ಶತಮಾನದ […]" /> ಶತಮಾನದ […]"> Vitla News:ಸರಣಿ ಕೃತ್ಯ: ಶತಮಾನದ ಹಳೆಯ ಮನೆಯ ಕಿಂಡಿಯಲ್ಲಿ ಒಳನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ ದರೋಡೆ! ಪಕ್ಕದ ಮನೆಯಿಂದ ಬೈಕ್‌ ಕಳವು - Nikhara News | Kannada News Website
Connect with us

Uncategorized

Vitla News:ಸರಣಿ ಕೃತ್ಯ: ಶತಮಾನದ ಹಳೆಯ ಮನೆಯ ಕಿಂಡಿಯಲ್ಲಿ ಒಳನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ ದರೋಡೆ! ಪಕ್ಕದ ಮನೆಯಿಂದ ಬೈಕ್‌ ಕಳವು

Published

on

Ad Widget

Ad Widget

Ad Widget

Ad Widget

ವಿಟ್ಲ: ಒಂಟಿ ಮನೆಯೊಂದರ ಗೋಡೆಯ ಕಿಂಡಿಯನ್ನೇ ತಮ್ಮ ಎಂಟ್ರಿ ಗೇಟ್ ಮಾಡಿಕೊಂಡ ಖದೀಮರು, ನಿದ್ದೆಯಲ್ಲಿದ್ದ ಹಿರಿಯರೊಬ್ಬರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ದರೋಡೆ ಮಾಡಿ, ಅಕ್ಕಪಕ್ಕದಲ್ಲೇ ಬೈಕ್ ಕಳ್ಳತನವನ್ನೂ ಎಸೆಗಿರುವ ವಿಚಿತ್ರ ಹಾಗೂ ರೋಚಕ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಕೊಡಂಗೆಯಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಒಂದೇ ರಾತ್ರಿ ನಡೆದ ಈ ಎರಡು ಕೃತ್ಯಗಳ ಹಿಂದೆ ಒಂದೇ ತಂಡದ ಕೈವಾಡವಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಇದನ್ನು ಸವಾಲಾಗಿ ಸ್ವೀಕರಿಸಿ ತನಿಖೆ ಚುರುಕುಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಶತಮಾನದ ಹಳೆಯ ಮನೆಯಲ್ಲೊಂದು ‘ರಹಸ್ಯ ಕಿಂಡಿ’!
ದರೋಡೆಗೆ ಒಳಗಾದ ಕೋಲ್ಪೆ ಕೊಡಂಗೆ ನಿವಾಸಿ ಡಾ. ಸೂರ್ಯನಾರಾಯಣ ಭಟ್ (೭೯) ಅವರದ್ದು ಸುಮಾರು ೧೦೦ ವರ್ಷ ಹಳೆಯ ಮನೆ. ಕೆಲವು ವರ್ಷಗಳ ಹಿಂದೆ ಮನೆಯೊಳಗೆ ಮಂಚವನ್ನು ತೆಗೆದುಕೊಂಡು ಹೋಗುವ ವಿಶೇಷ ಉದ್ದೇಶಕ್ಕಾಗಿ ಮನೆಯ ಹಿಂಭಾಗದ ಗೋಡೆಯಲ್ಲಿ ಒಂದು ಕಿಂಡಿಯನ್ನು (ದ್ವಾರವನ್ನು) ಮಾಡಲಾಗಿತ್ತು. ಕಾಲಕ್ರಮೇಣ ಬಳಕೆಯಲ್ಲಿಲ್ಲದ ಈ ಕಿಂಡಿಯೇ ಈಗ ಕಳ್ಳರಿಗೆ ವರದಾನವಾಗಿದೆ!

Ad Widget

Ad Widget <> Ad Widget

ಜುಲೈ 25ರಂದು ತಡರಾತ್ರಿ 12.30ರಿಂದ 1ಗಂಟೆಯ ಸುಮಾರಿಗೆ ಡಾ. ಭಟ್ ಅವರು ಕುಟುಂಬದೊಂದಿಗೆ ತಳ ಅಂತಸ್ಥಿನಲ್ಲಿ ಟಿವಿ ನೋಡುತ್ತಾ ಮಲಗಿದ್ದ ವೇಳೆ, ಒಳನುಗ್ಗಿದ ಅಪರಿಚಿತರ ತಂಡವು ನೇರವಾಗಿ ಈ ಕಿಂಡಿಯ ದಾರಿಯನ್ನೇ ಬಳಸಿ ಒಳಬಂದಿದೆ. ಅವರು ಟಿವಿ ಆಫ್‌ ಮಾಡಲು ಹೋದಾಗ ಅವರ ಕುತ್ತಿಗೆಯಲ್ಲಿದ್ದ ಸುಮಾರು 20 ಗ್ರಾಂ ತೂಕದ (ಅಂದಾಜು 2.60 ಲಕ್ಷ ರೂ. ಮೌಲ್ಯದ) ಚಿನ್ನದ ಸರವನ್ನು ಕಸಿದುಕೊಂಡು, ಅದೇ ದಾರಿಯಲ್ಲಿ ಪರಾರಿಯಾಗಿದೆ. ಇದು ಮನೆಯ ಒಳಗಿನ ಯಾರೋ ಕಿಡಿಗೇಡಿಗಳ ಅಥವಾ ಮನೆಯ ಅಳತೆಗೋಲು ತಿಳಿದವರ ಕೃತ್ಯವಿರಬಹುದೆಂಬ ಅನುಮಾನವನ್ನು ಹುಟ್ಟುಹಾಕಿದೆ.

ಶ್ವಾನದಳಕ್ಕೆ ಸಿಕ್ಕಿತು ಮಹತ್ವದ ಸುಳಿವು!
ಘಟನೆ ನಡೆದ ಬೆನ್ನಲ್ಲೇ ವಿಟ್ಲ ಪೊಲೀಸರೊಂದಿಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ಬಂಟ್ವಾಳ ಉಪಾಧೀಕ್ಷಕ ಯಶ್ ಕುಮಾರ್ ಶರ್ಮ, ವೃತ್ತ ನಿರೀಕ್ಷಕ ಪ್ರಕಾಶ್ ದೇವಾಡಿಗ ಹಾಗೂ ಉಪನಿರೀಕ್ಷಕ ರಾಮಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Ad Widget

ಘಟನಾ ಸ್ಥಳಕ್ಕೆ ಬಂದ ಶ್ವಾನದಳದ ಶ್ವಾನವು ಮನೆಯ ಅಂಗಳದಲ್ಲಿ ಸುತ್ತಿ, ತೋಟದ ಮೂಲಕ ರಸ್ತೆಗೆ ಬಂದು, ಪಕ್ಕದ ಕೊಡಂಚಪಾಲು ಎಂಬಲ್ಲಿ ದ್ವಿಚಕ್ರ ವಾಹನ ಕಳವಾದ ಸ್ಥಳದವರೆಗೆ ಸಾಗಿರುವುದು ತನಿಖೆಗೆ ಮಹತ್ವದ ತಿರುವು ನೀಡಿದೆ.

ಒಂದು ಸ್ಟಾರ್ಟ್ ಆಗಲಿಲ್ಲ, ಮತ್ತೊಂದು ಕಳವಾಯಿತು!
ಸರ ಕಳ್ಳತನದ ಜತೆಗೆ ಕಳ್ಳರು ಕೈಚಳಕ ತೋರಿಸಿದ್ದು ಪಕ್ಕದ ಮನೆಯಲ್ಲೇ. ದರೋಡೆ ನಡೆದ ಮನೆಯ ಪಕ್ಕದಲ್ಲೇ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳರು ಸ್ಟಾರ್ಟ್ ಮಾಡಲು ಹರಸಾಹಸ ಪಟ್ಟಿದ್ದಾರೆ. ಸಾಧ್ಯವಾಗದೆ ಹೋದಾಗ, ಅದನ್ನು ಸಾಕಷ್ಟು ದೂರದವರೆಗೆ ದೂಡಿಕೊಂಡು ಬಂದು, ಕೊನೆಗೆ ಸರ ಕಳವಾದ ಮನೆಯ ಗೇಟಿನ ಮುಂಭಾಗವೇ ಬಿಟ್ಟು ಹೋಗಿದ್ದಾರೆ!

