ಸ್ಥಳೀಯ
Prahlad Joshi-ʻʻಇನ್ನು ಪ್ರಿಯಾಂಕ್ ಖರ್ಗೆ ಮಾತಿಗೆ ಬೆಲೆ ಕೊಡಲ್ಲ”- ಪ್ರಹ್ಲಾದ ಜೋಶಿ
“ಆರೆಸ್ಸೆಸ್ ಬೈಠಕ್ ನಡೆದ ಬಳಿಕ ಗಲಭೆಗಳಾಗುತ್ತವೆ” ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಳ್ಳಿಹಾಕಿದ್ದು, ಇನ್ನು ಮುಂದೆ ಅವರ ಯಾವುದೇ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆ, ಜು.12: “ಆರೆಸ್ಸೆಸ್ ಬೈಠಕ್ ನಡೆದ ಬಳಿಕ ಗಲಭೆಗಳಾಗುತ್ತವೆ” ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಳ್ಳಿಹಾಕಿದ್ದು, ಇನ್ನು ಮುಂದೆ ಅವರ ಯಾವುದೇ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರಿಯಾಂಕ್ ಖರ್ಗೆ ಅವರಿಗೆ ಮಾಧ್ಯಮಗಳಲ್ಲಿ ಪ್ರಚಾರ ಪಡೆಯುವ ಹಪಾಹಪಿ ಇದೆ. ಆರೆಸ್ಸೆಸ್ ಹೆಸರನ್ನು ಬಳಸಿಕೊಂಡರೆ ಸುಲಭವಾಗಿ ಸುದ್ದಿಯಾಗಬಹುದು ಎಂಬ ಕಾರಣಕ್ಕೆ ಅವರು ಏನೇನೋ ಮಾತನಾಡುತ್ತಿದ್ದಾರೆ. ಹಾಗಾಗಿ ನಾನು ಮತ್ತು ನಮ್ಮ ಪಕ್ಷದವರು ಅವರ ಇಂತಹ ಮಾತುಗಳಿಗೆ ಕಿಮ್ಮತ್ತು ನೀಡುವುದನ್ನು ನಿಲ್ಲಿಸಿದ್ದೇವೆ” ಎಂದರು.
ಕ್ರಮ ಕೈಗೊಳ್ಳಲು ಸವಾಲು:
“ಗೃಹ ಸಚಿವರ ಬಳಿ ಗಲಭೆಗಳ ಬಗ್ಗೆ ನಿಜವಾಗಿಯೂ ಖಚಿತ ಮಾಹಿತಿ ಇದ್ದರೆ, ಅವರು ಸುಮ್ಮನೆ ಕುಳಿತುಕೊಳ್ಳುವ ಬದಲು ತಕ್ಷಣ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಮಾಫಿಯಾವನ್ನು ಹತ್ತಿಕ್ಕಲು ಇವರಿಂದ ಯಾಕೆ ಸಾಧ್ಯವಾಗುತ್ತಿಲ್ಲ?” ಎಂದು ಜೋಶಿ ಪ್ರಶ್ನಿಸಿದರು.
ಅಲ್ಲದೆ, ಪ್ರಿಯಾಂಕ್ ಖರ್ಗೆ ಅವರ ಟೀಕೆಗಳಿಗೆ ಅನಗತ್ಯವಾಗಿ ಪ್ರತಿಕ್ರಿಯಿಸಿ ಅವರಿಗೆ ಮಹತ್ವ ನೀಡದಂತೆ ತಮ್ಮ ಪಕ್ಷದ ಮುಖಂಡರಿಗೂ ಸೂಚಿಸಿರುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
-
ಪುತ್ತೂರು20 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು23 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್22 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ23 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ21 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ22 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ22 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















