ಕಾರ್ಯಕ್ರಮಗಳು
Puttur-ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಪುತ್ತೂರಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ; ಸೈನಿಕದೇವೋಭವ ಎನ್ನುವುದು ನಮ್ಮ ಸಂಕಲ್ಪವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ
ಪುತ್ತೂರು ತಾಲೂಕಿನಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಇವರ ಮಾರ್ಗದರ್ಶನದಲ್ಲಿ 4ನೇ ಬಾರಿಗೆ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯನ್ನು ಪುತ್ತೂರಿನ ಕಿಲ್ಲೆ ಮೈದಾನಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಜುಲೈ 26ರಂದು ಆಚರಿಸಲಾಯಿತು.
ಪುತ್ತೂರು ತಾಲೂಕಿನಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಇವರ ಮಾರ್ಗದರ್ಶನದಲ್ಲಿ 4ನೇ ಬಾರಿಗೆ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯನ್ನು ಪುತ್ತೂರಿನ ಕಿಲ್ಲೆ ಮೈದಾನಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಜುಲೈ 26ರಂದು ಆಚರಿಸಲಾಯಿತು.

ಮುಂಜಾನೆ 5.00ಕ್ಕೆ ಆರಂಭವಾದ ಕಾರ್ಯಕ್ರಮದಲ್ಲಿ ದಿಕ್ಸೂಚಿ ಮಾತುಗಾರರಾಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಮತ್ತು ನಮ್ಮ ಸಮಿತಿಯ ಲೆಕ್ಕ ಪತ್ರ ಪ್ರಮುಖರಾದ ದಯಾನಂದರವರು ಕಾರ್ಗಿಲ್ ಯುದ್ಧದ ಹಿನ್ನೆಲೆ, ಅದರ ಮಹತ್ವ, ಕಾರ್ಗಿಲ್ ಯುದ್ಧದಲ್ಲಿ ನಡೆದ ಘಟನೆಗಳು ಹಾಗೂ ಅಮರ ಜ್ಯೋತಿಯ ಕುರಿತು ಅನೇಕ ಮಾಹಿತಿಗಳನ್ನು ನಮಗೆ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ತಿಳಿಸಿಕೊಟ್ಟರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜಯವರು ಮಾತನಾಡಿ, ತಮ್ಮ ನಿನ್ನೆಗಳನ್ನ ನಮಗೆ ಧಾರೆ ಎರೆದ ವೀರ ಯೋಧರಿಗೆ ನಮನ ಸಲ್ಲಿಸುವ ಸಲುವಾಗಿ ರಾಷ್ಟ್ರ ಪ್ರೇಮದ ತ್ಯಾಗದ ಬಗ್ಗೆ ಹೃದಯ ತಟ್ಟುವಂತೆ ವಿವರಿಸಿದರು. ನಾವು ಸಾಮಾನ್ಯವಾಗಿ ಪಿತೃ ಋಣ , ಮಾತೃ ಋಣ ಎಂಬ ಮಾತುಗಳನ್ನು ಕೇಳುತ್ತಾ ಇರುತ್ತೇವೆ. ಆದರೆ ಇವೆಲ್ಲಕ್ಕಿಂತ ಮೊದಲು ನಮ್ಮ ದೇಶವನ್ನು ಕಾಪಾಡುವ ಸೈನಿಕರ ಋಣವನ್ನು ನಾವು ಮರೆಯಲೇಬಾರದು. ಗಡಿಯಲ್ಲಿ ಸೈನಿಕರು ಎಚ್ಚರದಿಂದ ನಿಂತಿರುವುದರಿಂದ ನಾವು ನಮ್ಮ ಮನೆಗಳಲ್ಲಿ ನೆಮ್ಮದಿಯಾಗಿ ಬದುಕಲು, ನಿದ್ರೆ ಮಾಡಲು ಮತ್ತು ನಮ್ಮ ಜೀವನವನ್ನು ನಡೆಸಲು ಸಾಧ್ಯವಾಗಿದೆ. ಆದ್ದರಿಂದ ನಮ್ಮ ಮೇಲೆ ಸೈನಿಕರ ಋಣ ಅಪಾರವಾಗಿದೆ. ಸೈನಿಕರ ನೆನಪಿಗಾಗಿ ಪ್ರತಿದಿನ ಬೆಳಗುವ ಜ್ಯೋತಿ ಕೇವಲ ಒಂದು ಬೆಳಕು ಅಲ್ಲ. ಅದು ನಮ್ಮ ವೀರಯೋಧರ ತ್ಯಾಗವನ್ನು ಸದಾ ನೆನಪಿಸುವ ಕೃತಜ್ಞತೆಯ ಜ್ಯೋತಿ. ರಾಷ್ಟ್ರದೇವೋಭವ, ಅತಿಥಿದೇವೋಭವ, ಮಾತೃದೇವೋಭವ, ಪಿತೃ ದೇವೋಭವ ಅನ್ನುತ್ತೇವೆ ಆದರೆ ಸೈನಿಕರ ಈ ತ್ಯಾಗಕ್ಕಾಗಿ ಅವರಿಗೆ ಸೈನಿಕದೇವೋಭವ ಎಂದು ಹೇಳಬೇಕಾದುದು ನಮ್ಮ ಸಂಕಲ್ಪವಾಗಬೇಕು ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ತಾಲೂಕು ವಿಸ್ತರಣಾ ಪ್ರಮುಖರಾದ ಪುಷ್ಪರಾಜ್ ಇವರು ಮಾತನಾಡಿ ಎಸ್‌ಪಿವೈಎಸ್‌ಎಸ್ ಸಮಿತಿಯ ಧ್ಯೇಯೋದ್ದೇಶದ ಬಗ್ಗೆ ತಿಳಿಸುತ್ತಾ, ಹಿಮಾವೃತವಾದ ಪ್ರದೇಶದಲ್ಲಿ ತಮ್ಮ ಹೆಂಡತಿ ಮಕ್ಕಳು ಹಾಗೂ ಕುಟುಂಬವನ್ನು ಬಿಟ್ಟು ದೇಶದ ರಕ್ಷಣೆ ತಮ್ಮ ಮೊದಲ ಕರ್ತವ್ಯವೆಂದು ಭಾವಿಸಿ, ಸೈನಿಕರು ಹೋರಾಡಿದ ತ್ಯಾಗ ಮತ್ತು ಸೇವೆಯ ಕುರಿತು ಮಾತನಾಡುತ್ತಾ ನಮ್ಮ ಪ್ರೀತಿ ಪಾತ್ರವನ್ನು ಬಿಟ್ಟು ಪ್ರಾಣದ ಹಂಗನ್ನೂ ತೊರೆದು ದೇಶಕ್ಕಾಗಿ ಹೋರಾಡುವ ಸೈನಿಕರ ತ್ಯಾಗವನ್ನು ನಾವು ಎಷ್ಟು ಗೌರವಿಸಿದರೂ ಕಡಿಮೆಯೇ ಎಂದರು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ನಿವೃತ್ತ ಯೋಧರಾದ ಸುಂದರಗೌಡ, ಕೆ.ಎಸ್.ಲಿಂಗಪ್ಪ, ಪುರಂದರ ಗೌಡ, ಉದನೇಶ್ವರ ಪ್ರಸಾದ್, ಚಂದ್ರಶೇಖರ ಗೌಡ ಅರಿಯಡ್ಕ, ಚಂಚಲಾಕ್ಷ ಬಿ, ಮತ್ತು ಜಯಂತ ಬೇಕಲ್ ಇವರುಗಳನ್ನು ದೇವಣ್ಣ, ತುಕಾರಾಮ, ಸಂತೋಷ್, ಸುಂದರ, ಪ್ರಭಾಕರ, ಪ್ರಕಾಶ್ ಅಣ್ಣಡ್ಕ, ಜ್ಞಾನೇಶ್ ಇವರು ಶಾಲು, ಹೂವು ಹಣ್ಣು, ಸ್ಮರಣಿಕೆಯೊಂದಿಗೆ ಗೌರವಪೂರ್ವಕವಾಗಿ ಸನ್ಮಾನಿಸಿದರು. ತದನಂತರ ಅತಿಥಿಗಳಿಂದ ಹಾಗೂ ಯೋಗಬಂಧುಗಳಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ವಿನಯಾ ಪೈ ಪ್ರಾರ್ಥಿಸಿ, ಸ್ವಾಗತವನ್ನು ಗಾಯತ್ರಿ ಇವರು ನೆರವೇರಿಸಿದರು. ಕಾರ್ಯಕ್ರಮದ ಸಂಚಾಲಕರಾದ ಮುರಳೀಧರ್ ನಾಯಕ್ ಇವರು ವಂದನಾರ್ಪಣೆಗೈದರು. ಕಾರ್ಯಕ್ರಮದ ನಿರೂಪಣೆಯನ್ನು ಯಶೋಧ ಇವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಪ್ರಮುಖರು, ತಾಲೂಕು ಪ್ರಮುಖರು, ಶಿಕ್ಷಕರು ಹಾಗೂ ಯೋಗ ಬಂಧುಗಳು ಉಪಸ್ಥಿತರಿದ್ದರು.

ಕಮಲ, ಕನಕ, ಉಷಾರವರು ಸುಶ್ರಾವ್ಯವಾಗಿ ದೇಶಭಕ್ತಿಗೀತೆ ಹಾಡಿದರು. ಶ್ರೀಮತಿ ಶೈಲಾ ರೈ ಮತ್ತು ಶ್ರೀಮತಿ ಚಂದ್ರಾವತಿ ವಂದೇ ಮಾತರಂ ಗೀತೆಯನ್ನು ಹಾಡಿದರು. ಎಲ್ಲಾ ವೀರ ಯೋಧರನ್ನು ಯೋಗ ಬಂಧುಗಳು ಪ್ರೀತಿಯಿಂದ ಬೀಳ್ಕೊಡುತ್ತಾ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ವಿಟ್ಲದ ಎಂಆರ್‌ಎಫ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.
ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.
ಅಶೋಕ್ ರೈಗೆ ವಿಶೇಷ ಸನ್ಮಾನ
ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.
ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.
ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.
-
ನಿಧನ ವಾರ್ತೆ12 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್17 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ17 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ16 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ17 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ15 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ17 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ11 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















