Connect with us

ಅಪರಾಧ

SIT-ಆರ್ಟ್ ಆಫ್ ಲಿವಿಂಗ್‌ಗೆ ಭೂ ಕಬಳಿಕೆ ಸಂಕಷ್ಟ: 150 ಎಕರೆ ದಲಿತರ ಜಮೀನು ಒತ್ತುವರಿ ಆರೋಪದ ತನಿಖೆಗೆ ಎಸ್‌ಐಟಿ ರಚನೆ..!

Published

on

Ad Widget

Ad Widget

Ad Widget

Ad Widget

ರವಿಶಂಕರ್ ಗುರೂಜಿ ಅವರ ‘ಆರ್ಟ್ ಆಫ್ ಲಿವಿಂಗ್’ (AOL) ಫೌಂಡೇಶನ್ ಹಾಗೂ ಅದರ ಅಂಗ ಸಂಸ್ಥೆಗಳು ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಸುತ್ತಮುತ್ತ ದಲಿತ ಸಮುದಾಯಕ್ಕೆ ಸೇರಿದ 150 ಎಕರೆ ಸೇರಿದಂತೆ ಒಟ್ಟು 290 ಎಕರೆ ಭೂಮಿಯನ್ನು ಅಕ್ರಮವಾಗಿ ಕಬಳಿಸಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರವು ಈಗ ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರವಿಶಂಕರ್ ಗುರೂಜಿ ಅವರ ‘ಆರ್ಟ್ ಆಫ್ ಲಿವಿಂಗ್’ (AOL) ಫೌಂಡೇಶನ್ ಹಾಗೂ ಅದರ ಅಂಗ ಸಂಸ್ಥೆಗಳು ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಸುತ್ತಮುತ್ತ ದಲಿತ ಸಮುದಾಯಕ್ಕೆ ಸೇರಿದ 150 ಎಕರೆ ಸೇರಿದಂತೆ ಒಟ್ಟು 290 ಎಕರೆ ಭೂಮಿಯನ್ನು ಅಕ್ರಮವಾಗಿ ಕಬಳಿಸಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರವು ಈಗ ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಅವರ ಅಧೀನದಲ್ಲಿ 270 ಎಕರೆ ಭೂಮಿ ಇದೆ. ಅದರಲ್ಲಿ 150 ಎಕರೆ ಭೂಮಿ ಎಸ್‌ಸಿ-ಎಸ್‌ಟಿ ಸಮುದಾಯದ ಜನರಿಗೆ ಸೇರಿದ ಭೂಮಿ ಆಗಿದೆ ಎಂದು ಪ್ರಸ್ತಾಪಿಸಲಾಯಿತು.

Ad Widget

Ad Widget <> Ad Widget

ಇದಕ್ಕೆ ಉತ್ತರಿಸಿದ ಡಾ.ಜಿ.ಪರಮೇಶ್ವರ್, ‘ಈ ಬಗ್ಗೆ ಹಿಂದೆಯೂ ಅನೇಕ ದೂರುಗಳು ಬಂದಿದ್ದವು. ಆ ದೂರುಗಳನ್ನು ಆಧರಿಸಿ ಪರಿಶೀಲಿಸಲು, ಕಂದಾಯ ಇಲಾಖೆಯಲ್ಲಿ ಎಸ್‌ಐಟಿ ರಚಿಸಲಾಗಿದೆ. ದಲಿತರಿಗೆ ಸೇರಿದ 150 ಎಕರೆ ಜಮೀನು ತೆಗೆದುಕೊಂಡಿದ್ದಾರೆ ಎಂಬುದನ್ನು ಎಸ್‌ಐಟಿ ಪರಿಶೀಲನೆ ಮಾಡಲಿದೆ. ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್‌ ಅಧ್ಯಕ್ಷತೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಹೇಳಿದರು.

ಆದೇಶದಲ್ಲಿ ಏನಿದೆ?: 1981ರಲ್ಲಿ ಸ್ಥಾಪಿತವಾದ ‘ದಿ ಆರ್ಟ್ ಆಫ್ ಲಿವಿಂಗ್’ ಟ್ರಸ್ಟಿಗಳು ಮತ್ತು ಇತರ ವ್ಯಕ್ತಿಗಳು, ಸರಕಾರಿ ಗುತ್ತಿಗೆ ಹಾಗೂ ಮಂಜೂರಾತಿ ಪಡೆದವರೊಂದಿಗೆ ಒಪ್ಪಂದಗಳ ಮೂಲಕ ಸುಮಾರು 290 ಎಕರೆಗೂ ಹೆಚ್ಚು ಸರಕಾರಿ ಗೋಮಾಳ ಜಮೀನನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಒತ್ತುವರಿ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

Ad Widget

Ad Widget

ಮಾತ್ರವಲ್ಲದೆ, ಕಗ್ಗಲಿಪುರದ ಸರ್ವೇ ಸಂಖ್ಯೆ 46 ರಲ್ಲಿನ 41 ಎಕರೆ ಸರಕಾರಿ ಗೋಮಾಳ ಜಮೀನನ್ನು 1985ರಲ್ಲಿ ವಾರ್ಷಿಕ ಎಕರೆಗೆ ಕೇವಲ 500 ರೂ.ಗಳ ಅತ್ಯಂತ ಕಡಿಮೆ ದರದಲ್ಲಿ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿತ್ತು. ಈ ಗುತ್ತಿಗೆ ಅವಧಿಯು 2015ರಲ್ಲೇ ಮುಕ್ತಾಯಗೊಂಡಿದ್ದರೂ, ಸಂಸ್ಥೆಯು ಅಕ್ರಮವಾಗಿ ಜಮೀನನ್ನು ತನ್ನ ವಶದಲ್ಲೇ ಇಟ್ಟುಕೊಂಡು ಬೃಹತ್ ಕಟ್ಟಡಗಳನ್ನು ನಿರ್ಮಿಸಿದೆ.

