Connect with us

ಸ್ಥಳೀಯ

Arrested-ಕುಂಬಳೆ: ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ; 42 ಪವನ್ ಚಿನ್ನ ದೋಚಿದ್ದ ಪ್ರಮುಖ ಆರೋಪಿ ಪುತ್ತೂರಿನಲ್ಲಿ ಅರೆಸ್ಟ್..!

Published

on

Ad Widget

Ad Widget

Ad Widget

Ad Widget

ಕೆಲ ವರ್ಷಗಳ ಹಿಂದೆ ಕುಂಬಳೆಯ ಮನೆಯೊಂದಕ್ಕೆ ನುಗ್ಗಿ, ಮನೆಯವರನ್ನು ಕಟ್ಟಿ ಹಾಕಿ ಭೀಕರ ದರೋಡೆ ನಡೆಸಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರು ಸಂಪ್ಯ ನಿವಾಸಿ ಅಸೀಸ್ ಅಲಿಯಾಸ್ ಅಬ್ದುಲ್ ಅಸೀಸ್ (58) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಕುಂಬಳೆ/ಪುತ್ತೂರು: ಕೆಲ ವರ್ಷಗಳ ಹಿಂದೆ ಕುಂಬಳೆಯ ಮನೆಯೊಂದಕ್ಕೆ ನುಗ್ಗಿ, ಮನೆಯವರನ್ನು ಕಟ್ಟಿ ಹಾಕಿ ಭೀಕರ ದರೋಡೆ ನಡೆಸಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರು ಸಂಪ್ಯ ನಿವಾಸಿ ಅಸೀಸ್ ಅಲಿಯಾಸ್ ಅಬ್ದುಲ್ ಅಸೀಸ್ (58) ಬಂಧಿತ ಆರೋಪಿ.

Ad Widget

Ad Widget alt="Ad Widget"/>

Ad Widget

ಏನಿದು ಘಟನೆ?
2012ರ ಡಿಸೆಂಬರ್ 22ರಂದು ಕುಂಬಳೆಯ ಅನಿಲ್ ಕುಂಬ್ಳೆ ರಸ್ತೆ ಸಮೀಪವಿರುವ ಮಂಗಳೂರಿನ ಸಾರಿಗೆ ನಿರ್ವಾಹಕ ರಾಜೇಶ್ ಶೆಣೈ ಎಂಬುವವರ ಮನೆಗೆ ಮುಸುಕುಧಾರಿ ದರೋಡೆಕೋರರ ತಂಡ ನುಗ್ಗಿತ್ತು. ಬಂದೂಕು ತೋರಿಸಿ ಮನೆಯವರನ್ನು ಬೆದರಿಸಿದ ದರೋಡೆಕೋರರು, ರಾಜೇಶ್ ಶೆಣೈ ಅವರ ಮುಖಕ್ಕೆ ಯಾವುದೋ ದ್ರವ ಸಿಂಪಡಿಸಿ ಪ್ರಜ್ಞೆ ತಪ್ಪಿಸಿದ್ದರು. ಬಳಿಕ ಕುಟುಂಬದ ಇತರ ಸದಸ್ಯರ ಕೈಕಾಲುಗಳನ್ನು ಕಟ್ಟಿ ಹಾಕಿ, ಬಾಯಿಗೆ ಪ್ಲಾಸ್ಟರ್ ಅಂಟಿಸಿ 42 ಪವನ್ ಚಿನ್ನಾಭರಣ ಹಾಗೂ 25 ಸಾವಿರ ರೂ. ನಗದನ್ನು ದೋಚಿ ಪರಾರಿಯಾಗಿದ್ದರು.

Ad Widget

Ad Widget <> Ad Widget

ಬೆಳಕಿಗೆ ಬಂದಿದ್ದು ಹೇಗೆ?
ಅಂದು ರಾತ್ರಿ ರಾಜೇಶ್ ಶೆಣೈ ಅವರ ಕುಟುಂಬ ಸ್ನೇಹಿತೆ ಡಾ. ವಾಣಿ ಅವರು ಗೃಹಪ್ರವೇಶದ ಆಮಂತ್ರಣ ನೀಡಲು ಇವರ ಮನೆಗೆ ಬಂದಿದ್ದರು. ಈ ವೇಳೆ ಮನೆಯವರೆಲ್ಲಾ ಕಟ್ಟಿ ಹಾಕಲ್ಪಟ್ಟಿರುವುದು ಕಂಡುಬಂದಾಗ ಈ ಘೋರ ದರೋಡೆ ಪ್ರಕರಣ ಬೆಳಕಿಗೆ ಬಂದಿತ್ತು. ಅಂದು ಈ ಘಟನೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಪೊಲೀಸ್ ಕಾರ್ಯಾಚರಣೆ:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ 10 ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಅಸೀಸ್ ಸೇರಿದಂತೆ ನಾಲ್ವರು ತಲೆಮರೆಸಿಕೊಂಡಿದ್ದರು. ಕಾಸರಗೋಡು ಅಪರಾಧ ವಿಭಾಗದ ಡಿವೈಎಸ್ಪಿ ಮಧುಸೂದನನ್ ನಾಯರ್ ಅವರ ನೇತೃತ್ವದ ತಂಡ ಗುರುವಾರ ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಣೆ ನಡೆಸಿ ಅಸೀಸ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿಸಲ್ಪಟ್ಟ ಅಸೀಸ್ ಅವರಲ್ಲಿ ಪ್ರಮುಖ ವ್ಯಕ್ತಿ.

Ad Widget

Ad Widget

ಈ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್‌ಗಳಾದ ಶ್ರೀಕುಮಾರ್, ಸಂಜಯ್, ಎಸ್‌ಐಗಳಾದ ರವೀಂದ್ರನ್, ಪ್ರಮೋದ್, ವಿನೋದ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಪ್ರಕರಣದ ಇನ್ನುಳಿದ ಮೂವರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!