Uncategorized
ಕಾಶ್ಮೀರದಲ್ಲಿ ದೇಶಕ್ಕಾಗಿ ಪ್ರಾಣ ತೆತ್ತ ಸೈನಿಕರ ಕುಟುಂಬಕ್ಕೆ ಸ್ವಂತ ದುಡಿಮೆಯ ಹಣವನ್ನು ದೇಣಿಗೆ ನೀಡಿದ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿ
ಪುತ್ತೂರು: ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಲಾಕ್ ಡೌನ್ ಸಂದರ್ಭ ತಾನೂ ದುಡಿದು ಸಂಪಾದಿಸಿದ ಹಣವನ್ನು ಇತ್ತೀಚೆಗೆ ಕಾಶ್ಮೀರದಲ್ಲಿ ದೇಶಕ್ಕಾಗಿ ಪ್ರಾಣ ತೆತ್ತ ಹನ್ನೊಂದು ಮಂದಿ ದೇಶದ ಹೆಮ್ಮೆಯ ಸೈನಿಕರ ಕುಟುಂಬಕ್ಕೆ ಸಮರ್ಪಿಸುವ ಮೂಲಕ ಉತ್ಕಟ ದೇಶ ಪ್ರೇಮವನ್ನು ಮೆರೆದಿದ್ದಾನೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ(ಸಿಬಿಎಸ್‍ಇ)ದ ಎಂಟನೆಯ ತರಗತಿ ವಿದ್ಯಾರ್ಥಿ ಶ್ರೀಕೃಷ್ಣ ಎಸ್ ನಟ್ಟೋಜ ತನ್ನ ಸ್ವಂತ ದುಡಿಮೆಯ ಹಣವನ್ನು ಸೈನಿಕ ಕುಟುಂಬಕ್ಕೆ ಸಮರ್ಪಿಸಿದ ವಿದ್ಯಾರ್ಥಿ.
ಕೊರೋನಾ ಕಾರಣದಿಂದ ಸರಿಸುಮಾರು ಒಂದೂವರೆ ವರ್ಷಗಳ ಕಾಲ ಆನ್‍ಲೈನ್ ತರಗತಿಗಳಾಗುವ ಸಂದರ್ಭದಲ್ಲಿ ಶ್ರೀಕೃಷ್ಣ ಆನ್‍ಲೈನ್ ತರಗತಿಯ ನಿರ್ವಾಹಕನಾಗಿ ಕಾರ್ಯನಿರ್ವಹಿಸಿದ್ದ. ಆ ಸಂದರ್ಭದಲ್ಲಿ ತಾನು ಪಡೆದ ಸಂಭಾವನೆಯನ್ನು ಖರ್ಚು ಮಾಡದೆ ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿ ಒಟ್ಟು ಆರು ಸಾವಿರದಷ್ಟನ್ನು ಸಂಗ್ರಹಿಸಿದ್ದ. ಇದೀಗ ಅ ಮೊತ್ತದಲ್ಲಿ ಐದು ಸಾವಿರದಷ್ಟನ್ನು ಇದೀಗ ಸೈನಿಕರ ಕುಟುಂಬಕ್ಕೆ ನೀಡುವ ಮೂಲಕ ಎಂಟನೆಯ ತರಗತಿಯ ಈ ಪೋರ ಅನೇಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ್ದಾನೆ
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ಹಿಂದಿನಿಂದಲೂ ತನ್ನ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ, ರಾಷ್ಟ್ರ ಭಕ್ತಿ. ರಾಷ್ಟ್ರೀಯ ವಿಚಾರಧಾರೆ ಬಿತ್ತುವುದರಲ್ಲಿ ಎತ್ತಿದ ಕೈ. ದೇಶ ಕಾಯುವ ಸೈನಿಕರ ಬಗ್ಗೆ ಈ ವಿದ್ಯಾಸಂಸ್ಥೆಗೆ ಎಲ್ಲಿಲ್ಲದ ಮಮಕಾರ. ಹೀಗಾಗಿ ಇಲ್ಲಿ ಮೃತ ಸೈನಿಕರ ಕುಟುಂಬಕ್ಕೆ ಆರ್ಥಿಕ ಸಹಾಯಹಸ್ತ ಚಾಚುವ ಅಭಿಯಾನ ನಿರಂತರವಾಗಿ ನಡೆಯುತ್ತಿರುತ್ತದೆ. ಈಗಾಗಾಲೇ ಹಲವಾರು ವಿದ್ಯಾರ್ಥಿಗಳು ತಮ್ಮದಾದ ಕೊಡುಗೆಗಳನ್ನು ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಸೈನಿಕ ಕುಟುಂಬಗಳಿಗೆ ಒದಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಎಂಟನೆಯ ತರಗತಿಯ ಶ್ರೀಕೃಷ್ಣ ದೊಡ್ಡ ಮೊತ್ತವನ್ನು ಒದಗಿಸಿಕೊಟ್ಟಿರುವುದು ಮತ್ತು ಅದು ತನ್ನ ಸ್ವಂತ ದುಡಿಮೆಯ ಹಣ ಎಂಬುದು ಗಮನಾರ್ಹ ವಿಚಾರ.

ಶ್ರೀಕೃಷ್ಣ ಎಸ್ ನಟ್ಟೋಜ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಪುತ್ರ.
‘ಕ್ಯಾಮರಾ ನಿರ್ವಹಣೆ, ತಾಂತ್ರಿಕ ಸಂಗತಿಗಳಲ್ಲಿ ನನಗೆ ಅತೀವ ಆಸಕ್ತಿಯಿದೆ. ಹಾಗಾಗಿ ಆನ್‍ಲೈನ್ ತರಗತಿಯ ಸಂದರ್ಭದಲ್ಲಿ ಕ್ಯಾಮರಾ ಹಾಗೂ ಅದಕ್ಕೆ ಸಂಬಂಧಿಸಿದ ತಾಂತ್ರಿಕ ವಿಚಾರಗಳಲ್ಲಿ ತೊಡಗಿಕೊಂಡು ತರಗತಿ ಸರಾಗವಾಗಿ ಮುಂದುವರಿಯುವಂತೆ ಸಹಕರಿಸಿದ್ದೇನೆ. ಅದಕ್ಕೆ ಸಂಬಂಧಿಸಿದಂತೆ ನನಗೆ ದೊರೆತ ಸಂಭಾವನೆಯನ್ನು ನಾನು ದೇಶಕ್ಕಾಗಿ ಸಮರ್ಪಿಸಬೇಕೆಂದು ಬಯಸಿದ್ದೇನೆ. ನನ್ನ ಸಂಪಾದನೆ ಸಾರ್ಥಕ ಕಾರ್ಯಕ್ಕೆ ವಿನಿಯೋಗವಾಗುತ್ತಿದೆ ಎಂಬ ಖುಷಿ ನನಗಿದೆ.ʼ
ಶ್ರೀಕೃಷ್ಣ ಎಸ್ ನಟ್ಟೋಜ, ವಿದ್ಯಾರ್ಥಿ, ಅಂಬಿಕಾ ವಿದ್ಯಾಲಯ
–
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು14 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್21 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ19 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ20 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ19 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಅಂತರ ರಾಜ್ಯ13 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ20 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ19 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















