Connect with us

Uncategorized

NIKHARA POLITICAL EXCLUSIVE : ಪುತ್ತೂರು ರಾಜಕೀಯದಲ್ಲಿ ಮತ್ತೆ ಸಂಚಲನ:ಗ್ರಾ.ಪಂ ಚುನಾವಣೆಗೆ ಪುತ್ತಿಲ ಪರಿವಾರ ತಾಲಿಮು! ಬಿಜೆಪಿಗೆ ಬ್ಲ್ಯಾಕ್ ಮೇಲ್? ಕಮಲ ನಾಯಕರ ನಿದ್ದೆಗೆಡಿಸಿದ ‘ಬ್ಯಾಟ್’ – ಕಾಂಗ್ರೇಸ್ಸಿಗೆ ಗೆಲುವಿನ ಸಿಕ್ಸರ್ ?

Published

on

Ad Widget

Ad Widget

Ad Widget

Ad Widget

ಪುತ್ತೂರು: ಕರಾವಳಿ ಕರ್ನಾಟಕದ ಅತ್ಯಂತ ಸೂಕ್ಷ್ಮ ಹಾಗೂ ಪ್ರತಿಷ್ಠಿತ ರಾಜಕೀಯ ಕ್ಷೇತ್ರವಾದ ಪುತ್ತೂರಿನಲ್ಲಿ ಮತ್ತೆ ಬಂಡಾಯದ ಕಿಡಿ ಹೊತ್ತಿಕೊಳ್ಳುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. 2024ರ ಲೋಕಸಭಾ ಚುನಾವಣೆಯ ಬಳಿಕ ತಣ್ಣಗಾಗಿದ್ದಂತೆ ಕಂಡಿದ್ದ ‘ಪುತ್ತಿಲ ಪರಿವಾರ’ ಇದೀಗ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹೊಸ್ತಿಲಿನಲ್ಲಿ ಹೊಸ ತಂತ್ರಗಾರಿಕೆಯೊಂದಿಗೆ ಅಖಾಡಕ್ಕಿಳಿಯಲು ಸಿದ್ಧತೆ ನಡೆಸುತ್ತಿರುವುದು ಸ್ಪಷ್ಟವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು ಹಾಗೂ ಬೂತ್ ಮಟ್ಟದ ಸಭೆಗಳು ಕಮಲ ಪಾಳಯದಲ್ಲಿ ತಲ್ಲಣ ಸೃಷ್ಟಿಸಿವೆ.

Ad Widget

Ad Widget

Ad Widget

Ad Widget

ಪುತ್ತಿಲ ಪರಿವಾರವು ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಧಿಕೃತವಾಗಿ ಸ್ಪರ್ಧಿಸುವುದಾಗಿ ಎಲ್ಲಿಯೂ ಬಹಿರಂಗವಾಗಿ ಘೋಷಿಸಿಕೊಂಡಿಲ್ಲ. ಆದರೆ, ಕಳೆದ ಕೆಲವು ದಿನಗಳಿಂದ ಪುತ್ತಿಲ ಪರಿವಾರದ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ “ಬ್ಯಾಟ್ ಬೀಸಲು ನೀವು ರೆಡಿ ನಾ…?”, “ಗ್ರಾಮ ಪಂಚಾಯಿತಿ ಚುನಾವಣಾ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭ” ಎಂಬ ಪೋಸ್ಟರ್‌ಗಳು ನಿರಂತರವಾಗಿ ಹರಿದಾಡುತ್ತಿವೆ. ಇದು ಕೇವಲ ಪ್ರಚಾರಕ್ಕಾಗಿ ಅಲ್ಲ, ಬದಲಾಗಿ ವ್ಯವಸ್ಥಿತವಾಗಿ ಚುನಾವಣೆಗೆ ಸಜ್ಜಾಗುತ್ತಿರುವುದರ ಸ್ಪಷ್ಟ ಮುನ್ಸೂಚನೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

Ad Widget

Ad Widget alt="Ad Widget"/>

Ad Widget
Ad Widget

Ad Widget <> Ad Widget

ರಾಜಕೀಯ ವಿಶ್ಲೇಷಕರ ಪ್ರಕಾರ, ಇದು ಬಿಜೆಪಿಯನ್ನು ಬ್ಲ್ಯಾಕ್‌ಮೇಲ್ ಮಾಡಲು ಹಾಗೂ ಅರುಣ್ ಪುತ್ತಿಲ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯ ಟಿಕೆಟ್ ಅಥವಾ ಸೂಕ್ತ ಸ್ಥಾನಮಾನ ಗಿಟ್ಟಿಸಿಕೊಳ್ಳಲು ಪುತ್ತಿಲ ಪರಿವಾರ ಹೂಡಿರುವ ಹಳೆಯ ತಂತ್ರದ ಮುಂದುವರಿದ ಭಾಗವಾಗಿದೆ.

ವೈರಲ್‌ ಆಗಿರುವ ಪೋಸ್ಟರ್

2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದು ಬಿಜೆಪಿಯ ಅಧಿಕೃತ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದ ಅರುಣ್ ಪುತ್ತಿಲ, ಬಳಿಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯ ನಾಯಕರನ್ನು ಭೇಟಿಯಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

Ad Widget

Ad Widget

ಆದರೆ, ಪಕ್ಷಕ್ಕೆ ಮರಳಿದ ಒಂದು ವರ್ಷದ ಬಳಿಕವೂ ತಮ್ಮ ಬೆಂಬಲಿಗರಿಗೆ ನಿರೀಕ್ಷಿತ ಮಟ್ಟದ ಸ್ಥಾನಮಾನಗಳು ದೊರೆತರೂ, ತಮಗೆ ಯಾವುದೇ ಸ್ಥಾನಮಾನ ಸಿಕ್ಕಿಲ್ಲ ಎಂಬ ಕೊರಗು ಅರುಣ್ ಪುತ್ತಿಲ ಅವರನ್ನು ಕಾಡಲಾರಂಭಿಸಿತ್ತು ಎನ್ನಲಾಗಿದೆ. ಇದಕ್ಕೆ ಪಕ್ಷದಲ್ಲಿ ಹುದ್ದೆ ಸಿಗದ ಇನ್ನೂ ಕೆಲವರು ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ.‌

ವೈರಲ್‌ ಆಗಿರುವ ಪೋಸ್ಟರ್

ಹೀಗಾಗಿ ಬಿಜೆಪಿಯ ಹಲವು ಆಂತರಿಕ ಸಭೆಗಳಲ್ಲಿ ಪರಿವಾರದ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ನಂತರ ಅವರನ್ನು ಪಕ್ಷದ ಹುದ್ದೆಗಳಿಂದ ಪದಚ್ಯುತಗೊಳಿಸಲಾಗಿತ್ತು. ಇದೇ ಕಾರಣಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಅಸ್ತ್ರವನ್ನು ಬಳಸಿ ಬಿಜೆಪಿಯ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಚುನಾವಣೆಗೆ ನಿಲ್ಲುವ ಬಗ್ಗೆ ಎಲ್ಲೂ ಅಧಿಕೃತವಾಗಿ ಪುತ್ತಿಲ ಪರಿವಾರದ ನಾಯಕರು ಘೋಷಿಸದಿರುವುದು ಹಾಗೂ ಅವರ ನಾಯಕರಲ್ಲಿ ಈ ಬಗ್ಗೆ ಪ್ರಶ್ನಿಸಿದರೇ ಉತ್ತರಿಸದೇ ಜಾರಿಕೊಳ್ಳುತ್ತಿರುವುದು ಇಂತಹ ಅನುಮಾನಗಳಿಗೆ ಪುಷ್ಠಿ ನೀಡುತ್ತಿದೆ. ಚುನಾವಣೆಗೆ ನಿಲ್ಲುವುದೇ ಆಗಿದ್ದರೇ , ಪೋಸ್ಟರ್‌ ಹರಿ ಬಿಡುವ ಬದಲು ನೇರವಾಗಿ ಘೋಷಿಸಬಹುದಲ್ಲವೇ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

«”ಪುತ್ತಿಲ ಪರಿವಾರದವರು ಪ್ರತ್ಯೇಕವಾಗಿ ಸ್ಪರ್ಧಿಸುವುದು ಬಿಜೆಪಿಯ ಮತಗಳನ್ನು ವಿಭಜಿಸಿ ಕಾಂಗ್ರೆಸ್‌ಗೆ ಲಾಭ ಮಾಡಿಕೊಡುವ ತಂತ್ರಗಾರಿಕೆ. ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧ ಪುತ್ತಿಲ ಪರಿವಾರ ಎಂದೂ ಧ್ವನಿ ಎತ್ತದಿರುವುದೇ ಇವರ ಒಳಗುಟ್ಟನ್ನು ಬಯಲು ಮಾಡುತ್ತದೆ.”
— ಹೆಸರು ಹೇಳಲಿಚ್ಛಿಸದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿರಿಯ ನಾಯಕ»

ಪುತ್ತಿಲ ಪರಿವಾರದ ಈ ನೂತನ ನಡೆ ಬಗ್ಗೆ ಬಿಜೆಪಿ ಸ್ಥಳೀಯ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. “ಇದು ಪುತ್ತಿಲ ಪರಿವಾರವಲ್ಲ, ಕಾಂಗ್ರೆಸ್‌ನ ಬಿ-ಟೀಂ” ಎಂದು ಬಿಜೆಪಿ ನಾಯಕರು ಆಂತರಿಕವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ.

