Connect with us

ಬಿಗ್ ನ್ಯೂಸ್

Chetan Prakash Kaje-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಎಂ.ಡಿ. ಚೇತನ್‌ ಪ್ರಕಾಶ್ ಕಜೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್‌ಕೇ‌ರ್ ಎಕ್ಸಲೆನ್ಸ್ ಅವಾರ್ಡ್ಸ್’ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಲ್ಯಾಬೋರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಅತ್ಯುತ್ತಮ ಗುಣಮಟ್ಟದ ಲ್ಯಾಬೊರೇಟರಿ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್‌ ಲ್ಯಾಬೋರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್‌ ಪ್ರಕಾಶ್ ಕಜೆ ಅವರು 2026ನೇ ಸಾಲಿನ ಪ್ರತಿಷ್ಠಿತ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ‘ಹೆಲ್ತ್‌ರ್ ಎಕ್ಸಲೆನ್ಸ್ ಅವಾರ್ಡ್ಸ್-2026’ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಲ್ಯಾಬೋರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಅತ್ಯುತ್ತಮ ಗುಣಮಟ್ಟದ ಲ್ಯಾಬೊರೇಟರಿ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್‌ ಲ್ಯಾಬೋರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್‌ ಪ್ರಕಾಶ್ ಕಜೆ ಅವರು 2026ನೇ ಸಾಲಿನ ಪ್ರತಿಷ್ಠಿತ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ‘ಹೆಲ್ತ್‌ರ್ ಎಕ್ಸಲೆನ್ಸ್ ಅವಾರ್ಡ್ಸ್-2026’ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವೈದ್ಯರ ದಿನಾಚರಣೆಯ ಅಂಗವಾಗಿ ಜುಲೈ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಮಾರಂಭದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ಹಲವು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಕನ್ನಡಪ್ರಭ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಆರೋಗ್ಯ ಸೇವಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮಹತ್ತರ ಕೊಡುಗೆ ನೀಡಿರುವ ವೈದ್ಯರು ಮತ್ತು ಆರೋಗ್ಯ ಸಂಸ್ಥೆಗಳನ್ನು ಗೌರವಿಸುವ ಉದ್ದೇಶದಿಂದ ‘ಹೆಲ್ತ್ ಕೇ‌ರ್ ಎಕ್ಸಲೆನ್ಸ್ ಅವಾರ್ಡ್ಸ್’ ಅನ್ನು ನೀಡುತ್ತಾ ಬಂದಿದೆ. ಆರೋಗ್ಯ ಕ್ಷೇತ್ರದ ವೃತ್ತಿಪರರು ಸಮಾಜದ ಆರೋಗ್ಯ ಮತ್ತು ಕಲ್ಯಾಣದ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಾರೆ.ಅವರ ಸೇವೆ ಮತ್ತು ಸಮರ್ಪಣೆಗೆ ಯೋಗ್ಯವಾದ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ವೈದ್ಯರು, ರೋಗಿಗಳ ನಡುವಣ ವಿಶ್ವಾಸದ ಪಾತ್ರ:
ರೋಗಪತ್ತೆಯಾದಾಗ ಮಾತ್ರ ಚಿಕಿತ್ಸೆ ನೀಡಲು ಸುಲಭ ಸಾಧ್ಯ.ಕ್ಷಣಕ್ಷಣವೂ ಹೊಸಹೊಸ ರೋಗಗಳು, ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಅವುಗಳನ್ನು ಸದೆ ಬಡಿಯಲು, ವೈದ್ಯಲೋಕದ ಜೊತೆ ಸಾಥ್ ನೀಡುವ ನಿಟ್ಟಿನಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಮಹತ್ವದ ಪಾತ್ರ ವಹಿಸಿದೆ. ವೈದ್ಯರು ಮತ್ತು ರೋಗಿಗಳ ನಡುವಣ ವಿಶ್ವಾಸಾರ್ಹತೆ ಗಟ್ಟಿಯಾದಾಗ ರೋಗದ ತೀವ್ರತೆಯೂ ಕಡಿಮೆಯಾಗುತ್ತದೆ. ಈ ವಿಶ್ವಾಸಾರ್ಹತೆಯನ್ನು ಗಟ್ಟಿಗೊಳಿಸುವ ಕಾಯಕವನ್ನು ಚೇತನ್ ಪ್ರಕಾಶ್ ಕಜೆ ಅವರ ನೇತೃತ್ವದಲ್ಲಿ ವಿಭಿನ್ನ, ವಿಶಿಷ್ಟತೆಯ ಆರೋಗ್ಯ ಸೇವೆಯ ಮೂಲಕ ಧನ್ವಂತರಿ ಲ್ಯಾಬೋರೇಟರಿ ನಡೆಸುತ್ತಾ ಬಂದಿದೆ.

Ad Widget

Ad Widget

ನಡೆದು ಬಂದ ಹಾದಿ:
ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ಹಾಗೂ ಸೇವಾ ಮನೋಭಾವದಿಂದ ಚೇತನ್ ಪ್ರಕಾಶ್ ಕಜೆ ಅವರು 2004ರಲ್ಲಿ ತಮ್ಮದೇ ಆದ ಧನ್ವಂತರಿ ಆಸ್ಪತ್ರೆಯಲ್ಲಿ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ಯನ್ನು ಸ್ಥಾಪಿಸಿದರು.

ಆರಂಭದಿಂದಲೂ ನಿಖರ, ತ್ವರಿತ, ವಿಶ್ವಾಸಾರ್ಹ ಹಾಗೂ ಪಾರದರ್ಶಕ ಪರೀಕ್ಷಾ ಸೇವೆಯನ್ನು ಜನಸಾಮಾನ್ಯರಿಗೆ ಒದಗಿಸುವ ಧೈಯದೊಂದಿಗೆ ಕಾರ್ಯನಿರ್ವಹಿಸುತ್ತಾ, ಪ್ರಯೋಗಾಲಯ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದಾರೆ. ಸಣ್ಣ ಮಟ್ಟದಲ್ಲಿ ಆರಂಭವಾದ ಈ ಪ್ರಯೋಗಾಲಯವು, 2006ರಿಂದ ಅತ್ಯಾಧುನಿಕ ಸ್ವಯಂಚಾಲಿತ (Automation) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಿ, ಸಂಪೂರ್ಣ ಸ್ವಯಂಚಾಲಿತ ಬಯೋಕೆಮ್ಮಿಸ್ಟ್ರಿ, ಹೆಮಟಾಲಜಿ, ಮೈಕ್ರೋಬಯಾಲಜಿ, ಇಮ್ಯುನೋಅಸೆ, ಸೇರಿದಂತೆ ಹಲವು ಸುಧಾರಿತ ಪರೀಕ್ಷಾ ವ್ಯವಸ್ಥೆಗಳನ್ನು ಅಳವಡಿಸಿಕೊಂಡಿದೆ.

ಇದರೊಂದಿಗೆ ವಿಯೆನ್ನಾ, ಆಸ್ಟ್ರಿಯಾದಿಂದ ಆಮದು ಮಾಡಲಾದ ALEXAllergy Explorer ವ್ಯವಸ್ಥೆಯನ್ನು ಅಳವಡಿಸುವ ಮೂಲಕ ದಕ್ಷಿಣ ಕರ್ನಾಟಕದ ಪ್ರಪ್ರಥಮ ಅಲರ್ಜಿ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪ್ರಸ್ತುತ, ಸುಮಾರು 23ಕ್ಕೂ ಅಧಿಕ ಅತ್ಯಾಧುನಿಕ ವೈದ್ಯಕೀಯ ಪ್ರಯೋಗಾಲಯ ಉಪಕರಣಗಳನ್ನು ಹೊಂದಿರುವ ಈ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಅತಿದೊಡ್ಡ ವೈದ್ಯಕೀಯ ಪ್ರಯೋಗಾಲಯ ಎಂಬ ಹೆಗ್ಗಳಿಕೆಯನ್ನು ಗಳಿಸಿದೆ. ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಒಟ್ಟು 10 ಶಾಖೆಗಳ ಮೂಲಕ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಜನರಿಗೆ ತಲುಪಿಸುತ್ತಿದೆ.

ಸಾಮಾಜಿಕ ಸೇವೆ:
ಚೇತನ್ ಪ್ರಕಾಶ್ ಕಜೆ ಅವರು ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದು, ರೋಟರಿ ಕ್ಲಬ್ ಪುತ್ತೂರು ಯುವದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದು, 2020-21ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಗುರುತಿಸಿ ಜೆಸಿಐ ಔಟ್ ಸ್ಟಾಂಡಿಂಗ್ ಬ್ಯುಸಿನೆಸ್ (ಟೂಬಿಪ್) ಪ್ರಶಸ್ತಿ ನೀಡಿ ಗೌರವಿಸಿದೆ.

ಧನ್ವಂತರಿ ಆಸ್ಪತ್ರೆಯ ಹೆರಿಗೆ ಪ್ರಸೂತಿ ತಜ್ಞ ಡಾ. ಚಂದ್ರಶೇಖರ ಮತ್ತು ಜಾನಕಿ ದಂಪತಿ ಪುತ್ರ ಚೇತನ್‌ ಪ್ರಕಾಶ್ ಕಜೆ ಅವರು ಜನರ ಆರೋಗ್ಯ ಕಾಪಾಡುವಲ್ಲಿ ಉತ್ತಮ ಪಾತ್ರ ವಹಿಸುತ್ತಿದ್ದಾರೆ. ಇವರ ಪತ್ನಿ ಡಾ. ಗೌರಿಪ್ರಸನ್ನ ಅವರು ಧನ್ವಂತರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞೆಯಾಗಿದ್ದು, ಪುತ್ರಿ ಜೀವಿಕಾ ಕಜೆ, ಪುತ್ರ ಆಯುಷ್ಮಾನ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!