Connect with us

ಅಪರಾಧ

Shivashankarappa Sahukara-ಕೆಪಿಎಸ್‌ಸಿ ಇತಿಹಾಸದಲ್ಲೇ ಮೊದಲ ಬಾರಿ ಅಧ್ಯಕ್ಷರ ಅಮಾನತು: ಶಿವಶಂಕರಪ್ಪ ಸಾಹುಕಾರ ವಿರುದ್ಧ ರಾಜ್ಯಪಾಲರಿಂದ ಕಠಿಣ ಕ್ರಮ

Published

on



Ad Widget

Ad Widget

Ad Widget

Ad Widget

ಕರ್ನಾಟಕ ಲೋಕ ಸೇವಾ ಆಯೋಗದ (KPSC) 75 ವರ್ಷಗಳ ಇತಿಹಾಸದಲ್ಲಿ ಅಭೂತಪೂರ್ವ ಬೆಳವಣಿಗೆಯೊಂದು ನಡೆದಿದೆ. ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಗಂಭೀರ ಆರೋಪದ ಮೇಲೆ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಮಾನತುಗೊಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದ (KPSC) 75 ವರ್ಷಗಳ ಇತಿಹಾಸದಲ್ಲಿ ಅಭೂತಪೂರ್ವ ಬೆಳವಣಿಗೆಯೊಂದು ನಡೆದಿದೆ. ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಗಂಭೀರ ಆರೋಪದ ಮೇಲೆ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಮಾನತುಗೊಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಏನಿದು ಹಗರಣ?
ಶಿವಶಂಕರಪ್ಪ ಸಾಹುಕಾರ ಅವರು ತಮ್ಮ ಇಬ್ಬರು ಪುತ್ರಿಯರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಕೊಡಿಸಲು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ಪ್ರಮುಖ ಆರೋಪ. ಪ್ರಮುಖವಾಗಿ ಅವರ ಪುತ್ರಿ ಸುಮಾ ಎಸ್. ಸಾಹುಕಾರ ಅವರು ತಂದೆ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದರೂ, ತಮ್ಮ ಕುಟುಂಬದ ವಾರ್ಷಿಕ ಆದಾಯ ಕೇವಲ 40,000 ರೂಪಾಯಿ ಎಂದು ಸುಳ್ಳು ಮಾಹಿತಿ ನೀಡಿ 3ಬಿ ಮೀಸಲಾತಿಯಡಿ ಹುದ್ದೆ ಪಡೆಯಲು ಯತ್ನಿಸಿದ್ದರು. ಈ ಸತ್ಯಾಂಶವು ಆಯೋಗದ ದಾಖಲೆಗಳ ಪರಿಶೀಲನೆಯ ವೇಳೆ ಬಯಲಿಗೆ ಬಂದಿತ್ತು.

Ad Widget

Ad Widget <> Ad Widget

ರಾಜ್ಯಪಾಲರ ಆದೇಶ ಮತ್ತು ತನಿಖೆ:
ಆಯೋಗದ ವಿಶ್ವಾಸಾರ್ಹತೆ ಉಳಿಸಲು ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯಪಾಲರು ಸಂವಿಧಾನದ 317(1)ನೇ ವಿಧಿಯಡಿ ಸಾಹುಕಾರ ಅವರನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತರುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. “ನೇಮಕಾತಿ ಪ್ರಕ್ರಿಯೆಯಲ್ಲಿ ಸ್ವಂತ ಮಕ್ಕಳೇ ಅಭ್ಯರ್ಥಿಗಳಾಗಿದ್ದಾಗ ಅಧ್ಯಕ್ಷರು ಆ ಪ್ರಕ್ರಿಯೆಯಿಂದ ದೂರವಿರಬೇಕಿತ್ತು ಅಥವಾ ಹಿತಾಸಕ್ತಿ ಸಂಘರ್ಷದ ಬಗ್ಗೆ ಘೋಷಿಸಬೇಕಿತ್ತು. ಆದರೆ ಸಾಹುಕಾರ ಅವರು ಈ ನಿಯಮವನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ” ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.



