Connect with us

ಸ್ಥಳೀಯ

C.T. Ravi-‘ಮುಲ್ಲಾ ಅಂದ್ರೆ ಮುಸ್ಲಿಂ ಅಲ್ಲ – ಗೂಗಲ್ ನಲ್ಲಿ ನೋಡಿದ್ದೇನೆ’ : ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿ.ಟಿ. ರವಿ

Published

on

Ad Widget

Ad Widget

Ad Widget

Ad Widget

ದೆಹಲಿಯಲ್ಲಿ ನಡೆದ ನೀಟ್ (NEET) ಪರೀಕ್ಷೆ ಅಕ್ರಮ ವಿರೋಧಿ ಪ್ರತಿಭಟನೆ ಕುರಿತಾದ ತಮ್ಮ ಇತ್ತೀಚಿನ ಹೇಳಿಕೆಯನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಸೋಮವಾರ ನಗರದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಮಾತಿನಲ್ಲಿದ್ದ ಉದ್ದೇಶವನ್ನು ವಿವರಿಸಿದರು.

Ad Widget

Ad Widget

Ad Widget

Ad Widget

ಕೊಪ್ಪಳ: ದೆಹಲಿಯಲ್ಲಿ ನಡೆದ ನೀಟ್ (NEET) ಪರೀಕ್ಷೆ ಅಕ್ರಮ ವಿರೋಧಿ ಪ್ರತಿಭಟನೆ ಕುರಿತಾದ ತಮ್ಮ ಇತ್ತೀಚಿನ ಹೇಳಿಕೆಯನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಸೋಮವಾರ ನಗರದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಮಾತಿನಲ್ಲಿದ್ದ ಉದ್ದೇಶವನ್ನು ವಿವರಿಸಿದರು.

Ad Widget

Ad Widget alt="Ad Widget"/>

Ad Widget

ಗೂಗಲ್ ವಿವರಣೆ ನೀಡಿದ ಸಿ.ಟಿ. ರವಿ:
ತಮ್ಮ ಹೇಳಿಕೆಯಲ್ಲಿ ಬಳಸಿದ್ದ ‘ಮುಲ್ಲಾ’ ಪದದ ಕುರಿತು ಸ್ಪಷ್ಟನೆ ನೀಡಿದ ಅವರು, “ಮುಲ್ಲಾ ಅಂದರೆ ಮುಸ್ಲಿಂ ಅಲ್ಲ ಎಂದು ನಾನು ಗೂಗಲ್‌ನಲ್ಲಿ ಸರ್ಚ್ ಮಾಡಿ ತಿಳಿದುಕೊಂಡಿದ್ದೇನೆ. ಯಾವುದೇ ನಿರ್ದಿಷ್ಟ ಸಮುದಾಯವನ್ನು ಅವಹೇಳನ ಮಾಡುವ ಅಥವಾ ನೋಯಿಸುವ ಉದ್ದೇಶ ನನಗಿಲ್ಲ,” ಎಂದು ಹೇಳಿದರು.

Ad Widget

Ad Widget <> Ad Widget

ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನೆ:
ಇದೇ ವೇಳೆ ಟೀಕಾಕಾರರ ವಿರುದ್ಧ ಹರಿಹಾಯ್ದ ಅವರು, “ನಮ್ಮ ಶಾಲೆಗಳಲ್ಲಿ ಶಿಕ್ಷಕರು ಕೂಡ ‘ಎದೆ ಸೀಳಿದರೆ ಅಕ್ಷರ ಇಲ್ಲ’ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳುತ್ತಾರೆ. ಹಾಗಾದರೆ ಇಂತಹ ಪದಬಳಕೆ ಮಾಡುವ ಶಿಕ್ಷಕರನ್ನೂ ಕಾಂಗ್ರೆಸ್ ಸರ್ಕಾರ ಜೈಲಿಗೆ ಹಾಕುತ್ತದೆಯೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು. ತಾವು ಆಡಿದ ಮಾತುಗಳಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಪುನರುಚ್ಚರಿಸಿದರು.

ಜೈಲಿಗೆ ಹೋಗಲು ಸಿದ್ಧ:
ತಮ್ಮ ಸಿದ್ಧಾಂತದ ಬಗ್ಗೆ ಮಾತನಾಡಿದ ಸಿ.ಟಿ. ರವಿ, “ಹಿಂದುತ್ವದ ಹಿತಾಸಕ್ತಿ ಹಾಗೂ ಅನ್ಯಾಯದ ವಿರುದ್ಧ ಹೋರಾಡಲು ನಾನು ಸದಾ ಸಿದ್ಧ. ಈ ಹೋರಾಟಕ್ಕಾಗಿ ಒಂದು ವೇಳೆ ಜೈಲಿಗೆ ಹೋಗಬೇಕಾಗಿ ಬಂದರೂ ನಾನು ಹೆದರುವುದಿಲ್ಲ. ನನಗೆ ಜನತಾ ನ್ಯಾಯಾಲಯ ಮತ್ತು ಪ್ರಜಾಪ್ರಭುತ್ವದ ನ್ಯಾಯದ ಮೇಲೆ ಸಂಪೂರ್ಣ ನಂಬಿಕೆಯಿದೆ,” ಎಂದು ತಿಳಿಸಿದರು.

Ad Widget

Ad Widget

ಒಟ್ಟಾರೆಯಾಗಿ, ನೀಟ್ ಪ್ರತಿಭಟನೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ಹೇಳಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬ ದೃಢ ನಿಲುವನ್ನು ಅವರು ವ್ಯಕ್ತಪಡಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!