ಇದಕ್ಕೆ ಅವರು ನೀಡುವ ಪ್ರಮುಖ ಕಾರಣವೆಂದರೆ, ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧ ಪುತ್ತಿಲ ಪರಿವಾರದ ನಾಯಕರು ಇಲ್ಲಿಯವರೆಗೆ ಒಂದೇ ಒಂದು ಮಾತನ್ನೂ ಆಡದಿರುವುದು ಹಾಗೂ ಅವರ ಜನವಿರೋಧಿ ಧೋರಣೆಗಳ ವಿರುದ್ಧ ಯಾವುದೇ ಹೋರಾಟ ನಡೆಸದಿರುವುದು ಅವರ ಆಂತರಿಕ ಮೈತ್ರಿಯನ್ನು ಎತ್ತಿ ತೋರಿಸುತ್ತದೆ ಎಂಬುದು ಬಿಜೆಪಿ ನಾಯಕರ ಗಂಭೀರ ಆರೋಪವಾಗಿದೆ.

ವೈರಲ್‌ ಪೋಸ್ಟರ್

ಮತ್ತೊಂದೆಡೆ, ಅರುಣ್ ಪುತ್ತಿಲ ಬಣದ ಆಪ್ತ ಮೂಲಗಳ ಪ್ರಕಾರ, “ಅರುಣ್ ಪುತ್ತಿಲ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಕಾರಣಕ್ಕೂ ಟಿಕೆಟ್ ನೀಡುವುದಿಲ್ಲ ಎಂಬುದು ಈಗಲೇ ಖಚಿತವಾಗಿದೆ. ಹೀಗಾಗಿ ಇದು ನಮ್ಮ ರಾಜಕೀಯ ಅಸ್ತಿತ್ವದ ಪ್ರಶ್ನೆಯಾಗಿದೆ. ನಾವು ಸುಮ್ಮನೆ ಕುಳಿತರೆ ನಮ್ಮ ಶಕ್ತಿ ಇಲ್ಲದಂತಾಗುತ್ತದೆ. ಆದ್ದರಿಂದ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ನಮ್ಮದೇ ಬಣದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ನಮ್ಮ ಶಕ್ತಿ ಪ್ರದರ್ಶಿಸುವುದು ಅನಿವಾರ್ಯವಾಗಿದೆ” ಎಂದು ತೆರೆಮರೆಯಲ್ಲಿ ಮಾಹಿತಿ ನೀಡುತ್ತಿದ್ದಾರೆ.

2023ರ ವಿಧಾನಸಭಾ ಚುನಾವಣೆ: ಬಿಜೆಪಿಗೆ ಬಂಡಾಯವೆದ್ದು ಪಕ್ಷೇತರರಾಗಿ ಅರುಣ್ ಪುತ್ತಿಲ ಸ್ಪರ್ಧೆ. ದ್ವಿತೀಯ ಸ್ಥಾನ ಗಳಿಸಿ ಕಮಲ ನಾಯಕರಿಗೆ ಶಾಕ್ ನೀಡಿದರು.

2024ರ ಲೋಕಸಭಾ ಚುನಾವಣೆ: ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಮರಳಿ ಕಮಲ ಪಾಳಯಕ್ಕೆ ಸೇರ್ಪಡೆ. ಬೆಂಬಲಿಗರಿಗೆ ಪದಾಧಿಕಾರಿಗಳ ಹುದ್ದೆಗಳ ಹಂಚಿಕೆ. ಈ ವೇಳೆ “ತನಗೆ ಹುದ್ದೆಯ ಆಪೇಕ್ಷೆಯಿಲ್ಲ, ವ್ಯವಸ್ಥೆ ಸರಿಪಡಿಸುವುದಷ್ಟೇ ತಮ್ಮ ಹೋರಾಟ” ಎಂಬ ಸಂದೇಶ ನೀಡಿದ್ದರು.

2025ರ ಡಿಸೆಂಬರ್ – ವಿರಾಸತ್‌ನಿಂದ ದೂರ: ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಪ್ರತಿಷ್ಠಿತ ‘ಅಟಲ್ ವಿರಾಸತ್’ ಕಾರ್ಯಕ್ರಮವನ್ನು ಪುತ್ತಿಲ ಪರಿವಾರ ಹಾಗೂ ಅವರ ಬೆಂಬಲಿಗ ಪದಾಧಿಕಾರಿಗಳು ಸಂಪೂರ್ಣವಾಗಿ ಬಹಿಷ್ಕರಿಸಿದರು.

