ಶಿಕ್ಷಣ
Philomena College-ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪ ಪೂ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಜು 17 ರಂದು ದ್ವಿತೀಯ ಪ ಪೂ ವಿದ್ಯಾರ್ಥಿಗಳಿಗೆ ‘ವೃತ್ತಿ ಮಾರ್ಗದರ್ಶನ ತರಬೇತಿ’ ಕಾರ್ಯಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಜು 17 ರಂದು ದ್ವಿತೀಯ ಪ ಪೂ ವಿದ್ಯಾರ್ಥಿಗಳಿಗೆ ‘ವೃತ್ತಿ ಮಾರ್ಗದರ್ಶನ ತರಬೇತಿ’ ಕಾರ್ಯಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಮೇಜರ್ ಜನರಲ್ ಎಂ. ವಿ. ಭಟ್ ಮಾತನಾಡಿ
ನಮ್ಮ ಜೀವನದಲ್ಲಿ ದೇಶವೇ ಮೊದಲು ಎಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ದೇಶದ ಬಗೆಗೆ ಚಿಂತನೆಯನ್ನು ಮಾಡಬೇಕು. ಸಮಯವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡು, ಶಿಸ್ತಿನ ಜೀವನವನ್ನು ನಡೆಸಬೇಕು. ಯಶಸ್ಸಿನ ಮೂಲವು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಅವಲಂಬಿತವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಸಮತೋಲಿತ ಜೀವನವನ್ನು ನಡೆಸಬೇಕು ಎಂದು ತಿಳಿಸಿದರು. ದೇಶ ಸೇವೆಗೆ ಮುಡಿಪಾಗಿರುವ ಭಾರತೀಯ ಸೇನೆ, ವಾಯು ದಳ ಹಾಗು ನೌಕಾದಳದಲ್ಲಿ ಸಿಗುವ ವಿವಿಧ ಅವಕಾಶಗಳ ಬಗ್ಗೆ ತಿಳಿಸಿದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಮುದಾಯ ಸೇವೆಗಳ ಸಹಾಯಕ ನಿರ್ದೇಶಕರಾದ ವಿವೇಕ್ ರಂಜನ್ ಭಂಡಾರಿ ಮಾತನಾಡಿ, ವಿಶ್ವವಿದ್ಯಾಲಯದಿಂದ ನಡೆಸಲ್ಪಡುವ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಕುರಿತು, ಮುಖ್ಯವಾಗಿ ಬಯೋ ಮೆಡಿಕಲ್ ಸೈನ್ಸ್, ಫಾರ್ಮಸಿ, ಹೆಲ್ತ್ ಸೈನ್ಸ್, ನರ್ಸಿಂಗ್, ಫಾರೆನ್ಸಿಕ್ ಸೈನ್ಸ್ ಮತ್ತು ಅಗ್ರಿಕಲ್ಚರಲ್ ಪದವಿಗಳ ಬಗ್ಗೆ, ಹಾಗೆಯೇ ಇಂಜಿನಿಯರಿಂಗ್, ಹೋಟೆಲ್ ಮ್ಯಾನೇಜ್ಮೆಂಟ್, ಆರ್ಕಿಟೆಕ್ಚರ್ ಪದವಿಗಳ ಹಾಗೂ ಈ ಎಲ್ಲಾ ಪದವಿಗಳು ವಿದ್ಯಾರ್ಥಿಗಳಿಗೆ ನೀಡುವ ಅವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಮಾರ್ಕೆಟಿಂಗ್ ಸಹಾಯಕ, ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಪವನ್ ವರ್ಗೀಸ್ ಮಾತನಾಡಿ, ವಾಣಿಜ್ಯ ವಿಭಾಗವು ವಿಪುಲ ಅವಕಾಶಗಳ ಆಗರವಾಗಿದೆ. ಮತ್ತು ಶಿಸ್ತುಬದ್ಧವಾದ ಕಲಿಕೆ ಈ ವಿಭಾಗದಲ್ಲಿ ತಮ್ಮನ್ನು ಉನ್ನತ ಸ್ಥಾನಕ್ಕೆ ತಲುಪಿಸಬಹುದು. ವಾಣಿಜ್ಯ ಕ್ಷೇತ್ರದಲ್ಲಿ, ಚಾರ್ಟೆಡ್ ಅಕೌಂಟೆಂಟ್ ಅಷ್ಟೇ ಅಲ್ಲದೆ, ಬ್ಯಾಂಕುಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಮೀಡಿಯಾ ಮತ್ತು ಕಮ್ಯುನಿಕೇಶನ್, ಫ್ಯಾಷನ್ ಡಿಸೈನ್, ಇಂಟೀರಿಯರ್ ಡಿಸೈನ್ ಮುಂತಾದ ಕ್ಷೇತ್ರಗಳು ಸಾಕಷ್ಟು ಅವಕಾಶಗಳನ್ನು ಕಲ್ಪಿಸುತ್ತವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ಥಾ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಶೈಕ್ಷಣಿಕ ಹಾಗು ವೃತ್ತಿ ಅವಕಾಶಗಳ ಬಗ್ಗೆ ತಿಳಿದುಕೊಂಡು ಸೂಕ್ತ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ನಮ್ಮ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂತಹ ಹಲವಾರು ಕಾರ್ಯಗಾರವನ್ನು ಆಯೋಜಿಸುತ್ತಿದೆ.
ವಿದ್ಯಾರ್ಥಿಗಳು ಈ ಕಾರ್ಯಾಗಾರದ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ತಿಳಿಸಿದರು.
ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಬೋಧಕ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ
ಭರತ್ ಕುಮಾರ್ ಎ ಅತಿಥಿಗಳನ್ನು ಪರಿಚಯಿಸಿದರು. ಅಧ್ಯಕ್ಷರಾದ ಡಾ. ಪ್ರಕಾಶ್ ಬಿ
ಸ್ವಾಗತಿಸಿ, ಉಪನ್ಯಾಸಕರಾದ ಫಿಲೋಮಿನಾ ಮೊಂತೇರೋ ವಂದಿಸಿ, ಸತ್ಯಲತಾ ರೈ ನಿರೂಪಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಬಿಗ್ ನ್ಯೂಸ್20 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು22 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ20 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು21 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ22 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ22 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ21 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ3 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















