ಸುಳ್ಯ
Sullia-ಸುಳ್ಯ: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಕಡಬ ನಿವಾಸಿ ಅರೆಸ್ಟ್
ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಡಬ ನಿವಾಸಿ ಯುವಕ ಧನುಷ್ ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಕಡಬ: ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಡಬ ನಿವಾಸಿ ಯುವಕ ಧನುಷ್ ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಮೇ 07ರಂದು ಅಪ್ರಾಪ್ತ ಪ್ರಾಯದ ತನ್ನ ಮಗಳು ಮಂಗಳೂರಿಗೆ ಕೆಲಸಕ್ಕಾಗಿ ಹೋಗುತ್ತಿರುವುದಾಗಿ ಮನೆಯಿಂದ ತೆರಳಿದವಳು ಆ ಬಳಿಕ ಮನೆಗೆ ಹಿಂತಿರುಗದೇ ಕಾಣೆಯಾಗಿರುವುದಾಗಿ ಆಕೆಯ ತಾಯಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಮೇ 11ರಂದು ದೂರು ದಾಖಲಿಸಿದ್ದರು. ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದರು.
ತನಿಖೆ ನಡೆಸಿದ ಪೊಲೀಸರು, ಕಾಣೆಯಾಗಿದ್ದ ಬಾಲಕಿಯನ್ನು ಜು.22ರಂದು ಪತ್ತೆ ಮಾಡಿದ್ದರು.
ಆರೋಪಿ ಧನುಷ್ (18ವ.)ಎಂಬಾತ ತನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜಜ್ಯ ನಡೆಸಿರುವುದಾಗಿ ಬಾಲಕಿ ನೀಡಿದ ಹೇಳಿಕೆಯ ಮೇರೆಗೆ, ಪ್ರಕರಣದಲ್ಲಿ ಕಲಂ 64(2)(m) BNS, ಕಲಂ 5(1), 6 POCSO ಕಾಯ್ದೆಯನ್ನು ಹೆಚ್ಚುವರಿಯಾಗಿ ಅಳವಡಿಸಲಾಗಿದ್ದು ಆರೋಪಿತನನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಬಿಗ್ ನ್ಯೂಸ್19 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ21 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ3 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಬಿಗ್ ನ್ಯೂಸ್24 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಅಪರಾಧ2 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸ್ಥಳೀಯ2 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
Uncategorized5 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ
-
ಅಪರಾಧ2 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು















