Connect with us

ಅಪರಾಧ

Mangalore-ಬಾಂಗ್ಲಾ ವಲಸಿಗರ ಜಾಲ ಭೇದಿಸಿದ ಮಂಗಳೂರು ಪೊಲೀಸರು; ಇಬ್ಬರು ಮಧ್ಯವರ್ತಿಗಳ ಬಂಧನ; ಕೋಲ್ಕತ್ತಾದಲ್ಲಿ ಮತ್ತೋರ್ವ ಸೆರೆ – ತನಿಖೆ ಮತ್ತಷ್ಟು ತೀವ್ರ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಪೊಲೀಸರು ನಡೆಸುತ್ತಿರುವ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ನಿರ್ಮಾಣ ಹಂತದ ಕಟ್ಟಡಗಳಿಂದ ಮತ್ತೆ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ನಗರದಲ್ಲಿ ಇದುವರೆಗೆ ಪತ್ತೆಯಾದ ಬಾಂಗ್ಲಾದೇಶದ ಅಕ್ರಮ ವಲಸಿಗರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಜು. 14: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಪೊಲೀಸರು ನಡೆಸುತ್ತಿರುವ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ನಿರ್ಮಾಣ ಹಂತದ ಕಟ್ಟಡಗಳಿಂದ ಮತ್ತೆ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ನಗರದಲ್ಲಿ ಇದುವರೆಗೆ ಪತ್ತೆಯಾದ ಬಾಂಗ್ಲಾದೇಶದ ಅಕ್ರಮ ವಲಸಿಗರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರನ್ನು ಕರೆತರುತ್ತಿದ್ದ ಮಧ್ಯವರ್ತಿಗಳ ವಿರುದ್ಧವು ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಮೂಲದ ಮೊಯ್ದೀನ್ ಇಸ್ಲಾಂ, ರಸೂಲ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೊಯ್ದೀನ್ ಇಸ್ಲಾಂ ಮತ್ತು ದಿಲ್ವಾರ್ ಹುಸೇನ್ ಅವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ.

Ad Widget

Ad Widget <> Ad Widget

ಪ್ರಕರಣದ ಪ್ರಮುಖ ಆರೋಪಿ ರಸೂಲ್ ಇಸ್ಲಾಂನನ್ನು ಮಂಗಳೂರು ನಗರ ಪೊಲೀಸರ ಮಾಹಿತಿ ಆಧರಿಸಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರ ಸಮನ್ವಯದಲ್ಲಿ ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲು ಮಂಗಳೂರು ಪೊಲೀಸರ ವಿಶೇಷ ತಂಡ ಈಗಾಗಲೇ ಕೋಲ್ಕತ್ತಾಕ್ಕೆ ತೆರಳಿದೆ.



Ad Widget

ತನಿಖೆ ವೇಳೆ, ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕರೆತರುವ ನೆಪದಲ್ಲಿ ಈ ಮಧ್ಯವರ್ತಿಗಳು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನೂ ನಗರಕ್ಕೆ ಕರೆತಂದು ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸಕ್ಕೆ ನಿಯೋಜಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಈ ಜಾಲದ ಮೂಲಕ ಇನ್ನಷ್ಟು ಮಂದಿ ರಾಜ್ಯದ ವಿವಿಧ ಭಾಗಗಳಿಗೆ ಬಂದಿರುವ ಸಾಧ್ಯತೆಯಿದ್ದು, ತನಿಖೆಯನ್ನು ಪೊಲೀಸರು ವಿಸ್ತರಿಸಿದ್ದಾರೆ.

Ad Widget

Ad Widget

ಉರ್ವ ಠಾಣೆ ವ್ಯಾಪ್ತಿಯ ಕುಂಟಿಕಾನ ಹಾಗೂ ಕೋಡಿಕಲ್‌ನಲ್ಲಿನ ನಿರ್ಮಾಣ ಕಾಮಗಾರಿಗಳಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರ ದಾಖಲೆಗಳನ್ನು ಪರಿಶೀಲಿಸಿದ ವೇಳೆ, 11 ಮಂದಿ ಬಾಂಗ್ಲಾದೇಶದ ಪ್ರಜೆಗಳಾಗಿರುವುದು ದೃಢಪಟ್ಟಿದೆ. ವಿಚಾರಣೆ ವೇಳೆ ಅವರು ಕಳೆದ ಸುಮಾರು ಎರಡು ತಿಂಗಳಿಂದ ಮಂಗಳೂರಿನಲ್ಲಿ ವಿವಿಧ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುತ್ತಿದ್ದರು ಎಂಬುದು ತಿಳಿದುಬಂದಿದೆ.
ವಶಕ್ಕೆ ಪಡೆದವರಲ್ಲಿ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿಗಳಾದ ಮಹಮ್ಮದ್ ಕೌಸರ್ ಅಲಿ (21), ಮೊಹಮ್ಮದ್ ನೂರ್ ಅಮೀನ್ (34), ನಹಿದುಲ್ ಇಸ್ಲಾಂ (22), ಹುಮಾಯೂನ್ ಕೊಬೀರ್ (22), ರೋಮನ್ ಅಲಿ (23), ಅಬ್ದುಲ್ ರಹಮಾನ್ (19), ನೋಯನ್ (24) ಸೇರಿದಂತೆ ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದ್ದಾರೆ.

