ಸ್ಥಳೀಯ
Uppinangadi-ಉಪ್ಪಿನಂಗಡಿ: ಖೋಟಾನೋಟು ಅಡ್ಡೆ ಮೇಲೆ ಪೊಲೀಸರ ದಾಳಿ ?
ಉಪ್ಪಿನಂಗಡಿಯ ಪದ್ಮುಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಉಪ್ಪಿನಂಗಡಿ: ತಾಲ್ಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಸಮೀಪದ ಅಡೆಂಜ ಎಂಬಲ್ಲಿ ಖೋಟಾನೋಟು ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಪೊಲೀಸರು ತಡರಾತ್ರಿ ಮಿಂಚಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಯಂತ್ರಗಳ ಮೂಲಕ ನೋಟು ಮುದ್ರಣ?
ಸ್ಥಳೀಯ ಮೂಲಗಳ ಪ್ರಕಾರ, ಆರೋಪಿಗಳು ಅತ್ಯಾಧುನಿಕ ಯಂತ್ರಗಳನ್ನು ಬಳಸಿಕೊಂಡು ನಕಲಿ ನೋಟುಗಳನ್ನು ತಯಾರಿಸುತ್ತಿದ್ದರು ಎನ್ನಲಾಗಿದೆ. ಈ ದಂಧೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು, ತಡರಾತ್ರಿಯೇ ಅಡ್ಡೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಅಧಿಕೃತ ಮಾಹಿತಿ ನಿರೀಕ್ಷೆ:
ಸದ್ಯಕ್ಕೆ ಪೊಲೀಸರು ದಾಳಿ ನಡೆಸಿರುವ ಬಗ್ಗೆ ಪ್ರಾಥಮಿಕ ಮಾಹಿತಿಗಳು ಲಭ್ಯವಾಗಿದ್ದರೂ, ಘಟನೆಯಲ್ಲಿ ಯಾರನ್ನಾದರೂ ವಶಕ್ಕೆ ಪಡೆಯಲಾಗಿದೆಯೇ ಮತ್ತು ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆಯೇ ಎಂಬ ಬಗ್ಗೆ ಪೊಲೀಸ್ ಇಲಾಖೆಯಿಂದ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಬಿಗ್ ನ್ಯೂಸ್
Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.
ಶಿಕ್ಷಣ
Philomena-ಮಂಗಳೂರು ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ ಕೂಟದಲ್ಲಿ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳ ಸಾಧನೆ
ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ ಐದನೇ ಹಾಗೂ ಪುರುಷರ ತಂಡವು ಏಳನೇ ಸ್ಥಾನ ಪಡೆದಿದೆ.
ಪುತ್ತೂರು, ನ. 20: ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ ಐದನೇ ಹಾಗೂ ಪುರುಷರ ತಂಡವು ಏಳನೇ ಸ್ಥಾನ ಪಡೆದಿದೆ.
ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ನಿಹಾಲ್ ಪೋಲ್ ವಾಲ್ಟ್ನಲ್ಲಿ ಬೆಳ್ಳಿ ಪದಕ ಗಳಿಸಿದರೆ, ತೃತೀಯ ಬಿಎಸ್ಸಿಯ ರಿತೀಶ್ ಡಿಸ್ಕಸ್ ಥ್ರೋ ಹಾಗೂ ಶಾಟ್ಪುಟ್ನಲ್ಲಿ ತಲಾ ಕಂಚಿನ ಪದಕ ಪಡೆದರು. ದ್ವಿತೀಯ ಬಿಸಿಎಯ ಆಶ್ರಯ್ ಹಾಗೂ ಪ್ರಥಮ ಬಿಕಾಂನ ನಿಶ್ಚಿತ್ 4×400 ಮೀಟರ್ ಮಿಶ್ರ ರಿಲೇಯಲ್ಲಿ ಕಂಚಿನ ಪದಕ ಪಡೆದ ತಂಡದ ಸದಸ್ಯರಾಗಿದ್ದರು.
ಮಹಿಳಾ ವಿಭಾಗದಲ್ಲಿ ತೃತೀಯ ಬಿಕಾಂನ ಅಮೃತಾ ಹೈಜಂಪ್ನಲ್ಲಿ ಕಂಚಿನ ಪದಕ ಗಳಿಸಿದರೆ, ತೃತೀಯ ಬಿಕಾಂನ ಪೃಥ್ವಿ ಹ್ಯಾಮರ್ ಥ್ರೋದಲ್ಲಿ ಕಂಚಿನ ಪದಕ ಪಡೆದರು. ದ್ವಿತೀಯ ಬಿಎಯ ಕೃತಿ 4×400 ಮೀಟರ್ ಮಿಶ್ರ ರಿಲೇಯಲ್ಲಿ ಕಂಚಿನ ಪದಕ ಪಡೆದ ತಂಡದ ಸದಸ್ಯೆಯಾಗಿದ್ದರು. ಪ್ರಥಮ ಬಿಎಯ ಜೀವಿತಾ ಲಾಂಗ್ ಜಂಪ್ ಹಾಗೂ 4×400 ಮೀಟರ್ ಮಿಶ್ರ ರಿಲೇಯಲ್ಲಿ ತಲಾ ಕಂಚಿನ ಪದಕ ಗಳಿಸಿದರು.
ಕ್ರೀಡಾಪಟುಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ದೈಹಿಕ ಶಿಕ್ಷಣ ವಿಭಾಗ ಅಭಿನಂದನೆ ಸಲ್ಲಿಸಿದ್ದು, ಪದಕ ವಿಜೇತರು ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಕ್ರೀಡಾಪಟುಗಳು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
ಶಿಕ್ಷಣ
Narendra-ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರವೀಶ ನಾಯಕ್ ಬಿ.ಸಿ., ಸಂಚಾಲಕರಾಗಿ ಚೇತನ್ ನಾಯಕ್ ಜವಾಬ್ದಾರಿ ಸ್ವೀಕಾರ
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮತ್ತು ಜವಾಬ್ದಾರಿ ಸ್ವೀಕಾರ ಸಮಾರಂಭವು ನ.19 ರಂದು ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಜರುಗಿತು.
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮತ್ತು ಜವಾಬ್ದಾರಿ ಸ್ವೀಕಾರ ಸಮಾರಂಭವು ನ.19 ರಂದು ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಜರುಗಿತು.
ಪುತ್ತೂರಿನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಕರ್ತವ್ಯ ನಿರ್ವಹಿಸಿ ಉಪ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತ ರಾದ ರವೀಶ ನಾಯಕ್ ಬಿ.ಸಿ. ಇವರು ಕಾಲೇಜಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ, ವಕೀಲರಾದ ಚೇತನ್ ನಾಯಕ್ ಸಂಚಾಲಕರಾಗಿ, ವಕೀಲರಾದ ಅರುಣ್ ಬಿ.ಕೆ. ಕೋಶಾಧಿಕಾರಿಗಳಾಗಿ, ಹಾಗೂ ಸದಸ್ಯರುಗಳಾಗಿ ಚಾರ್ಟರ್ಡ್ ಅಕೌಂಟೆಂಟ್ ಆದ ಶಿವಕುಮಾರ್
ಹಿಳ್ಳೆಮನೆ, ಅಶ್ವಿನಿ ಕೃಷ್ಣ ಮುಳಿಯ, ಸತ್ಯನಾರಾಯಣ ಬಿ., ಶುಭಾ ಅಡಿಗ, ರಮೇಶ್ ನಾಯಕ್ ಕೆ., ಗೊಲೆಕ್ಸ್ ಕ್ಯಾಟಲ್ ಫೀಡ್ಸ್ ನೈತಾಡಿ ಇದರ ಮಾಲಕರಾದ ಕೃಷ್ಣ ಮೋಹನ್ ಪಿ.ಎಸ್. ಜವಾಬ್ದಾರಿ ಸ್ವೀಕರಿಸಿದರು.
ಇವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ವಿಜಯನಾರಾಯಣ ಕೆ.ಎಮ್. ದೀಪ ಪ್ರದಾನ ಮಾಡುವ ಮೂಲಕ ಜವಾಬ್ದಾರಿ ಪ್ರದಾನ ಮಾಡಿದರು. ಜೊತೆ ಕರ್ಯದರ್ಶಿಗಳಾದ ಭರತ್
ಪೈ, ಕೋಶಾಧಿಕಾರಿಗಳಾದ ಸಂತೋಷ ಬಿ., ನಿರ್ದೇಶಕರಾದ ಮಹಾಕ್ಷ್ಮಿ ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ, ನಿಕಟಪೂರ್ವ ಸಂಚಾಲಕರಾದ ಸಂತೋಷ ಬಿ., ಕೋಶಾಧಿಕಾರಿಗಳಾದ ಸಂಪತ್
ಕುಮಾರ್ , ಸದಸ್ಯರಾದ ಉಮೇಶ್ ನಾಯಕ್, ಮೋಹಿನಿ ದಿವಾಕರ, ಸೂರ್ಯನಾಥ ಆಳ್ವ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶಾನ್ ಭಾಗ್ , ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ನಿರ್ಗಮಿತ ಸಮಿತಿಯ ಪದಾಧಿಕಾರಿಗಳು ದೀಪ ಜ್ಯೋತಿಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ಉಪಸ್ಥಿತರಿದ್ದು ನೂತನ ಸಮಿತಿಗೆ ಶುಭ ಹಾರೈಸಿದರು.
ನಿರ್ಗಮಿತ ಸಮಿತಿಯ ಪದಾಧಿಕಾರಿಗಳು ತಮ್ಮ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.ನೂತನ ಸಮಿತಿಯ ಅಧ್ಯಕ್ಷರು, ಸಂಚಾಲಕರು ಮುಂದಿನ ದಿನಗಳಲ್ಲಿ ಸಂಸ್ಥೆಯ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಶ್ರಮಿಸುವ ಎಂದು ಎಲ್ಲರ ಸಹಕಾರವನ್ನು ಕೋರಿದರು.
-
ಬಿಗ್ ನ್ಯೂಸ್20 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ22 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ5 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ4 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ4 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ3 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized6 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















