Connect with us

ಬಿಗ್ ನ್ಯೂಸ್

Nepal-ಚಾಲಕನ ಆತ್ಮಹತ್ಯೆ ಬೆನ್ನಲ್ಲೇ ನೇಪಾಳದಲ್ಲಿ ಪ್ರತಿಭಟನೆಯ ‘ಜೆನ್ ಝಿ’ ಕಿಚ್ಚು: ಯುವ ಜನತೆಯ ಪ್ರತಿಭಟನೆಯಿಂದಲೇ ಅಧಿಕಾರಕ್ಕೇರಿದ ಪ್ರಧಾನಿ ಬಾಲೇನ್ ಶಾ ಸರ್ಕಾರಕ್ಕೆ ಎದುರಾಯ್ತು ಮತ್ತೆ ದೊಡ್ಡ ಸಂಕಷ್ಟ

Published

on

Ad Widget

Ad Widget

Ad Widget

Ad Widget

ಆನ್ಲೈನ್ ಸೇವೆ ನೀಡುವ ‘ಪಾಥಾವೊ’ (Pathao) ಸಂಸ್ಥೆಯ 25 ವರ್ಷದ ಚಾಲಕನೊಬ್ಬ ಸಂಚಾರ ಪೊಲೀಸರ ದಂಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಗ ನೇಪಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಯುವಜನರ ಬಲಿಷ್ಠ ಬೆಂಬಲದೊಂದಿಗೆ ಅಧಿಕಾರಕ್ಕೇರಿದ್ದ ಪ್ರಧಾನಿ ಬಾಲೇನ್ ಶಾ (ಬಾಲೇಂದ್ರ) ವಿರುದ್ಧವೇ ಈಗ ‘ಜೆನ್-ಝೀ’ (Gen-Z) ಯುವ ಸಮುದಾಯ ಬೀದಿಗಿಳಿದು ಹೋರಾಟ ಆರಂಭಿಸಿದೆ.

Ad Widget

Ad Widget

Ad Widget

Ad Widget

ಕಾಠ್ಮಂಡು (ನೇಪಾಳ): ಆನ್ಲೈನ್ ಸೇವೆ ನೀಡುವ ‘ಪಾಥಾವೊ’ (Pathao) ಸಂಸ್ಥೆಯ 25 ವರ್ಷದ ಚಾಲಕನೊಬ್ಬ ಸಂಚಾರ ಪೊಲೀಸರ ದಂಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಗ ನೇಪಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಯುವಜನರ ಬಲಿಷ್ಠ ಬೆಂಬಲದೊಂದಿಗೆ ಅಧಿಕಾರಕ್ಕೇರಿದ್ದ ಪ್ರಧಾನಿ ಬಾಲೇನ್ ಶಾ (ಬಾಲೇಂದ್ರ) ವಿರುದ್ಧವೇ ಈಗ ‘ಜೆನ್-ಝೀ’ (Gen-Z) ಯುವ ಸಮುದಾಯ ಬೀದಿಗಿಳಿದು ಹೋರಾಟ ಆರಂಭಿಸಿದೆ.

Ad Widget

Ad Widget alt="Ad Widget"/>

Ad Widget

ದುರಂತಕ್ಕೆ ಕಾರಣವೇನು?
ಪಾಥಾವೊ ಚಾಲಕ ಗಣೇಶ್ ನೇಪಾಳಿ ಎಂಬುವವರು ಕಾಠ್ಮಂಡುವಿನ ಪಾಸ್‌ಪೋರ್ಟ್ ಇಲಾಖೆಯ ಎದುರು ಗ್ರಾಹಕರಿಗಾಗಿ ಕಾಯುತ್ತಾ ತಮ್ಮ ಬೈಕ್ ನಿಲ್ಲಿಸಿದ್ದರು. ಈ ವೇಳೆ ಅಲ್ಲಿಗೆ ಬಂದ ನಗರ ಪಾಲಿಕೆ ಪೊಲೀಸರು ಬೈಕ್ ಸ್ಥಳಾಂತರಿಸುವಂತೆ ಸೂಚಿಸಿ, ಗಣೇಶ್ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಳಿಕ ಬೈಕ್‌ಗೆ ವೀಲ್ ಲಾಕ್ ಹಾಕಿ 1,000 ನೇಪಾಳಿ ರೂ. ದಂಡ ವಿಧಿಸಿದ್ದಾರೆ.

Ad Widget

Ad Widget <> Ad Widget

ಬಡತನದಲ್ಲಿದ್ದ ಗಣೇಶ್, ಸುಮಾರು ಎರಡು ಗಂಟೆಗಳ ಕಾಲ ದಂಡ ರದ್ದು ಮಾಡುವಂತೆ ಪೊಲೀಸರನ್ನು ಬೇಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಇದರಿಂದ ತೀವ್ರ ಬೇಸರಗೊಂಡ ಗಣೇಶ್, ಬೈಕ್‌ನಿಂದ ಪೆಟ್ರೋಲ್ ತೆಗೆದು ತನ್ನ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ತೀವ್ರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸರ್ಕಾರದ ವಿರುದ್ಧ ಯುವಜನರ ಆಕ್ರೋಶ:
ಈ ಹಿಂದೆ ಕೆ.ಪಿ. ಶರ್ಮಾ ಒಲಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನೇಪಾಳದ ಯುವಜನತೆ, ಈಗ ಬಾಲೇನ್ ಶಾ ಸರ್ಕಾರದ ಕಠಿಣ ನಿಯಮಗಳ ವಿರುದ್ಧ ತಿರುಗಿಬಿದ್ದಿದ್ದಾರೆ. “ಕೇವಲ ಮೂರು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಸರ್ಕಾರ, ಸಂಚಾರ ನಿಯಮಗಳ ಹೆಸರಿನಲ್ಲಿ ಬಡವರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಭಾನುವಾರ ನೂರಾರು ಯುವಕರು ಸಿಂಹದುರ್ಬಾರ್ ಕಾರ್ಯಾಲಯದ ಎದುರು ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು.

Ad Widget

Ad Widget

ರಾಜಕೀಯ ಸಂಚಲನ:
ಈ ಘಟನೆಯನ್ನು ವಿರೋಧ ಪಕ್ಷಗಳೂ ತೀವ್ರವಾಗಿ ಖಂಡಿಸಿವೆ. ನೇಪಾಳ ಕಮ್ಯುನಿಸ್ಟ್ ಪಕ್ಷದ ಸಂಸದ ಬಿಷ್ಣು ಬಹಾದುರ್ ಬಿಶ್ವಕರ್ಮ ಮಾತನಾಡಿ, “ಒಬ್ಬ ಸಾಮಾನ್ಯ ನಾಗರಿಕ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಿಸಿದ ಈ ಕ್ರೂರ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ. ಮೃತನ ಕುಟುಂಬಸ್ಥರು ಮತ್ತು ಸ್ನೇಹಿತರು ಬಿರ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ, ಪ್ರಕರಣದ ಕುರಿತು ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಯುವಜನರ ಬೆಂಬಲದಿಂದಲೇ ಗೆದ್ದು ಬಂದಿದ್ದ ಬಾಲೇನ್ ಶಾ ಅವರಿಗೆ ಈಗ ಅದೇ ಯುವ ಸಮುದಾಯದ ವಿರೋಧವು ದೊಡ್ಡ ರಾಜಕೀಯ ಸವಾಲಾಗಿ ಪರಿಣಮಿಸಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!