ಇದಾದ ಬಳಿಕ, ಅದೇ ಪರಿಸರದ ಕೊಡಂಚಪಾಲು ನಿವಾಸಿ ಆನಂದ ಸಪಲ್ಯ (೫೩) ಎಂಬವರ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಮತ್ತೊಂದು ದ್ವಿಚಕ್ರ ವಾಹನವನ್ನು ಕಳ್ಳರು ಕೀ ಇಲ್ಲದೆಯೇ ಸ್ಟಾರ್ಟ್ ಮಾಡಿಕೊಂಡು ಪರಾರಿಯಾಗಿದ್ದಾರೆ. ಜು.೨೬ರ ಬೆಳಗ್ಗೆ ಈ ವಿಷಯ ಬೆಳಕಿಗೆ ಬಂದಿದೆ.

ಚೆಕ್ ಪೋಸ್ಟ್ ಕಣ್ಣುತಪ್ಪಿಸಿ ಪರಾರಿ?
ಕಳ್ಳತನವಾದ ದ್ವಿಚಕ್ರ ವಾಹನವನ್ನು ಕಳ್ಳರು ರಾತ್ರಿ ಸಮಯದಲ್ಲೇ ಕಬಕ ಚೆಕ್ ಪೋಸ್ಟ್ ಹಾದಿಯಲ್ಲಿಯೇ ಕೊಂಡೊಯ್ದಿರಬಹುದು ಎಂದು ಅಂದಾಜಿಸಲಾಗಿದೆ. ರಾತ್ರಿ ವೇಳೆ ಕಾರ್ಯನಿರ್ವಹಿಸುವ ಚೆಕ್ ಪೋಸ್ಟ್ ಅನ್ನು ಕಳ್ಳರು ಹೇಗೆ ದಾಟಿದರು? ಅಥವಾ ಬೇರೆ ಮಾರ್ಗವನ್ನೇ ಆಯ್ಕೆ ಮಾಡಿಕೊಂಡಿದ್ದರೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಒಂದೇ ರಾತ್ರಿ, ಒಂದೇ ಪ್ರದೇಶದಲ್ಲಿ ನಡೆದ ಈ ಸರಣಿ ಕೃತ್ಯಗಳು ಸ್ಥಳೀಯರಲ್ಲಿ ಭೀತಿಯನ್ನುಂಟು ಮಾಡಿದೆ. ತನಿಖಾ ತಂಡವು ಎಲ್ಲಾ ಆಯಾಮಗಳಿಂದಲೂ ತನಿಖೆ ಮುಂದುವರಿಸಿದೆ.

n a chilling series of events in Kodange, Idkidu village, miscreants targeted a 100-year-old heritage house by sneaking through a secret wall cavity—originally made to move furniture—and looted a gold chain worth ₹2.60 lakh from a 79-year-old senior citizen while the family was asleep. In what is suspected to be the handiwork of the same gang, the thieves also attempted to steal one motorcycle (abandoned it after failing to start it) and successfully made off with another two-wheeler parked in a nearby yard. Senior police officials, canine squads, and fingerprint experts rushed to the spot as the Vittal police registered cases and launched a high-priority investigation into the brazen multi-spot thefts.

Ad Widget
Click to comment

Leave a Reply

Uncategorized

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ  ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.

ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.

Ad Widget

Ad Widget

ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ  ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!