ಅಪರಾಧ
Mangalore-ಮಂಗಳೂರು: ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕೆಲಸಕ್ಕೆ ಕರೆತಂದಿದ್ದ ಮೂವರ ವಿರುದ್ಧ ಪ್ರಕರಣ ದಾಖಲು..!
ಮಂಗಳೂರು ನಗರದಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳನ್ನು ಕೆಲಸಕ್ಕೆ ನಿಯೋಜಿಸಿದ ಗಂಭೀರ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಮಂಗಳೂರು ಪೊಲೀಸರು ಮಂಗಳವಾರ (ಜುಲೈ 14) ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು: ನಗರದಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳನ್ನು ಕೆಲಸಕ್ಕೆ ನಿಯೋಜಿಸಿದ ಗಂಭೀರ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಮಂಗಳೂರು ಪೊಲೀಸರು ಮಂಗಳವಾರ (ಜುಲೈ 14) ಪ್ರಕರಣ ದಾಖಲಿಸಿದ್ದಾರೆ.
ಬಂಧಿತ ಆರೋಪಿಗಳು:
ಪಶ್ಚಿಮ ಬಂಗಾಳ ಮೂಲದ ಮೊಯ್ಲಿನ್ ಇಸ್ಲಾಂ, ರಸೂಲ್ ಇಸ್ಲಾಂ ಮತ್ತು ದಿಲ್ವಾರ್ ಹುಸೇನ್ ಎಂಬುವವರೇ ಆರೋಪಿಗಳಾಗಿದ್ದಾರೆ. ಇವರಲ್ಲಿ ಮೊಯ್ಲಿನ್ ಇಸ್ಲಾಂ ಮತ್ತು ದಿಲ್ವಾರ್ ಹುಸೇನ್ ಅವರನ್ನು ಮಂಗಳೂರಿನಲ್ಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಕೋಲ್ಕತ್ತಾದಲ್ಲಿ ಕಾರ್ಯಾಚರಣೆ:
ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ರಸೂಲ್ ಇಸ್ಲಾಂನನ್ನು ಮಂಗಳೂರು ಪೊಲೀಸರ ಮಾಹಿತಿಯ ಮೇರೆಗೆ ಕೋಲ್ಕತ್ತಾ ಪೊಲೀಸರು ಅಲ್ಲಿ ಬಂಧಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಡಿಸಿಪಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯ ಬಳಿಕ, ಆರೋಪಿಯನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆತರಲು ವಿಶೇಷ ಪೊಲೀಸ್ ತಂಡವು ಈಗಾಗಲೇ ಕೋಲ್ಕತ್ತಾಕ್ಕೆ ತೆರಳಿದೆ.
ಏನಿದು ಪ್ರಕರಣ?
ಈ ಆರೋಪಿಗಳು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕರೆತರುವ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಈ ಕಾರ್ಮಿಕರ ಗುಂಪಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳನ್ನು ಅಕ್ರಮವಾಗಿ ಸೇರಿಸಿ ಮಂಗಳೂರಿಗೆ ಕರೆತರುತ್ತಿದ್ದರು ಎಂಬ ಆಘಾತಕಾರಿ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:
- ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್ಗಳು.
- ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್ನ 30 ಕ್ಯಾನ್ಗಳು.
- ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್ಗಳು.
- ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
-
ರಾಜಕೀಯ22 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್5 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಮಂಗಳೂರು6 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