Ad Widget

ಮಗಳಿಗೆ ಪೊಲೀಸ್ ನೋಟಿಸ್:
ಈ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಕಾರ್ಯದರ್ಶಿ ಕೆ. ಜ್ಯೋತಿ ಅವರು ನೀಡಿದ ದೂರಿನನ್ವಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸುಳ್ಳು ಆದಾಯ ಮತ್ತು ಜಾತಿ ಪ್ರಮಾಣಪತ್ರ ಸಲ್ಲಿಸಿದ ಆರೋಪದ ಮೇಲೆ ಸಾಹುಕಾರ ಅವರ ಪುತ್ರಿ ಸುಮಾಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

Ad Widget

Ad Widget

ಬಿ. ಪ್ರಭುದೇವ ನೂತನ ಹಂಗಾಮಿ ಅಧ್ಯಕ್ಷ:
ಶಿವಶಂಕರಪ್ಪ ಸಾಹುಕಾರ ಅಮಾನತಾದ ಬೆನ್ನಲ್ಲೇ ಆಯೋಗದ ಹಿರಿಯ ಸದಸ್ಯರಾದ ಬಿ. ಪ್ರಭುದೇವ ಅವರು ಹಂಗಾಮಿ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಅಮೆರಿಕದ ಫೋರ್ಡ್ ಮೋಟಾರ್ಸ್‌ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉನ್ನತ ಹುದ್ದೆಗಳನ್ನು ನಿಭಾಯಿಸಿದವರಾಗಿದ್ದಾರೆ.

ಹಳೆಯ ಕಹಿ ನೆನಪುಗಳು:
ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಎಚ್.ಎನ್. ಕೃಷ್ಣ ಅವರ ಅವಧಿಯಲ್ಲಿ ನಡೆದ 1998 1999 2004 ಈ ಮೂರು ಸಾಲುಗಳ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ಸ್ವಜನಪಕ್ಷಪಾತ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ತನಿಖೆ ನಡೆದು ಅವರು ಜೈಲುವಾಸ ಅನುಭವಿಸಿದ್ದರು.

ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಗೋನಾಳ್ ಭೀಮಪ್ಪ ಅವಧಿಯಲ್ಲಿ 2011ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಆರೋಪದಲ್ಲಿ ಅವರು ಜೈಲುವಾಸ ಅನುಭವಿಸಿದ್ದರು. ಈ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸದಸ್ಯೆ ಮಂಗಳಾ ಶ್ರೀಧ‌ರ್ ಅವರನ್ನು ಅಂದಿನ ರಾಜ್ಯಪಾಲರು ಅಮಾನತು ಮಾಡಿದ್ದರು.

ಆದರೆ ಅಧ್ಯಕ್ಷರೊಬ್ಬರು ಈ ರೀತಿ ಅಮಾನತುಗೊಂಡಿರುವುದು ಇದೇ ಮೊದಲು. ಈ ಬೆಳವಣಿಗೆಯು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಚರ್ಚೆಗೂ ಕಾರಣವಾಗಿದ್ದು, ಸಾಂವಿಧಾನಿಕ ಸಂಸ್ಥೆಯ ಪಾವಿತ್ರ್ಯತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಅಪರಾಧ

Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

Published

on



Ad Widget

Ad Widget

Ad Widget

Ad Widget

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.

Ad Widget

Ad Widget

Ad Widget

Ad Widget

ಪೆರುವಾಯಿ ಗ್ರಾಮದ  ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ  ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46)  ನನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget <> Ad Widget


ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ  ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ  ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.



Ad Widget
Ad Widget
Continue Reading

ಸ್ಥಳೀಯ

Kollur-ಕೊಲ್ಲೂರು: ದನವನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ

Published

on



Ad Widget

Ad Widget

Ad Widget

Ad Widget

ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.



Ad Widget

ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

Ad Widget

Ad Widget

ಇನ್ನಿಬ್ಬರಿಗಾಗಿ ಶೋಧ
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸ್ ಕಾರ್ಯಾಚರಣೆ
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading