ಸುಳ್ಯ
Sexual assault-ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಪ್ರಕರಣ ದಾಖಲು
ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಸುಳ್ಯದಲ್ಲಿ ನಡೆದಿದ್ದು, ಆರೋಪಿ ಮಂಜುನಾಥ ಎಂಬಾತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸುಳ್ಯ, ಜುಲೈ 12: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಸುಳ್ಯದಲ್ಲಿ ನಡೆದಿದ್ದು, ಆರೋಪಿ ಮಂಜುನಾಥ ಎಂಬಾತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಬಾಲಕಿಯು ಸತತವಾಗಿ ಶಾಲೆಗೆ ಗೈರುಹಾಜರಾಗುತ್ತಿದ್ದನ್ನು ಗಮನಿಸಿದ ಶಾಲಾ ಮುಖ್ಯೋಪಾಧ್ಯಾಯರು ವಿಚಾರಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಬಾಲಕಿಗೆ ಪರಿಚಿತನಾಗಿದ್ದ ಮಂಜುನಾಥ ಎಂಬಾತ, ಜೂನ್ 22ರಿಂದ ಜುಲೈ 9ರ ನಡುವಿನ ಅವಧಿಯಲ್ಲಿ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಹಲವು ಬಾರಿ ಲೈಂಗಿಕವಾಗಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ. ದೂರಿನನ್ವಯ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಅಪರಾಧ22 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ22 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್21 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ20 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ19 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ20 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಮಂಗಳೂರು20 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್20 hours agoGirish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ















