ಶಿಕ್ಷಣ
Philomena-ಫಿಲೋಮಿನಾ ಕಾಲೇಜಿನಲ್ಲಿ ಸ್ಟೂಡೆಂಟ್ ಸಾಫ್ಟ್ವೇರ್ ಪ್ರಾಜೆಕ್ಟ್ ಇನ್ನೋವೇಶನ್ ಶೋಕೇಸ್ ʼಪ್ರಾಜೆಟ್ಟ್ವರ್ಸ್ಗೆ ಚಾಲನೆ; ತಂತ್ರಜ್ಞಾನದೊಂದಿಗೆ ಮಾನವೀಯ ಮೌಲ್ಯಗಳನ್ನೂ ಬೆಳೆಸಿಕೊಳ್ಳಿ ಪ್ರಾಂಶುಪಾಲರ ಕರೆ
ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗ ಹಾಗೂ ಟೆಕ್ಫಿನಿಟಿ ಟೆಕ್ ಕ್ಲಬ್ ವತಿಯಿಂದ ಆಯೋಜಿಸಲಾದ “ಪ್ರಾಜೆಕ್ಟ್ವರ್ಸ್ 2026” ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರಿಂದ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು.
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗ ಹಾಗೂ ಟೆಕ್ಫಿನಿಟಿ ಟೆಕ್ ಕ್ಲಬ್ ವತಿಯಿಂದ ಆಯೋಜಿಸಲಾದ “ಪ್ರಾಜೆಕ್ಟ್ವರ್ಸ್2026” ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರಿಂದ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು.

ನಂತರ ಮಾತನಾಡಿದ ಅವರು, ಆವಿಷ್ಕಾರಮತ್ತು ನವೋದ್ಯಮಇಂದಿನ ಯುಗದ ಯಶಸ್ಸಿನ ಪ್ರಮುಖ ಅಡಿಗಲ್ಲುಗಳು ಎಂದು ಅಭಿಪ್ರಾಯಪಟ್ಟರು. ತಂತ್ರಜ್ಞಾನ ಪ್ರತಿದಿನ ಹೊಸ ಆಯಾಮಗಳನ್ನು ತೆರೆದಿಡುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳನ್ನು ಕಲಿಯುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
“ಕೃತಕ ಬುದ್ಧಿಮತ್ತೆ, ಡಿಜಿಟಲ್ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿವೃದ್ಧಿಯಲ್ಲಿ ಜಗತ್ತು ವೇಗವಾಗಿ ಮುನ್ನಡೆಯುತ್ತಿದೆ. ಈ ಬದಲಾವಣೆಗಳಿಗೆ ಹೊಂದಿಕೊಳ್ಳುವುದು ಮಾತ್ರವಲ್ಲ, ಹೊಸತನವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ನಮ್ಮ ಬೇರುಗಳನ್ನು, ಸಂಸ್ಕೃತಿಯನ್ನು, ಮತ್ತು ಮಾನವೀಯ ಮೌಲ್ಯಗಳನ್ನು ಎಂದಿಗೂ ಮರೆಯಬಾರದು. ಜ್ಞಾನವು ಕೌಶಲ್ಯವನ್ನು ನೀಡುತ್ತದೆ; ಆದರೆ ಮೌಲ್ಯಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ. ಉತ್ತಮ ತಂತ್ರಜ್ಞಾನ ತಜ್ಞರಾಗುವುದರ ಜೊತೆಗೆ ಉತ್ತಮ ಮನುಷ್ಯರಾಗುವುದೂ ಅಷ್ಟೇ ಮುಖ್ಯ” ಎಂದು ಹೇಳಿದರು.

ಪ್ರಥಮ ಎಂಸಿಎ ವಿದ್ಯಾರ್ಥಿನಿ ರಕ್ಷಿತಾ ಕೆ ಆರ್ ಮತ್ತು ಬಳಗ ಪ್ರಾರತಿಸಿದರು. ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಡೀನ್ ಡಾ| ವಿನಯಚಂದ್ರ ಸ್ವಾಗತಿಸಿ ಪ್ರಾಸ್ತಾವಿಕಮಾತುಗಳನ್ನಾಡಿದರು. ಟೆಕ್ಫಿನಿಟಿ ಟೆಕ್ ಕ್ಲಬ್ನ ನಿರ್ದೇಶಕಿ ಶ್ರೀಮತಿ ಅಕ್ಷತಾ ಬಿ. ವಂದನಾರ್ಪಣೆ ಮಾಡಿದರು. ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನೀಲಂ ಕುಟ್ಟಪ್ಪ ಕಾರ್ಯಕ್ರಮ ನಿರ್ವಹಿಸಿದರು.
ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶೋಧನ್ ಪಿ ಜಿ ಹಾಗೂ ಪ್ರಥಮ ಎಂಸಿಎ ವಿದ್ಯಾರ್ಥಿ ವೇಣುಗೋಪಾಲ್ ಸಹಕಾರ ನೀಡಿದರು. ಬಳಿಕ ದ್ವಿತೀಯ ಎಂಸಿಎ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ವಿವಿಧ ಸಾಫ್ಟ್ವೇರ್ ಯೋಜನೆಗಳು, ವೆಬ್ ಹಾಗೂ ಮೊಬೈಲ್ ಅಪ್ಲಿಕೇಶನ್ಗಳು ಮತ್ತು ನವೀನ ತಾಂತ್ರಿಕ ಪರಿಹಾರಗಳನ್ನು ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರದರ್ಶಿಸಲಾಯಿತು. ಪ್ರಥಮ ಎಂಸಿಎ ಹಾಗೂ ಅಂತಿಮ ವರ್ಷದ ಬಿಸಿಎ ಮತ್ತು ಬಿಸಿಎ(ಎಐ & ಎಂಎಲ್), ಪ್ರಥಮ ಹಾಗೂ ದ್ವಿತೀಯ ವರ್ಷದ ಬಿಎಸ್ಸಿ ಡೇಟಾ ಸಯನ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ಮಂಗಳೂರು16 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್23 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ16 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ22 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ21 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ22 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ22 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















