ಅಂತರ ರಾಜ್ಯ
Prashant Kishore-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ರಾಜೀನಾಮೆಯಿಂದ ತೆರವಾಗಿರುವ ಬಂಕಿಪುರ ಕ್ಷೇತ್ರದ ಉಪಚುನಾವಣೆಗೆ ಪ್ರಶಾಂತ್ ಕಿಶೋರ್ ಸ್ಪರ್ಧೆ: ಪಿಕೆ ಒಟ್ಟು ಆಸ್ತಿ ಎಷ್ಟು ಗೊತ್ತಾ..?
ದೇಶದ ರಾಜಕೀಯದಲ್ಲಿ ತೆರೆಮರೆಯ ತಂತ್ರಜ್ಞರಾಗಿ ಹೆಸರುವಾಸಿಯಾಗಿದ್ದ ಪ್ರಶಾಂತ್ ಕಿಶೋರ್ (PK), ಇದೀಗ ಮೊದಲ ಬಾರಿಗೆ ಬಿಹಾರದ ಬಂಕಿಪುರ ವಿಧಾನಸಭಾ ಉಪಚುನಾವಣೆಯ ಮೂಲಕ ನೇರ ರಾಜಕಾರಣಕ್ಕೆ ಧುಮುಕಿದ್ದಾರೆ. ಸೋಮವಾರ ಭರ್ಜರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿರುವ ಅವರು, ತಮ್ಮ ಕುಟುಂಬದ ಒಟ್ಟು ಆಸ್ತಿ ಮೌಲ್ಯ 198 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ.
ಪಾಟ್ನಾ: ದೇಶದ ರಾಜಕೀಯದಲ್ಲಿ ತೆರೆಮರೆಯ ತಂತ್ರಜ್ಞರಾಗಿ ಹೆಸರುವಾಸಿಯಾಗಿದ್ದ ಪ್ರಶಾಂತ್ ಕಿಶೋರ್ (PK), ಇದೀಗ ಮೊದಲ ಬಾರಿಗೆ ಬಿಹಾರದ ಬಂಕಿಪುರ ವಿಧಾನಸಭಾ ಉಪಚುನಾವಣೆಯ ಮೂಲಕ ನೇರ ರಾಜಕಾರಣಕ್ಕೆ ಧುಮುಕಿದ್ದಾರೆ. ಸೋಮವಾರ ಭರ್ಜರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿರುವ ಅವರು, ತಮ್ಮ ಕುಟುಂಬದ ಒಟ್ಟು ಆಸ್ತಿ ಮೌಲ್ಯ 198 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ.
ಕುಟುಂಬದ ಆಸ್ತಿ ವಿವರ:
ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಪ್ರಶಾಂತ್ ಕಿಶೋರ್ ಅವರಿಗಿಂತ ಅವರ ಪತ್ನಿ ಡಾ. ಜಹಾನ್ವಿ ದಾಸ್ ಅವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.
ಪ್ರಶಾಂತ್ ಕಿಶೋರ್ ಅವರ ಆಸ್ತಿ (₹96.06 ಕೋಟಿ): ಇವರ ಬಳಿ 22.19 ಕೋಟಿ ರೂ. ಮೊತ್ತದ ಚರ ಆಸ್ತಿ ಹಾಗೂ ಬಿಹಾರದ ರೋಹ್ತಾಸ್‌ನಲ್ಲಿರುವ ರೈಸ್ ಮಿಲ್ ಮತ್ತು ವಿವಿಧ ನಗರಗಳ ವಸತಿ ಸಂಕೀರ್ಣಗಳು ಸೇರಿದಂತೆ 73.87 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿ ಇದೆ.
ಪತ್ನಿ ಡಾ. ಜಹಾನ್ವಿ ದಾಸ್ ಅವರ ಆಸ್ತಿ (₹101.93 ಕೋಟಿ): ದೆಹಲಿಯ ಅಪೊಲೊ ಆಸ್ಪತ್ರೆಯಲ್ಲಿ ಹಿರಿಯ ಸಲಹೆಗಾರರಾಗಿರುವ ಇವರ ಬಳಿ 89.51 ಕೋಟಿ ರೂ. ಮೊತ್ತದ ಚರ ಆಸ್ತಿ ಮತ್ತು 12.42 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿ ಇದೆ. ಇವರ ಬಳಿ ಸುಮಾರು 64 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿವೆ.