ನಿರ್ಮಾಣ ಕಾಮಗಾರಿಗಳಲ್ಲಿ ಕಾರ್ಯಾಚರಣೆ
ಪೊಲೀಸ್ ಆಯುಕ್ತರ ಸೂಚನೆಯಂತೆ ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ. ಮಾಹಿತಿ ಆಧರಿಸಿ ಉರ್ವ ಪೊಲೀಸರು ಕೆಪಿಟಿ–ಕುಂಟಿಕಾನ ನಡುವಿನ ನಿರ್ಮಾಣ ಹಂತದ ಕಟ್ಟಡ ಹಾಗೂ ಕೋಡಿಕಲ್‌ನ ಮತ್ತೊಂದು ಕಟ್ಟಡದಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಮೊದಲ ಸ್ಥಳದಲ್ಲಿ ಮೂವರು ಹಾಗೂ ಎರಡನೇ ಸ್ಥಳದಲ್ಲಿ ಎಂಟು ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆಯಾದರು.

ಬಂಧನ ಕೇಂದ್ರದಲ್ಲಿ ವಿಚಾರಣೆ
ವಶಕ್ಕೆ ಪಡೆದ 11 ಮಂದಿಯನ್ನು ಮುಕ್ಕದ ಖಾಸಗಿ ಆಸ್ಪತ್ರೆ ಆವರಣದಲ್ಲಿರುವ ಬಂಧನ ಕೇಂದ್ರದಲ್ಲಿ ಇರಿಸಲಾಗಿದ್ದು, ಪೊಲೀಸ್ ಗುಪ್ತಚರ ವಿಭಾಗದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಪ್ರಾದೇಶಿಕ ವಿದೇಶಿಯರ ನೋಂದಣಿ ಕಚೇರಿ (FRRO)ಗೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲಾಗಿದೆ.

ಎಲ್ಲರೂ ರಾಜಶಾಹಿ ಜಿಲ್ಲೆಯವರೇ
ಇದುವರೆಗೆ ಪತ್ತೆಯಾದ ಎಲ್ಲ ಅಕ್ರಮ ವಲಸಿಗರೂ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವರಾಗಿದ್ದು, ಈ ಜಿಲ್ಲೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಗಡಿಗೆ ಹೊಂದಿಕೊಂಡಿದೆ. ಒಂದೇ ಜಾಲದ ಮೂಲಕ ಇವರನ್ನು ವಿವಿಧ ರಾಜ್ಯಗಳಿಗೆ ಕರೆತಂದು, ಅಲ್ಲಿಂದ ಮಂಗಳೂರಿನ ವಿವಿಧ ಕಾಮಗಾರಿಗಳಿಗೆ ನಿಯೋಜಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದೇ ಮಧ್ಯವರ್ತಿ ಮೂಲಕ ಇನ್ನಷ್ಟು ಮಂದಿ ನಗರ ಹಾಗೂ ಜಿಲ್ಲೆಯ ಇತರ ಭಾಗಗಳಿಗೆ ಬಂದಿರುವ ಸಾಧ್ಯತೆಯಿದ್ದು, ತನಿಖೆ ಮುಂದುವರಿದಿದೆ.

ಇನ್ನಷ್ಟು ಮಂದಿಗಾಗಿ ಶೋಧ
ನಗರದ ಮೀನುಗಾರಿಕೆ ದಕ್ಕೆಗಳು, ವಿವಿಧ ನಿರ್ಮಾಣ ಕಾಮಗಾರಿಗಳು, ಕಾರ್ಖಾನೆಗಳು ಹಾಗೂ ಹೊರವಲಯ ಮತ್ತು ಜಿಲ್ಲೆಯ ಇತರ ಭಾಗಗಳಲ್ಲಿ ಇನ್ನಷ್ಟು ಅಕ್ರಮ ಬಾಂಗ್ಲಾದೇಶದ ಕಾರ್ಮಿಕರು ಕೆಲಸ ಮಾಡುತ್ತಿರುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉರ್ವ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಆರೋಪಿಗಳನ್ನು ಗಡಿಪಾರು ಮಾಡುವ ಉದ್ದೇಶದಿಂದ ಎಫ್‌ಆರ್‌ಆರ್‌ಒಗೆ ಕಳುಹಿಸಲಾಗುತ್ತಿದೆ. ಮಧ್ಯವರ್ತಿಗಳ ಜಾಲದ ಸಂಪೂರ್ಣ ಮಾಹಿತಿ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಕೋಲ್ಕತ್ತಾದಲ್ಲಿ ಬಂಧಿತನಾಗಿರುವ ಆರೋಪಿಯನ್ನು ಕರೆತಂದ ಬಳಿಕ ಇನ್ನಷ್ಟು ಮಾಹಿತಿ ದೊರೆಯುವ ನಿರೀಕ್ಷೆಯಿದೆ.” ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಅಪರಾಧ

Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

Published

on



Ad Widget

Ad Widget

Ad Widget

Ad Widget

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.

Ad Widget

Ad Widget

Ad Widget

Ad Widget

ಪೆರುವಾಯಿ ಗ್ರಾಮದ  ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ  ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46)  ನನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget <> Ad Widget


ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ  ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ  ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.



Ad Widget
Ad Widget
Continue Reading

ಸ್ಥಳೀಯ

Kollur-ಕೊಲ್ಲೂರು: ದನವನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ

Published

on



Ad Widget

Ad Widget

Ad Widget

Ad Widget

ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.



Ad Widget

ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

Ad Widget

Ad Widget

ಇನ್ನಿಬ್ಬರಿಗಾಗಿ ಶೋಧ
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸ್ ಕಾರ್ಯಾಚರಣೆ
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading