Connect with us

ಸ್ಥಳೀಯ

Beltangadi-ಬೆಳ್ತಂಗಡಿ: ಅಸಹಜ ಸಾವಿನ ಪ್ರಕರಣಕ್ಕೆ Twist : ಕಳ್ಳತನಕ್ಕೆ ಹೋದಾಗ ಸಾವು-ಸಹಚರನ ಬಂಧನ ಬೆನ್ನಲ್ಲೇ ಬಯಲಾಯ್ತು ಸ್ಫೋಟಕ ಸತ್ಯ

Published

on

Ad Widget

Ad Widget

Ad Widget

Ad Widget

ಜು.1ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಸಾವು (UDR) ಪ್ರಕರಣವೊಂದು ಈಗ ಕಳ್ಳತನ ಮತ್ತು ಕ್ರಿಮಿನಲ್ ಪ್ರಕರಣವಾಗಿ ಮಾರ್ಪಟ್ಟಿದೆ. ತನಿಖೆಯ ವೇಳೆ ಕಳ್ಳತನದ ರಹಸ್ಯ ಬಯಲಾಗಿದ್ದು, ಈ ಸಂಬಂಧ ಕಾಶಿಪಟ್ನ ನಿವಾಸಿ ಪಿ. ಇಬ್ರಾಹಿಂ ಲತೀಫ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಜು.1ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಸಾವು (UDR) ಪ್ರಕರಣವೊಂದು ಈಗ ಕಳ್ಳತನ ಮತ್ತು ಕ್ರಿಮಿನಲ್ ಪ್ರಕರಣವಾಗಿ ಮಾರ್ಪಟ್ಟಿದೆ. ತನಿಖೆಯ ವೇಳೆ ಕಳ್ಳತನದ ರಹಸ್ಯ ಬಯಲಾಗಿದ್ದು, ಈ ಸಂಬಂಧ ಕಾಶಿಪಟ್ನ ನಿವಾಸಿ ಪಿ. ಇಬ್ರಾಹಿಂ ಲತೀಫ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
ಜೂನ್ 30ರ ರಾತ್ರಿ ಬೆಳ್ತಂಗಡಿಯ ಕುವೆಟ್ಟು ಶಕ್ತಿನಗರದ ಸಂಸ್ಥೆಯೊಂದರ ಆವರಣದಲ್ಲಿ ಅಲ್ಯೂಮಿನಿಯಂ ಮತ್ತು ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಲು ಮೂವರು ಸಂಚು ರೂಪಿಸಿದ್ದರು. ಮೃತ ಮುಶ್ತಾಕ್, ಬಂಧಿತ ಇಬ್ರಾಹಿಂ ಲತೀಫ್ ಮತ್ತು ಇನ್ನೊಬ್ಬ ಆರೋಪಿ ಸೇರಿ ಕಳ್ಳತನ ಮಾಡುತ್ತಿದ್ದಾಗ, ಆಕಸ್ಮಿಕವಾಗಿ ಮುಶ್ತಾಕ್‌ನ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿತ್ತು. ಇದರಿಂದ ಉಸಿರುಗಟ್ಟಿ ಮುಶ್ತಾಕ್ ಸ್ಥಳದಲ್ಲೇ ಮೃತಪಟ್ಟಿದ್ದನು. ಆರಂಭದಲ್ಲಿ ಇದನ್ನು ಕೇವಲ ಸಾವು ಎಂದು ಭಾವಿಸಲಾಗಿತ್ತು, ಆದರೆ ಪೊಲೀಸರ ಚುರುಕಿನ ತನಿಖೆಯಿಂದ ಇದು ಕಳ್ಳತನದ ವೇಳೆ ನಡೆದ ಘಟನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

550 ಕೆಜಿ ವೈರ್ ವಶ:
ಬಂಧಿತ ಆರೋಪಿ ಇಬ್ರಾಹಿಂ ಲತೀಫ್‌ನಿಂದ ಕಳ್ಳತನ ಮಾಡಲಾಗಿದ್ದ ಸುಮಾರು 550 ಕೆಜಿ ತೂಕದ ಅಲ್ಯೂಮಿನಿಯಂ ವೈರ್ ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಹೊಸದಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

16 ಪ್ರಕರಣಗಳ ಕುಖ್ಯಾತ ಕಳ್ಳ:
ವಿಚಾರಣೆಯ ವೇಳೆ ಆರೋಪಿ ಇಬ್ರಾಹಿಂ ಲತೀಫ್ ಹಳೇ ಚಾಳಿವುಳ್ಳ ಕಳ್ಳ ಎಂಬುದು ಬೆಳಕಿಗೆ ಬಂದಿದೆ. ಈತ ವೇಣೂರು, ಉಪ್ಪಿನಂಗಡಿ, ಅರೆಹಳ್ಳಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 16 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ. ಸದ್ಯ ಪೊಲೀಸರು ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!