಲಿ ಅಡಗಿದ್ದ ಆರೋಪಿಯನ್ನು ಸಿನಿಮೀಯ ಮಾದರಿಯಲ್ಲಿ ವಶಕ್ಕೆ ಪಡೆದು, ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತೊಂದು ಪ್ರಕರಣ ದಾಖಲು:
ಜಾಮೀನು ಪಡೆದ ಬಳಿಕ ನ್ಯಾಯಾಲಯದ ಷರತ್ತುಗಳನ್ನು ಪದೇ ಪದೇ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದಕ್ಕಾಗಿ ನೆಲ್ಸನ್ ಸಿ.ವಿ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!