ಹಾಗೆಯೇ ಬಿ.ಎಂ.ಕಾವಲ್‌ನ ಸರ್ವೇ ಸಂಖ್ಯೆ 135 ರಲ್ಲಿದ್ದ 19 ಎಕರೆ ಜಮೀನಿನನ್ನು ಗೋಮಾಳದಿಂದ ಕಡಿತಗೊಳಿಸಿ 30 ವರ್ಷಗಳ ಅವಧಿಗೆ ಮತ್ತೊಂದು ಗುತ್ತಿಗೆಯನ್ನು ನೀಡಲಾಗಿದೆ. ಅದೇ ರೀತಿ, ಸರ್ವೆ ಸಂಖ್ಯೆ 46ರಲ್ಲಿನ ಕೆರೆಯನ್ನು ಒಳಗೊಂಡಂತೆ ಬಹಳ ವಿಶಾಲವಾದ ಪ್ರದೇಶಕ್ಕೆ ತಡೆಗೋಡೆ ನಿರ್ಮಿಸಿಕೊಂಡಿದ್ದಾರೆ. ಜತೆಗೆ, ಬಂಡೆ ಖರಾಬು, ಕಾಲುದಾರಿ ಜಮೀನು ಒತ್ತುವರಿ ಮಾಡಿಕೊಂಡು ನೈಸರ್ಗಿಕ ಸ್ವರೂಪವನ್ನೆ ಬದಲಾವಣೆ ಮಾಡಿಕೊಂಡಿರುವುದು ಕಂಡುಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

11 ಅಧಿಕಾರಗಳ ತಂಡ:
ವಿಶೇಷ ತನಿಖಾ ತಂಡದ ಅಧ್ಯಕ್ಷರಾಗಿ ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತ ಅಮ್ಹಾನ್ ಆದಿತ್ಯ ಬಿಸ್ವಾಸ್‌ ಅವರನ್ನು ನೇಮಿಸಲಾಗಿದೆ. ಸದಸ್ಯರಾಗಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಜೆ.ಗದ್ಯಾಲ್, ಜಯಮಾಧವ್, ನಿಸಾ‌ರ್ ಅಹ್ಮದ್, ನೇಗಿನಹಾಳ್, ಗಿರೀಶ್ ನಂದನ್, ವಿಶ್ವನಾಥ್, ಕಲಿಮುಲ್ಲಾ, ಸುಮಂತ್, ಶಶಾಂಕ್, ಚರಣ್ ರಾಜ್ ಅವರನ್ನ ನೇಮಿಸಲಾಗಿದೆ.

ಎಸ್‌ಐಟಿ ಕರ್ತವ್ಯ:
ಜಮೀನು ಮಂಜೂರಾತಿ ದಾಖಲೆಗಳು, ಮೂಲ ವಾರಸುದಾರರ ವಿವರಗಳು ಮತ್ತು ನಕಲಿ ದಾಖಲೆಗಳ ಸೃಷ್ಟಿ ಅಥವಾ ವಂಚನೆ ನಡೆದಿದೆಯೇ ಎಂಬುದನ್ನು ಪರಿಶೀಲಿಸುವುದು.
ಸಾರ್ವಜನಿಕ ರಸ್ತೆಗಳು, ಜಲಮೂಲಗಳು, ಗುಡ್ಡಗಳು, ‘ಬಂಡೆ ಖರಾಬು’ ಜಮೀನುಗಳ ಗಡಿಗಳನ್ನು ನಿಖರವಾಗಿ ಗುರುತಿಸುವುದು.
ಆರೋಪಿತ ಸಂಸ್ಥೆಯಾದ ಆರ್ಟ್ ಆಫ್ ಲಿವಿಂಗ್ ಮತ್ತು ಇತರ ಪ್ರತಿವಾದಿಗಳಿಗೆ ತಮ್ಮ ವಿವರಣೆ ನೀಡಲು ಸೂಕ್ತ ಅವಕಾಶ ಒದಗಿಸುವುದು.
ವಿವಿಧ ಗುತ್ತಿಗೆ ಒಪ್ಪಂದಗಳ ಉಲ್ಲಂಘನೆಗಳನ್ನು ಗುರುತಿಸುವುದು ಮತ್ತು ಉಪಗ್ರಹ ದತ್ತಾಂಶಗಳನ್ನು ಬಳಸಿಕೊಂಡು ಪರಿಸರಕ್ಕೆ ಆಗಿರುವ ಹಾನಿಯನ್ನು ಅಂದಾಜಿಸುವುದು.

Ad Widget
Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಪರಾಧ

Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ

Published

on

Ad Widget

Ad Widget

Ad Widget

Ad Widget

ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.

Ad Widget

Ad Widget <> Ad Widget

ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.

ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.

Ad Widget

Ad Widget

ಇದೇ ವರ್ಷದ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.

ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.

Ad Widget
Continue Reading

ಅಪರಾಧ

Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!

Published

on

Ad Widget

Ad Widget

Ad Widget

Ad Widget

ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.

Ad Widget

Ad Widget <> Ad Widget

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.

ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:

Ad Widget

Ad Widget
  • ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್‌ಗಳು.
  • ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್‌ನ 30 ಕ್ಯಾನ್‌ಗಳು.
  • ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್‌ಗಳು.
  • ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!