ಬಿಗ್ ನ್ಯೂಸ್
Mr Beast-ವಿಶ್ವದ ನಂ.1 ಯೂಟ್ಯೂಬರ್ ‘ಮಿಸ್ಟರ್ ಬೀಸ್ಟ್’ ದಾಂಪತ್ಯ ಜೀವನಕ್ಕೆ: ಮಿಸ್ಟರ್ ಬೀಸ್ಟ್ ಕೈಹಿಡಿದ ಸುಂದರಿ ತಿಯಾ ಬೊಯ್ಸನ್ ಯಾರು ಗೊತ್ತೇ?
ಜಗತ್ತಿನ ಅತ್ಯಂತ ಶ್ರೀಮಂತ ಮತ್ತು ಜನಪ್ರಿಯ ಯೂಟ್ಯೂಬರ್ ಜಿಮ್ಮಿ ಡೊನಾಲ್ಡ್ಸನ್, ಅಲಿಯಾಸ್ ‘ಮಿಸ್ಟರ್ ಬೀಸ್ಟ್’ (MrBeast), ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಪ್ರೇಯಸಿ, ದಕ್ಷಿಣ ಆಫ್ರಿಕಾ ಮೂಲದ ತಿಯಾ ಬೊಯ್ಸನ್ (Thea Booysen) ಅವರೊಂದಿಗೆ ಅವರು ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ನವದೆಹಲಿ: ಜಗತ್ತಿನ ಅತ್ಯಂತ ಶ್ರೀಮಂತ ಮತ್ತು ಜನಪ್ರಿಯ ಯೂಟ್ಯೂಬರ್ ಜಿಮ್ಮಿ ಡೊನಾಲ್ಡ್ಸನ್, ಅಲಿಯಾಸ್ ‘ಮಿಸ್ಟರ್ ಬೀಸ್ಟ್’ (Mr Beast), ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಪ್ರೇಯಸಿ, ದಕ್ಷಿಣ ಆಫ್ರಿಕಾ ಮೂಲದ ತಿಯಾ ಬೊಯ್ಸನ್ (Thea Booysen) ಅವರೊಂದಿಗೆ ಅವರು ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಖಾಸಗಿ ದ್ವೀಪದಲ್ಲಿ ಅದ್ದೂರಿ ಸಂಭ್ರಮ:
ಬ್ರಿಟಿಷ್ ವರ್ಜಿನ್ ಐಲ್ಯಾಂಡ್ಸ್ನಲ್ಲಿರುವ ಉದ್ಯಮಿ ರಿಚರ್ಡ್ ಬ್ರಾನ್ಸನ್ ಅವರಿಗೆ ಸೇರಿದ ‘ನೆಕರ್ ದ್ವೀಪ’ದಲ್ಲಿ ಈ ಜೋಡಿಯ ವಿವಾಹ ಮಹೋತ್ಸವ ನೆರವೇರಿದೆ. ಅದ್ದೂರಿ ಸಾರ್ವಜನಿಕ ಸಮಾರಂಭದ ಬದಲು, ಕೇವಲ 70 ಮಂದಿ ಆತ್ಮೀಯ ಅತಿಥಿಗಳ ಸಮ್ಮುಖದಲ್ಲಿ ಬಹಳ ಖಾಸಗಿಯಾಗಿ ಮದುವೆ ನಡೆದಿದೆ. ಒಂದು ವಾರ ಕಾಲ ನಡೆದ ಈ ಸಂಭ್ರಮದಲ್ಲಿ ಅತಿಥಿಗಳು ಸ್ನಾರ್ಕೆಲಿಂಗ್ ಮತ್ತು ಕೈಟ್ಸರ್ಫಿಂಗ್ನಂತಹ ಸಾಹಸ ಕ್ರೀಡೆಗಳಲ್ಲಿ ಪಾಲ್ಗೊಂಡು ಸಖತ್ ಎಂಜಾಯ್ ಮಾಡಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಅರಳಿದ ಪ್ರೇಮ:
2022ರಲ್ಲಿ ಚಿತ್ರೀಕರಣವೊಂದಕ್ಕಾಗಿ ಮಿಸ್ಟರ್ ಬೀಸ್ಟ್ ದಕ್ಷಿಣ ಆಫ್ರಿಕಾಕ್ಕೆ ಭೇಟಿ ನೀಡಿದ್ದಾಗ ತಿಯಾ ಅವರ ಪರಿಚಯವಾಗಿತ್ತು. ಆರಂಭದಲ್ಲಿ ‘ಲಾಂಗ್ ಡಿಸ್ಟೆನ್ಸ್’ ಸಂಬಂಧದಲ್ಲಿದ್ದ ಈ ಜೋಡಿ, ನಂತರ ಅಮೆರಿಕದಲ್ಲಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. 2024ರ ಡಿಸೆಂಬರ್ನಲ್ಲಿ ಕ್ರಿಸ್ಮಸ್ ಆಚರಣೆಯ ವೇಳೆ ಜಿಮ್ಮಿ ಅವರು ಪ್ರಪೋಸ್ ಮಾಡಿದ್ದ ಫೋಟೋಗಳು ವೈರಲ್ ಆಗಿದ್ದವು.
ಯಾರೀಕೆ ತಿಯಾ ಬೊಯ್ಸನ್?
ಮಿಸ್ಟರ್ ಬೀಸ್ಟ್ ಅವರ ಕೈಹಿಡಿದ ತಿಯಾ ಬೊಯ್ಸನ್ ಕೇವಲ ಕಂಟೆಂಟ್ ಕ್ರಿಯೇಟರ್ ಮಾತ್ರವಲ್ಲ, ಅವರೊಬ್ಬರು ಬಹುಮುಖ ಪ್ರತಿಭೆ. ದಕ್ಷಿಣ ಆಫ್ರಿಕಾ ಮೂಲದ ಇವರು ಲೇಖಕಿ ಮತ್ತು ನಿರೂಪಕಿಯೂ ಹೌದು. ಕಾನೂನು, ಮನೋವಿಜ್ಞಾನ (Psychology) ಮತ್ತು ನ್ಯೂರೋಸೈಕಾಲಜಿಯಲ್ಲಿ ಉನ್ನತ ಪದವಿಗಳನ್ನು ಪಡೆದಿರುವ ಇವರು, ‘TheaBeasty’ ಎಂಬ ಹೆಸರಿನಲ್ಲಿ ಪ್ರಸಿದ್ಧ ಗೇಮರ್ ಮತ್ತು ಸ್ಟ್ರೀಮರ್ ಆಗಿಯೂ ಗುರುತಿಸಿಕೊಂಡಿದ್ದಾರೆ.
ಯೂಟ್ಯೂಬ್ ಸಾಮ್ರಾಜ್ಯದ ಅಧಿಪತಿ:
ಮಿಸ್ಟರ್ ಬೀಸ್ಟ್ ಪ್ರಸ್ತುತ 508 ಮಿಲಿಯನ್ (50 ಕೋಟಿಗೂ ಅಧಿಕ) ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ವಿಶ್ವದ ನಂಬರ್ 1 ಯೂಟ್ಯೂಬರ್ ಎನಿಸಿಕೊಂಡಿದ್ದಾರೆ. ತಮ್ಮ ವಿಭಿನ್ನ ಚಾಲೆಂಜ್ಗಳು ಮತ್ತು ದಾನಧರ್ಮದ ವಿಡಿಯೋಗಳ ಮೂಲಕವೇ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿರುವ ಜಿಮ್ಮಿ, ಈಗ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ನವಜೋಡಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
ರಾಜಕೀಯ23 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ24 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್6 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026















