ಅಪಘಾತದಲ್ಲಿ ಬೈಕ್‌ನ ಹಿಂಬದಿ […]" /> ಅಪಘಾತದಲ್ಲಿ ಬೈಕ್‌ನ ಹಿಂಬದಿ […]"> ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಡಿಪ್ಲೊಮಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ - Nikhara News | Kannada News Website
Connect with us

ಅಪರಾಧ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಡಿಪ್ಲೊಮಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ, ಜು. 19: ತಾಲೂಕಿನ ಮದ್ದಡ್ಕ ಗ್ರಾಮದ ಮಸೀದಿ ಸಮೀಪ ಮಂಗಳೂರು–ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮೃತರನ್ನು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬಳ್ಳಮಂಜ ದರ್ಜೆದಕೊಡಿ ನಿವಾಸಿ ರಾಮಣ್ಣ ಗೌಡ ಅವರ ಪುತ್ರ ಕೌಶಿಕ್ ಗೌಡ (19) ಎಂದು ಗುರುತಿಸಲಾಗಿದೆ. ಅವರು ಬಂಟ್ವಾಳದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು.

Ad Widget

Ad Widget alt="Ad Widget"/>

Ad Widget

ಅಪಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮಡಂತ್ಯಾರು ಸಮೀಪದ ಪಾರೆಂಕಿ ಗ್ರಾಮದ ಅಚ್ಚಬೆ ನಿವಾಸಿ ಭರತ್ (20) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget <> Ad Widget

ಲಭ್ಯ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸಂಚರಿಸುತ್ತಿದ್ದ ವೇಳೆ ಸಂಪರ್ಕ ರಸ್ತೆಯಿಂದ ಸ್ಕೂಟಿಯೊಂದು ಏಕಾಏಕಿ ಹೆದ್ದಾರಿಗೆ ಪ್ರವೇಶಿಸಿದ ಪರಿಣಾಮ ಬೈಕ್ ಮತ್ತು ಸ್ಕೂಟಿ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೌಶಿಕ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರ ಪ್ರಕಾರ, ಅಪಘಾತ ಸಂಭವಿಸಿದ ಈ ಜಾಗವು ಅಪಘಾತ ವಲಯವಾಗಿ ಗುರುತಿಸಿಕೊಂಡಿದ್ದು, ಇಲ್ಲಿ ಈ ಹಿಂದೆ ಸಹ ಹಲವು ರಸ್ತೆ ಅಪಘಾತಗಳು ನಡೆದಿವೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Ad Widget

Ad Widget

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!