Connect with us

ಉಡುಪಿ

V.D. Satishan-ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

Published

on



Ad Widget

Ad Widget

Ad Widget

Ad Widget

ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

Ad Widget

Ad Widget

Ad Widget

Ad Widget

ಉಡುಪಿ: ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

Ad Widget

Ad Widget

Ad Widget alt="Ad Widget"/>

Ad Widget

ಶನಿವಾರ ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿದ ಅವರು, ದೇವಿಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು.

Ad Widget

Ad Widget <> Ad Widget

ವಿ.ಡಿ. ಸತೀಶನ್ ಅವರು Z-ಪ್ಲಸ್ ಭದ್ರತೆಯನ್ನು ಹೊಂದಿರುವುದರಿಂದ, ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್ ಏರ್ಪಡಿಸಿತ್ತು.



Ad Widget

ಪೂಜಾ ವಿಧಿವಿಧಾನಗಳ ನಂತರ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ದೇವಿಯ ಅಪಾರ ಭಕ್ತರಾಗಿರುವ ಅವರು, ದರ್ಶನದ ಬಳಿಕ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

Click to comment

Leave a Reply

ಅಪರಾಧ

Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್‌ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ

Published

on



Ad Widget

Ad Widget

Ad Widget

Ad Widget

ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.

Ad Widget

Ad Widget <> Ad Widget

ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.



Ad Widget

ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ

Continue Reading

ಉಡುಪಿ

Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!

Published

on



Ad Widget

Ad Widget

Ad Widget

Ad Widget

ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.

Ad Widget

Ad Widget

Ad Widget

Ad Widget

ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.

Ad Widget

Ad Widget <> Ad Widget

ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.



Ad Widget

ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.

Ad Widget

Ad Widget

ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.

ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.

ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.

ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Ad Widget
Continue Reading

ಉಡುಪಿ

Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.



Ad Widget

ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಕೆಳಗೆ ಬಿದ್ದ ಪರಿಣಾಮ ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಅವರನ್ನು ರಕ್ಷಿಸಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ.

ಸದ್ಯ ರಾಜೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading