ಬಿಗ್ ನ್ಯೂಸ್
Puttur-ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಪುತ್ತೂರು ವಲಯದ ನೂತನ ಸಮಿತಿ ರಚನೆ; ಸಂಚಾಲಕರಾಗಿ ಮನೋಹರ್ ರೈ, ಅಧ್ಯಕ್ಷರಾಗಿ ವೇದಾವತಿ ಪೂಜಾರಿ ಆಯ್ಕೆ
ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಪುತ್ತೂರು ವಲಯದ ನೂತನ ಕಾರ್ಯಕಾರಿ ಸಮಿತಿಯ ರಚನೆಯು ಇತ್ತೀಚೆಗೆ ಪುತ್ತೂರಿನ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಯಶಸ್ವಿಯಾಗಿ ನೆರವೇರಿತು.
ಪುತ್ತೂರು: ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಪುತ್ತೂರು ವಲಯದ ನೂತನ ಕಾರ್ಯಕಾರಿ ಸಮಿತಿಯ ರಚನೆಯು ಇತ್ತೀಚೆಗೆ ಪುತ್ತೂರಿನ ಬಂಟರ ಭವನದಲ್ಲಿ ನಡೆದ ಸಭೆಯಲ್ಲಿ ಯಶಸ್ವಿಯಾಗಿ ನೆರವೇರಿತು.
ಸಭೆಯ ಆರಂಭದಲ್ಲಿ ಪುತ್ತೂರು ವಲಯದ ಪ್ರಧಾನ ಸಂಚಾಲಕರಾಗಿ ಆಯ್ಕೆಯಾದ ಮನೋಹರ ರೈ ಅವರನ್ನು ಎಲ್ಲರನ್ನು ಸ್ವಾಗತಿಸಿದರು. ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಡ ಹಾಗೂ ತುಳುವರ್ಲ್ಡ್ ಫೌಂಡೇಶನ್‌ನ ಪ್ರಧಾನ ಸಂಚಾಲಕ ಪ್ರಮೋದ್ ಸಪ್ರೆ ಅವರು ಮಾತನಾಡಿ, ಸಂಘಟನೆಯ ಧ್ಯೇಯೋದ್ದೇಶಗಳು ಮತ್ತು ತುಳು ಭಾಷೆ ಹಾಗೂ ಸಂಸ್ಕೃತಿಯ ಉಳಿವಿಗಾಗಿ ಕೈಗೊಳ್ಳಬೇಕಾದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ನೂತನ ಪದಾಧಿಕಾರಿಗಳ ಆಯ್ಕೆ:
ಸಭೆಯಲ್ಲಿ ಚರ್ಚಿಸಿ, ಸರ್ವಾನುಮತದಿಂದ ಈ ಕೆಳಗಿನವರನ್ನು ನೂತನ ಸಮಿತಿಗೆ ಆಯ್ಕೆ ಮಾಡಲಾಯಿತು:
ಅಧ್ಯಕ್ಷರು: ವೇದಾವತಿ ಪೂಜಾರಿ
ಉಪಾಧ್ಯಕ್ಷರು: ಜಯಪ್ರಕಾಶ್ ರೈ, ನಯನಾ ರೈ, ಇಂದಿರಾ ರೈ
ಕಾರ್ಯದರ್ಶಿ: ನಿತ್ಯಾನಂದ ಶೆಟ್ಟಿ
ಖಜಾಂಚಿ: ಪುಷ್ಪಲತಾ ಕೆ.
ಪ್ರಧಾನ ಸಂಚಾಲಕರು: ಮನೋಹರ ರೈ ಮನವಳಿಕೆ ಗುತ್ತು
ಸಲಹೆಗಾರರು: ಸದಾಶಿವ ರೈ, ಚಂದ್ರಹಾಸ ರೈ, ದುರ್ಗಾಪ್ರಸಾದ ರೈ, ದಯಾನಂದ ರೈ
ವೇದಿಕೆಯಲ್ಲಿ ತುಳುವರ್ಲ್ಡ್ ಫೌಂಡೇಶನ್‌ನ ಅಧ್ಯಕ್ಷರಾದ ಭಾನುಮತಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಸಂತ ರೈ ಕುತ್ತೆತ್ತೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಊರಿನ ಗಣ್ಯರಾದ ದಂಬೆಕಾನ ಸದಾಶಿವ ರೈ, ದಯಾನಂದ ರೈ ಮನವಳಿಕೆಗುತ್ತು, ಚಂದ್ರಹಾಸ ರೈ, ದುರ್ಗಾಪ್ರಸಾದ್ ರೈ ಕುಂಬ್ರ, ಜಗನ್ನಾಥ ರೈ ಸಭೆಯಲ್ಲಿ ಪಾಲ್ಗೊಂಡು ಮಾರ್ಗದರ್ಶನ ನೀಡಿದರು. ವಸಂತ ರೈ ಕುತ್ತೆತ್ತೂರು ಅವರು ವಂದನಾರ್ಪಣೆ ಸಲ್ಲಿಸಿದರು. ಸಂಘಟನೆಯ ಮೂಲಕ ಪುತ್ತೂರು ಭಾಗದಲ್ಲಿ ತುಳು ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
-
Uncategorized14 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized16 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು19 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ20 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ24 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಬಿಗ್ ನ್ಯೂಸ್19 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ


