ಸ್ವಂತ ಪಕ್ಷಕ್ಕೇ 85 ಕೋಟಿ ದೇಣಿಗೆ!
ಪ್ರಶಾಂತ್ ಕಿಶೋರ್ ಅವರು ‘ವೇಧಾಸ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಕಂಪನಿಯ ಶೇ. 100ರಷ್ಟು ಒಡೆತನ ಹೊಂದಿದ್ದಾರೆ. ಈ ಕಂಪನಿಯ ಮೌಲ್ಯವೇ ಸುಮಾರು 95 ಕೋಟಿ ರೂ.ಗಳಾಗಿವೆ. ವಿಶೇಷವೆಂದರೆ, ಇದೇ ಕಂಪನಿಯ ಮೂಲಕ ತಮ್ಮದೇ ಆದ ‘ಜನ ಸುರಾಜ್ ಪಕ್ಷ’ಕ್ಕೆ 85 ಕೋಟಿ ರೂ. ಹಾಗೂ ಜನ ಸುರಾಜ್ ಫೌಂಡೇಶನ್‌ಗೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ಹಿಂದೆ ತಾವು ಕಾರ್ಪೊರೇಟ್ ಸಲಹೆಗಾರರಾಗಿ ಕೇವಲ ಮೂರು ವರ್ಷಗಳಲ್ಲಿ 241 ಕೋಟಿ ರೂ. ಸಂಪಾದಿಸಿದ್ದಾಗಿ ಅವರು ಬಹಿರಂಗಪಡಿಸಿದ್ದರು.
ಶೈಕ್ಷಣಿಕ ಹಿನ್ನೆಲೆ:
ಪ್ರಶಾಂತ್ ಕಿಶೋರ್ ಅವರು ಅತ್ಯಂತ ಉನ್ನತ ಶಿಕ್ಷಣ ಪಡೆದ ನಾಯಕರಾಗಿದ್ದಾರೆ.
10ನೇ ತರಗತಿ: ಬಕ್ಸಾರ್‌ನ ಎಂ.ಪಿ ಪ್ರೌಢಶಾಲೆ (1991).
12ನೇ ತರಗತಿ: ಪಾಟ್ನಾ ವಿಜ್ಞಾನ ಕಾಲೇಜು (1993).
ಪದವಿ (BBA): ಲಕ್ನೋ ವಿಶ್ವವಿದ್ಯಾಲಯ (1996-99).
ಸ್ನಾತಕೋತ್ತರ ಪದವಿ (MHA): ಹೈದರಾಬಾದ್‌ನ ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಕಾಲೇಜ್ ಆಫ್ ಇಂಡಿಯಾ.
ಫ್ರೆಂಚ್ ಭಾಷೆ: ಫ್ರಾನ್ಸ್‌ನ ಕ್ಲರ್ಮಾಂಟ್-ಫೆರಾಂಡ್ ವಿಶ್ವವಿದ್ಯಾಲಯದಲ್ಲಿ ಭಾಷಾ ಪ್ರಾವೀಣ್ಯತೆ ಪಡೆದಿದ್ದಾರೆ.
ಬಂಕಿಪುರದಲ್ಲಿ ಜಿದ್ದಾಜಿದ್ದಿನ ಫೈಟ್:
ಬಿಜೆಪಿಯ ಪ್ರಭಾವಿ ನಾಯಕ ನಿತಿನ್ ನಬಿನ್ ಅವರು ರಾಜ್ಯಸಭೆಗೆ ಆಯ್ಕೆಯಾದ ಕಾರಣ ತೆರವಾಗಿದ್ದ ಬಂಕಿಪುರ ಕ್ಷೇತ್ರದಲ್ಲಿ ಈ ಉಪಚುನಾವಣೆ ನಡೆಯುತ್ತಿದೆ. ಇಲ್ಲಿ ಪ್ರಶಾಂತ್ ಕಿಶೋರ್ (ಜನ ಸುರಾಜ್) ಮತ್ತು ನೀರಜ್ ಸಿನ್ಹಾ (ಬಿಜೆಪಿ) ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಜುಲೈ 30ರಂದು ಮತದಾನ ನಡೆಯಲಿದ್ದು, ಆಗಸ್ಟ್ 3ರ ಫಲಿತಾಂಶವು ಪ್ರಶಾಂತ್ ಕಿಶೋರ್ ಅವರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.
ನಿಧನ ವಾರ್ತೆ
Accident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.
