ಸ್ಥಳೀಯ
Vishal Mega Mart-ಪೊಲಿಯೋ ಪೀಡಿತ ಬಾಲಕ ಇಂದು ₹6,500 ಕೋಟಿ ಒಡೆಯ: ‘ವಿಶಾಲ್ ಮೆಗಾ ಮಾರ್ಟ್’ ಜನಕನ ಸ್ಫೂರ್ತಿದಾಯಕ ಪಯಣ..!
ವಿದ್ಯಾಭ್ಯಾಸ ಮುಗಿದ ಮೇಲೆ ಕೆಲಸವಿಲ್ಲ ಎಂದು ಹತಾಶರಾಗುವ ಯುವಕರಿಗೆ ರಾಮ್ ಚಂದ್ರ ಅಗರ್ವಾಲ್ ಅವರ ಜೀವನ ಒಂದು ದೊಡ್ಡ ಪಾಠ. ದೈಹಿಕ ಅಂಗವೈಕಲ್ಯವನ್ನು ಮೀರಿ, ಕೇವಲ ಇಚ್ಛಾಶಕ್ತಿಯಿಂದ ದೇಶದ ಪ್ರಮುಖ ರಿಟೇಲ್ ಉದ್ಯಮವನ್ನು ಕಟ್ಟಿ ಬೆಳೆಸಿದ ಅವರ ಸಾಧನೆ ಅಪ್ರತಿಮವಾದುದು.
ವಿದ್ಯಾಭ್ಯಾಸ ಮುಗಿದ ಮೇಲೆ ಕೆಲಸವಿಲ್ಲ ಎಂದು ಹತಾಶರಾಗುವ ಯುವಕರಿಗೆ ರಾಮ್ ಚಂದ್ರ ಅಗರ್ವಾಲ್ ಅವರ ಜೀವನ ಒಂದು ದೊಡ್ಡ ಪಾಠ. ದೈಹಿಕ ಅಂಗವೈಕಲ್ಯವನ್ನು ಮೀರಿ, ಕೇವಲ ಇಚ್ಛಾಶಕ್ತಿಯಿಂದ ದೇಶದ ಪ್ರಮುಖ ರಿಟೇಲ್ ಉದ್ಯಮವನ್ನು ಕಟ್ಟಿ ಬೆಳೆಸಿದ ಅವರ ಸಾಧನೆ ಅಪ್ರತಿಮವಾದುದು.
ಪೊಲಿಯೋ ಸವಾಲು ಮತ್ತು ಮೊದಲ ಹೆಜ್ಜೆ:
1965ರಲ್ಲಿ ಕೋಲ್ಕತ್ತದ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ರಾಮ್ ಚಂದ್ರ ಅಗರ್ವಾಲ್ ಅವರು ನಾಲ್ಕನೇ ವಯಸ್ಸಿನಲ್ಲೇ ಪೊಲಿಯೋಗೆ ತುತ್ತಾದರು. ಸೊಂಟದ ಕೆಳಭಾಗದ ಶಕ್ತಿ ಕಳೆದುಕೊಂಡರೂ ಅವರು ಕುಗ್ಗಲಿಲ್ಲ. ಯಾರ ಮೇಲೂ ಅವಲಂಬಿತರಾಗಬಾರದು ಎಂಬ ಛಲದಿಂದ, ಉನ್ನತ ಶಿಕ್ಷಣದ ಬಳಿಕ ಸಣ್ಣದೊಂದು ಜೆರಾಕ್ಸ್ ಅಂಗಡಿ ಆರಂಭಿಸಿ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟರು.
‘ವಿಶಾಲ್ ಮೆಗಾ ಮಾರ್ಟ್’ ಎಂಬ ಕ್ರಾಂತಿ:
ಜೆರಾಕ್ಸ್ ಅಂಗಡಿಯಿಂದ ಸಿಗುತ್ತಿದ್ದ ಪುಡಿಗಾಸು ಅವರಿಗೆ ತೃಪ್ತಿ ನೀಡಲಿಲ್ಲ. ಬಟ್ಟೆ ಉದ್ಯಮದತ್ತ ಆಕರ್ಷಿತರಾದ ರಾಮ್, ಕೋಲ್ಕತ್ತದಲ್ಲಿ ಸಣ್ಣ ಉಡುಪಿನ ಅಂಗಡಿ ತೆರೆದರು. ಭಾರತೀಯರ ಫ್ಯಾಷನ್ ಅಭಿರುಚಿ ಮತ್ತು ಮಧ್ಯಮ ವರ್ಗದ ಜನರ ಬಜೆಟ್ ಅನ್ನು ಸೂಕ್ಷ್ಮವಾಗಿ ಗಮನಿಸಿದ ಅವರು, 2000ನೇ ಇಸವಿಯಲ್ಲಿ ದೆಹಲಿಗೆ ಸ್ಥಳಾಂತರಗೊಂಡು ‘ವಿಶಾಲ್ ಮೆಗಾ ಮಾರ್ಟ್’ ಎಂಬ ಬೃಹತ್ ಮಳಿಗೆಯನ್ನು ಪ್ರಾರಂಭಿಸಿದರು. ಗುಣಮಟ್ಟದ ವಸ್ತುಗಳನ್ನು ಕಡಿಮೆ ದರದಲ್ಲಿ ನೀಡುವ ಅವರ ಐಡಿಯಾ ಕ್ಲಿಕ್ ಆಯಿತು. ನೋಡನೋಡುತ್ತಿದ್ದಂತೆ ದೇಶದಾದ್ಯಂತ ಈ ಸಂಸ್ಥೆ ವಿಸ್ತರಿಸಿತು.
ಬಿಕ್ಕಟ್ಟು ಮತ್ತು ಮರುಹುಟ್ಟು:
2008-09ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ವಿಶಾಲ್ ಮೆಗಾ ಮಾರ್ಟ್ ತೀವ್ರ ನಷ್ಟ ಅನುಭವಿಸಿತು. ಅನಿವಾರ್ಯವಾಗಿ 2011ರಲ್ಲಿ ಸುಮಾರು ₹2,000 ಕೋಟಿ ಮೌಲ್ಯದ ತಮ್ಮ ಉದ್ಯಮವನ್ನು ಶ್ರೀರಾಮ್ ಗ್ರೂಪ್ಗೆ ₹70 ಕೋಟಿಗೆ ಮಾರಾಟ ಮಾಡಬೇಕಾಯಿತು. ಆದರೆ, ಇಲ್ಲಿಗೆ ಅವರ ಪಯಣ ಮುಗಿಯಲಿಲ್ಲ.
ವಿ2 ರಿಟೇಲ್ ಮೂಲಕ ಭರ್ಜರಿ ಕಮ್ಬ್ಯಾಕ್:
ಸೋಲನ್ನೇ ಮೆಟ್ಟಿಲನ್ನಾಗಿಸಿಕೊಂಡ ಅಗರ್ವಾಲ್, ಶೀಘ್ರದಲ್ಲೇ ‘ವಿ2 ರಿಟೇಲ್ ಲಿಮಿಟೆಡ್’ (V2 Retail Limited) ಎಂಬ ಹೊಸ ಸಂಸ್ಥೆಯನ್ನು ಪ್ರಾರಂಭಿಸಿದರು. ಹಳೆಯ ಅನುಭವದ ಬಲದಿಂದ ಈ ಉದ್ಯಮ ಕೂಡ ಅತ್ಯಂತ ವೇಗವಾಗಿ ಬೆಳೆಯಿತು. ಇಂದು ಭಾರತದಾದ್ಯಂತ 150ಕ್ಕೂ ಹೆಚ್ಚು ಮಳಿಗೆಗಳನ್ನು ಹೊಂದಿರುವ ಈ ಸಂಸ್ಥೆಯ ವಾರ್ಷಿಕ ವಹಿವಾಟು ₹6,500 ಕೋಟಿ ದಾಟಿದೆ.
ಸ್ಫೂರ್ತಿಯ ಚಿಲುಮೆ:
ವೈಯಕ್ತಿಕ ಜೀವನದಲ್ಲೂ ಯಶಸ್ವಿಯಾಗಿರುವ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಊರುಗೋಲಿನ ಸಹಾಯದಿಂದ ನಡೆಯುವ ಒಬ್ಬ ವ್ಯಕ್ತಿ, ಸಾವಿರಾರು ಜನರಿಗೆ ಉದ್ಯೋಗ ನೀಡಿ, ಸಾವಿರಾರು ಕೋಟಿ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮ ಕಟ್ಟಿದ್ದು ಭಾರತೀಯ ಉದ್ಯಮ ರಂಗದ ಅದ್ಭುತಗಳಲ್ಲಿ ಒಂದಾಗಿದೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್9 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized9 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್10 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು10 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ7 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ8 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಸುಳ್ಯ7 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ















