Uncategorized
ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಮಾಜಿ ಶಾಸಕ ಮಠಂದೂರು ದಾಖಲಿಸಿದ ಖಾಸಗಿ ದೂರು ಹಿಂತಿರುಗಿಸಿದ ನ್ಯಾಯಾಲಯ

ಪುತ್ತೂರು, ಜು. 11: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಸಂಜೀವ ಮಠಂದೂರು ಸಲ್ಲಿಸಿದ್ದ ಖಾಸಗಿ ದೂರು (ಪಿ.ಸಿ.ಆರ್. ನಂ. 11/2026) ಪ್ರಕರಣವನ್ನು ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಎಸಿಜೆಎಂ ನ್ಯಾಯಾಲಯವು ವಿಚಾರಣೆಗೆ ಸ್ವೀಕರಿಸದೆ ಹಿಂತಿರುಗಿಸಿದೆ.
ಜುಲೈ 10ರಂದು ನೀಡಿದ ಆದೇಶದಲ್ಲಿ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್ಎಸ್ಎಸ್) ಕಲಂ 224ರಡಿ ಪ್ರಕರಣವನ್ನು ಪರಿಶೀಲಿಸಿದ ನ್ಯಾಯಾಲಯವು, ಈ ಪ್ರಕರಣವನ್ನು ತಾನು ವಿಚಾರಣೆ ನಡೆಸಲು ಅಧಿಕಾರ ವ್ಯಾಪ್ತಿಯಲ್ಲಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದ್ದರಿಂದ, ದೂರುದಾರರು ಕಾನೂನುಬದ್ಧವಾಗಿ ಅಧಿಕಾರ ವ್ಯಾಪ್ತಿ ಹೊಂದಿರುವ ಸೂಕ್ತ ನ್ಯಾಯಾಲಯದ ಮುಂದೆ ಖಾಸಗಿ ದೂರನ್ನು ಮಂಡಿಸಬಹುದೆಂದು ಸೂಚಿಸಿ ದೂರನ್ನು ಹಿಂತಿರುಗಿಸಿದೆ.
ನ್ಯಾಯಾಲಯದ ಈ ಆದೇಶವು ಪ್ರಕರಣದ ಆರೋಪಗಳ ಸತ್ಯಾಸತ್ಯತೆ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿರುವುದಲ್ಲ. ಕೇವಲ ಅಧಿಕಾರ ವ್ಯಾಪ್ತಿ ಅಥವಾ ಸೂಕ್ತ ನ್ಯಾಯಿಕ ವೇದಿಕೆಯ ಪ್ರಶ್ನೆಯನ್ನು ಪರಿಗಣಿಸಿ, ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿಯನ್ನು ಮರುಸಲ್ಲಿಸಲು ಅವಕಾಶ ಕಲ್ಪಿಸಿರುವುದಾಗಿದೆ.
ಗಮನಾರ್ಹವಾಗಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರ ವ್ಯಾಪ್ತಿಯ ಪ್ರಶ್ನೆಯನ್ನು ನಿಖರ ನ್ಯೂಸ್ ಈ ಹಿಂದೆಯೇ ವರದಿ ಮಾಡಿದ್ದು, ಪ್ರಕರಣವನ್ನು ಪುತ್ತೂರು ನ್ಯಾಯಾಲಯದಲ್ಲಿ ದಾಖಲಿಸಿರುವ ಕುರಿತು ಕಾನೂನು ತಜ್ಞರು ಅಧಿಕಾರ ವ್ಯಾಪ್ತಿಯ ಬಗ್ಗೆ ಪ್ರಶ್ನೆ ಎತ್ತಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇದೀಗ ನ್ಯಾಯಾಲಯದ ಆದೇಶವು ಆ ಅಭಿಪ್ರಾಯಕ್ಕೆ ಪೂರಕವಾಗಿದೆ.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಸ್ಥಳೀಯ8 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್7 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್3 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಶಿಕ್ಷಣ9 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಕಾರ್ಯಕ್ರಮಗಳು2 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಮಂಗಳೂರು51 minutes agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಶಿಕ್ಷಣ9 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಅಪರಾಧ57 minutes agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ

