ಸುಲ್ತಾನ್‌ಪುರ (ಉತ್ತರ ಪ್ರದೇಶ): ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.
ಅಯೋಧ್ಯೆ-ಸುಲ್ತಾನ್‌ಪುರ ಗಡಿಯಲ್ಲಿರುವ ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 79.6ನೇ ಕಿಲೋಮೀಟರ್ ಬಳಿ ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.
ಡಿಯೋರಿಯಾ ಜಿಲ್ಲೆಯ ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಲಿಯಾ ದುದೈಲಾ ಗ್ರಾಮದ ನಿವಾಸಿ ಸುಬೇದಾರ್ ಮೇಜರ್ ಸತ್ಯವಾನ್ ಅವರು ಚಂಡೀಗಢದಲ್ಲಿ ನಿಯೋಜನೆಗೊಂಡಿದ್ದರು. ಇತ್ತೀಚೆಗೆ ಅವರು ಮೃತಪಟ್ಟಿದ್ದು, ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿತ್ತು.
ಆಂಬ್ಯುಲೆನ್ಸ್‌ನಲ್ಲಿ ಸತ್ಯವಾನ್ ಅವರ ಮಗ ಗೌರವ್ ಸಿಂಗ್, ಸಹೋದರ ರಾಜನ್ ಚೌಧರಿ, ಸೋದರಳಿಯ ರಾಮ್ ಸಂಜು ಸಿಂಗ್ ಹಾಗೂ ಚಾಲಕ ಜಸ್ಪಾಲ್ ಪ್ರಯಾಣಿಸುತ್ತಿದ್ದರು.
ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗೌರವ್ ಸಿಂಗ್ ಹಾಗೂ ಚಾಲಕ ಜಸ್ಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ರಾಜನ್ ಚೌಧರಿ ಹಾಗೂ ರಾಮ್ ಸಂಜು ಸಿಂಗ್ ಅವರನ್ನು ಅಯೋಧ್ಯೆಯ ಕುಮಾರ್‌ಗಂಜ್‌ನ ಸಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಪೊಲೀಸ್ ಠಾಣೆ ಆವರಣದಲ್ಲಿ ಯೋಧರ ಪೂರ್ಣ ಗೌರವದೊಂದಿಗೆ ಇರಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವುದರ ಜೊತೆಗೆ ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಅಂತರ ರಾಜ್ಯ
Honeytrap-ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಹಸ್ಯ ಮಾಹಿತಿ ಸೋರಿಕೆ ಮಾಡಿದ ನೌಕಾಪಡೆ ಸಿಬ್ಬಂದಿ ಬಂಧನ
ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ ಎಂದು ಗುರುತಿಸಲಾಗಿದೆ.
ಕೊಯಮತ್ತೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ (31) ಎಂದು ಗುರುತಿಸಲಾಗಿದೆ. 2014ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿದ್ದ ಮುಖರ್ಜಿ, ವಿಶಾಖಪಟ್ಟಣದಲ್ಲಿರುವ ಈಸ್ಟರ್ನ್ ನೇವಲ್ ಕಮಾಂಡ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.
ಕೆಲವು ತಿಂಗಳ ಹಿಂದೆ ಪಾಕಿಸ್ತಾನದ ಗುಪ್ತಚರ ಏಜೆಂಟ್ ಎಂದು ಶಂಕಿಸಲಾಗಿರುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಮುಖರ್ಜಿಯನ್ನು ಸಂಪರ್ಕಿಸಿದ್ದಳು. ಬಳಿಕ ಆಕೆಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ ಆತ, ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಆಕೆಗೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಆರೋಪ: ಅಸ್ಸಾಂನಲ್ಲಿ ಇಬ್ಬರ ಬಂಧನ
ಗುವಾಹಟಿ: ಪಾಕಿಸ್ತಾನಕ್ಕೆ ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಬ್ಬರು ನಿವೃತ್ತ ಯೋಧ ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಬಂಧಿತರನ್ನು ಶೀಘ್ರದಲ್ಲೇ ಕೇಂದ್ರ ತನಿಖಾ ಸಂಸ್ಥೆಗಳ ವಶಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
Uncategorized18 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ19 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್6 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ6 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ5 hours agoMurder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ6 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ6 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ನಿಧನ ವಾರ್ತೆ4 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು


