2026ರ ಸಂಘಟನಾತ್ಮಕ ಕ್ರಮ: ಪಕ್ಷದ ಚಟುವಟಿಕೆಗಳಿಂದ ದೂರ ಉಳಿದ ಹಿನ್ನೆಲೆಯಲ್ಲಿ ಪುತ್ತಿಲ ಬೆಂಬಲಿಗರು ಹಾಗೂ ಪದಾಧಿಕಾರಿಗಳನ್ನು ಬಿಜೆಪಿ ಹುದ್ದೆಗಳಿಂದ ವಜಾಗೊಳಿಸಿ, ವಾಟ್ಸ್‌ಆ್ಯಪ್ ಗುಂಪುಗಳಿಂದಲೂ ಉಚ್ಚಾಟಿಸಲಾಯಿತು.

ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತಿಲ ಪರಿವಾರ ಒಳಮೊಗ್ರು ಬೂತ್ ನ ಕಾರ್ಯಕರ್ತರ ಸಭೆಯ ಚಿತ್ರ

ಗ್ರಾಮ ಪಂಚಾಯಿತಿ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾಗಬಹುದೆಂಬ ನಿರೀಕ್ಷೆಯಿರುವುದರಿಂದ ಪುತ್ತಿಲ ಪರಿವಾರ ತಳಮಟ್ಟದಲ್ಲಿ ಅತ್ಯಂತ ವೇಗವಾಗಿ ಕಾರ್ಯಾಚರಣೆಗೆ ಇಳಿದಿದೆ.

ಕಳೆದ ಭಾನುವಾರ ಅರುಣ್ ಪುತ್ತಿಲ ನೇತೃತ್ವದಲ್ಲಿ ಕೆದಂಬಾಡಿ, ಒಳಮೊಗ್ರು ಹಾಗೂ ಪಾಣಾಜೆ ಗ್ರಾಮಗಳಲ್ಲಿ ಪುತ್ತಿಲ ಪರಿವಾರದ ಬೂತ್ ಸಮಿತಿಗಳನ್ನು ಪುನರ್‌ರಚಿಸಲಾಗಿದ್ದು, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಸಜ್ಜಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಮಾಡವು 197 ಬೂತ್ ನ ಪುತ್ತಿಲ ಪರಿವಾರ ಕಾರ್ಯಕರ್ತರ ಸಮಾಲೋಚನೆ ಸಭೆಯ ಚಿತ್ರ

ವಿಶ್ವಾಸಾರ್ಹ ಮೂಲಗಳ ಪ್ರಕಾರ, ಈ ಮೂರೂ ಗ್ರಾಮಗಳಲ್ಲಿ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದ್ದು, ಕಣಕ್ಕಿಳಿಸುವುದು ಮಾತ್ರ ಬಾಕಿಯಿದೆ. ಅಲ್ಲದೆ, ಕೇಪು–ಕೆಯ್ಯೂರು ಭಾಗದಲ್ಲಿಯೂ ಪರಿವಾರ ಗ್ರಾಮ ಪಂಚಾಯಿತಿ ಚುನಾವಣೆಗೆ ಈಗಾಗಲೇ ತಾಲೀಮು ಆರಂಭಿಸಿದೆ.

ಒಟ್ಟಾರೆಯಾಗಿ, ಪುತ್ತೂರು ಬಿಜೆಪಿಯಲ್ಲಿ ಉಂಟಾಗಿರುವ ಈ ಭಿನ್ನಮತ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾರಿಗೆ ಲಾಭ ತಂದುಕೊಡಲಿದೆ ಮತ್ತು ಯಾರಿಗೆ ಮುಳುವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಸದ್ಯಕ್ಕಂತೂ ಪುತ್ತಿಲ ಪರಿವಾರದ ‘ಬ್ಯಾಟ್’ ಸದ್ದು ಕಮಲ ಪಾಳಯದ ನಾಯಕರ ನಿದ್ದೆಗೆಡಿಸಿದ್ದರೆ, ಕಾಂಗ್ರೆಸ್ ಪಾಳಯದಲ್ಲಿ ಚುನಾವಣೆ ಘೋಷಣೆಯಾಗುವ ಮುನ್ನವೇ ಗೆಲುವಿನ ಸಂಭ್ರಮ ಮೂಡಿಸಿರುವುದು ಸುಳ್ಳಲ್ಲ.

Ad Widget
Click to comment

Leave a Reply

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.

ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.

Ad Widget

Ad Widget

ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ  ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!