Connect with us

ಉಡುಪಿ

Yashpal Suvarna-24 ಗಂಟೆ ಡ್ರಗ್ಸ್ ನಡೆಯಲ್ಲಿ ತೇಲುತ್ತಿರುವ ರಾಹುಲ್ ಗಾಂಧಿಯ ವಂಶವನ್ನು ಬಾಬರಿ ಮಸೀದಿಯಂತೆ ಧ್ವಂಸ ಮಾಡುತ್ತೇವೆ – ಯಶ್ಪಾಲ್ ಸುವರ್ಣ; ಸಿಜೆಪಿ ಹೋರಾಟಕ್ಕೆ ವಿದೇಶಿ ಫಂಡ್ ಬಂದಿದೆ : ವಿದೇಶಾಂಗ ಸಚಿವಾಲಯ ಅಲ್ಲಗಳೆದ ಆರೋಪವನ್ನು ಪುನರುಚ್ಚರಿಸಿದ ಬಿಜೆಪಿ ಶಾಸಕ..!

Published

on

Ad Widget

Ad Widget

Ad Widget

Ad Widget

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಕಾಂಗ್ರೆಸ್, ನಟ ಪ್ರಕಾಶ್ ರಾಜ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಕಾಂಗ್ರೆಸ್, ನಟ ಪ್ರಕಾಶ್ ರಾಜ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನಟ ಪ್ರಕಾಶ್ ರಾಜ್‌ಗೆ ಸಮುದ್ರದ ಎಚ್ಚರಿಕೆ:
ಕಲಾವಿದರ ತಲೆಯಲ್ಲಿ ವಿಷಬೀಜ ಬಿತ್ತಲು ಪ್ರಕಾಶ್ ರಾಜ್ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಶಾಸಕರು, “ಕರಾವಳಿಯವರೇ ಆದ ಪ್ರಕಾಶ್ ರಾಜ್ ಅವರೇ ಅರ್ಥಮಾಡಿಕೊಳ್ಳಿ. ಇಲ್ಲಿಗೆ ಬಂದು ಅಧಿಕಪ್ರಸಂಗ ಮಾಡಿದರೆ ನೀವು ಅರಬ್ಬಿ ಸಮುದ್ರದಲ್ಲಿ ಏಳಬೇಕಾದೀತು ಅಥವಾ ನಿಮ್ಮ ಜೀವನ ಮೀನುಗಳಿಗೆ ಆಹಾರವಾದೀತು” ಎಂದು ನೇರ ಎಚ್ಚರಿಕೆ ನೀಡಿದರು.
ರಾಹುಲ್ ಗಾಂಧಿ ವಿರುದ್ಧ ವಂಶ ಧ್ವಂಸದ ಹೇಳಿಕೆ:

Ad Widget

Ad Widget <> Ad Widget

ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಯಶ್‌ಪಾಲ್ ಸುವರ್ಣ, “ರಾಹುಲ್ ಗಾಂಧಿ 24 ಗಂಟೆಯೂ ಡ್ರಗ್ಸ್ ನಶೆಯಲ್ಲಿರುತ್ತಾರೆ. ಅವರಿಗೆ ಚಿಂತನೆ ಮಾಡುವ ಶಕ್ತಿಯೇ ಇಲ್ಲ. ಹಿಂದುಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿದರೆ, 1992ರಲ್ಲಿ ನಾವು ಹೇಗೆ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದೇವೆಯೋ, ಅದೇ ರೀತಿಯಲ್ಲಿ ರಾಹುಲ್ ಗಾಂಧಿ ವಂಶವನ್ನೇ ಧ್ವಂಸ ಮಾಡುವ ಕೆಲಸವನ್ನು ಕಾರ್ಯಕರ್ತರು ಮಾಡಲಿದ್ದಾರೆ” ಎಂದು ವಿವಾದಾತ್ಮಕವಾಗಿ ಮಾತನಾಡಿದರು.

ಮಣಿಪಾಲದ ಅಧ್ಯಾಪಕರ ಮೇಲೆ ಗಂಭೀರ ಆರೋಪ:
ಮಣಿಪಾಲದ ಶಿಕ್ಷಣ ಸಂಸ್ಥೆಯಲ್ಲಿರುವ ಕೇರಳ ಹಾಗೂ ತಮಿಳುನಾಡು ಮೂಲದ ಏಳು ಮಂದಿ ಅಧ್ಯಾಪಕರು ವಿದ್ಯಾರ್ಥಿಗಳ ತಲೆಗೆ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಶಾಸಕರು ಆರೋಪಿಸಿದರು. ಅಷ್ಟೇ ಅಲ್ಲದೆ, “ಈ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಕೂಡ ಪೂರೈಕೆ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಅವರ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ. ಪೊಲೀಸರು ಅವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

Ad Widget

Ad Widget

ಪ್ರತಿಭಟನೆಯ ಉದ್ದೇಶ: ಜಂತರ್ ಮಂತರ್ ನಲ್ಲಿ ನಡೆದ ಸಿಜೆಪಿ ಹೋರಾಟಕ್ಕೆ ವಿಧೇಶಿ ಫಂಡಿಂಗ್ ಆಗಿದೆ ಎಂದು ಶಾಸಕ ಆರೋಪಿಸಿದರು. ಆದರೆ ಕೇಂದ್ರ ಸರ್ಕಾರದ ವಿದೇಶಾಂಗ ಸಚಿವಾಲಯವೇ ವಿದೇಶಿ ಫಂಡಿಂಗ್ ಆರೋಪವನ್ನು ಅಲ್ಲಗಳೆದಿದ್ದರು.

ಕಾಂಗ್ರೆಸ್, ಎಸ್‌ಡಿಪಿಐ ಮತ್ತು ಇತರ ಶಕ್ತಿಗಳು ವಿದೇಶಿ ನೆರವಿನಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿವೆ. ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳು ವಿದ್ಯಾರ್ಥಿಗಳ ಹಿತಕ್ಕಾಗಿ ಅಲ್ಲ, ಬದಲಾಗಿ ಸಮಾಜದಲ್ಲಿ ಉದ್ವಿಗ್ನತೆ ಉಂಟು ಮಾಡಲು ನಡೆಸಿದ ನಾಟಕ ಎಂದು ಶಾಸಕರು ಪ್ರತಿಪಾದಿಸಿದರು.

Ad Widget
Click to comment

Leave a Reply

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಉಡುಪಿ

H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ

Published

on

Ad Widget

Ad Widget

Ad Widget

Ad Widget

ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget

Ad Widget alt="Ad Widget"/>

Ad Widget

ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.

ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

ಕೊಲ್ಲೂರು ಬಳಿಕ ಕಾಪು ಹೊಸ ಮಾರಿಗುಡಿ ದೇವಿ ಸನ್ನಿಧಾನದಕ್ಕೆ ಹೆಚ್ ಡಿಕೆ ಕುಟುಂಬ ಭೇಟಿ ನೀಡಲಿದೆ.

Ad Widget
Continue Reading

ಉಡುಪಿ

Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ

Published

on

Ad Widget

Ad Widget

Ad Widget

Ad Widget

ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.

Ad Widget

Ad Widget

Ad Widget

Ad Widget

ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.

Ad Widget

Ad Widget alt="Ad Widget"/>

Ad Widget

ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.

Ad Widget

Ad Widget <> Ad Widget

ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.

Ad Widget

Ad Widget

ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!